• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಕೊರೊನಾ ವೈರಸ್ ಸ್ಪೋಟ

By Lekhaka
|

ರಾಮನಗರ, ಜುಲೈ 31: ರಾಮನಗರ ಜಿಲ್ಲೆಯಲ್ಲಿ ಇಂದು 88 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಇಂದು ಕೊರೊನಾ ವೈರಸ್ ಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಕನಕಪುರ ತಾಲ್ಲೂಕಿನ 55 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇದರಿಂದ ರಾಮನಗರ ಜಿಲ್ಲೆಯಲ್ಲಿ ಮೃತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಒಟ್ಟು ಸಂಖ್ಯೆ 1086 ಕ್ಕೆ ಏರಿಕೆ ಕಂಡಿದೆ. ಸದ್ಯ 542 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಚಿಕ್ಕಮಗಳೂರಲ್ಲಿ 125, ರಾಮನಗರದಲ್ಲಿ 98 ಕೊರೊನಾ ಪ್ರಕರಣ ಪತ್ತೆ

ಚನ್ನಪಟ್ಟಣ ತಾಲ್ಲೂಕಿನಲ್ಲಿ 10 ಪ್ರಕರಣ, ಮಾಗಡಿ ತಾಲ್ಲೂಕಿನಲ್ಲಿ 2 ಪ್ರಕರಣ, ಕನಕಪುರ ತಾಲ್ಲೂಕಿನಲ್ಲಿ 2, ರಾಮನಗರ ತಾಲ್ಲೂಕಿನಲ್ಲಿ 74 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇವರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿದೆ. ಇಂದು 8 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 527 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ.

ಕಾಫಿನಾಡಲ್ಲಿ ಇಂದು 74 ಜನರಲ್ಲಿ ಸೋಂಕು ದೃಢ

ಕಾಫಿನಾಡು ಚಿಕ್ಕಮಗಳೂರಲ್ಲಿ ಇಂದು ಒಂದೇ ದಿನ 74 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 990 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗದ ಪೊಲೀಸರಿಗೆ ಕಂಟಕವಾದ ಕೊರೊನಾ ಸೋಂಕು

ಚಿಕ್ಕಮಗಳೂರು 28, ಕಡೂರು 16, ತರೀಕೆರೆ 17, ಅಜ್ಜಂಪುರ-ಕೊಪ್ಪ 4, ಶೃಂಗೇರಿ-ಎನ್.ಆರ್ ಪುರ 2, ಮೂಡಿಗೆರೆಯಲ್ಲಿ 1 ಕೊರೊನಾ ಕೇಸ್ ದಾಖಲಾಗಿವೆ. ಈವರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 21 ಜನ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 434 ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಸದ್ಯ 529 ಸಕ್ರಿಯ ಪ್ರಕರಣಗಳಿವೆ.

ಚಿತ್ರದುರ್ಗದಲ್ಲಿ 36 ಜನರಿಗೆ ಕೋವಿಡ್ ಸೋಂಕು ದೃಢ: ಒಬ್ಬರು ಮೃತ

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ ಮತ್ತೆ 36 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 661 ಕ್ಕೆ ಏರಿಕೆಯಾದಂತಾಗಿದೆ. ಅಲ್ಲದೆ ಒಬ್ಬರು ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 10, ಹೊಳಲ್ಕೆರೆ-02, ಹಿರಿಯೂರು-07, ಚಳ್ಳಕೆರೆ-07, ಹೊಸದುರ್ಗ-07 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 03 ಸೇರಿದಂತೆ ಒಟ್ಟು 36 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇಂದು ಒಟ್ಟು 472 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.

English summary
88 new cases of Covid positive have been detected in Ramanagar district and one person has died of coronavirus in the district today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X