87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ: 'ಕಸಾಪ' ತಿಳಿಸಿದ ಕಾರಣವೇನು?
ಬೆಂಗಳೂರು, ಸೆಪ್ಟಂಬರ್ 14: ಸದಾ ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕನ್ನಡ-ಕನ್ನಡಿಗ-ಕರ್ನಾಟಕದ ಹಿತವನ್ನು ಕಾಪಾಡಿಕೊಳ್ಳುವ ಉದ್ದೇಶ ಹೊಂದಿದ 'ಕನ್ನಡ ಸಾಹಿತ್ಯ ಪರಿಷತ್ತು' ಕನ್ನಡ ನಾಡಿನಲ್ಲಿ ಈ ಬಾರಿ ಬರ ಫೋಷಣೆಯಾಗಿರುವ ಹಿನ್ನೆಲೆಯಲ್ಲಿ, ಅದ್ಧೂರಿತನದ ಸಮ್ಮೇಳನಗಳಿಗೆ ಕಡಿವಾಣಹಾಕಲು ತಿರ್ಮಾನಿಸಿದೆ.
ಇದರ ಭಾಗವಾಗಿ ಸಕ್ಕರೆ ನಾಡು ಮಂಡ್ಯದಲ್ಲಿ 'ಕನ್ನಡ ಸಾಹಿತ್ಯ ಪರಿಷತ್ತು' ನಡೆಸಲು ಉದ್ದೇಶಿಸಲಾಗಿದ್ದ '87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಬರಗಾಲ ಹಿನ್ನೆಲೆ ಮುಂದಕ್ಕೆ ಹಾಕಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿಯವರು ಅಧಿಕೃತ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಬರಗಾಲ ಛಾಯೆ ಆವರಿಸಿದೆ. ರೈತ ಸಂಕಟದಲ್ಲಿರುವಾಗ ಸಂತಸ ಆಚರಿಸುವ ಸಮ್ಮೇಳನಕ್ಕೆ ಅರ್ಥವೇ ಇಲ್ಲ. ʻಅನ್ನ ಇದ್ದಾಗ ಸಂತಸ, ಸಂತಸ ಇದ್ದಾಗ ಸಂಭ್ರಮ, ಸಂಭ್ರಮ ಇದ್ದಾಗ ಸಾಹಿತ್ಯʼ ಎನ್ನುವುದನ್ನು ನಾವು ಅರಿತುಕೊಂಡು ಈ ಬಾರಿ ಮಂಡ್ಯದಲ್ಲಿ 2024 ಜನವರಿಯಲ್ಲಿ ನಡೆಯಬೇಕಿದ್ದ 87ನೇಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗುತ್ತಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೆ ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭೂಮಿ ನೀರಿಲ್ಲದೆ ಬಾಯ್ದೆರೆದುಕೊಂಡಿದೆ. ಇಂತಹ ಸಂದರ್ಭದಲ್ಲಿ ಕನ್ನಡದ ಅಕ್ಷರ ಜಾತ್ರೆಯನ್ನು ನಡೆಸುವುದು ಸಮರ್ಪಕವಲ್ಲ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆಸಲು ಉದ್ದೇಶಿಸಿದ್ದ ಅಕ್ಷರ ಜಾತ್ರೆಯನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದರು.
ಹಂಪಿ ಉತ್ಸವ ನಿರ್ಧಾರ ಸ್ವಾಗತಾರ್ಹ
ವಿಶ್ವವಿಖ್ಯಾತ ಹಂಪಿ ಉತ್ಸವನ್ನು ರಾಜ್ಯ ಸರ್ಕಾರ 2014ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಿದೆ. ಈ ಸರ್ಕಾರದ ತಿರ್ಮಾನವನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸುತ್ತದೆ. ರಾಜ್ಯದ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಸರಿಯಲ್ಲ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸರ್ಕಾರವೂ ವ್ಯಕ್ತಪಡಿಸಿದೆ ಎಂದು ಅವರು ತಿಳಿಸಿದರು.












Click it and Unblock the Notifications