900 ಟನ್ ಬೆಂಗಳೂರಿನಲ್ಲಿ ಪ್ರತಿದಿನ ಉತ್ಪಾದನೆಯಾಗುವ ಕಸ, ಪ್ಲಾಸ್ಟಿಕ್ ಬಳಕೆ ಹೆಚ್ಚಳ!
ಪ್ಲಾಸ್ಟಿಕ್ ಬಳಕೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇನ್ನು ಬೆಂಗಳೂರು ಒಂದರಲ್ಲೇ ದಿನವೊಂದಕ್ಕೆ 900 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. 1.50 ಕೋಟಿ ಜನಸಂಖ್ಯೆಯನ್ನು ಬೆಂಗಳೂರು ಹೊಂದಿದೆ. ಜನಸಂಖ್ಯೆ ಬೆಳೆದಷ್ಟು ಪರಿಸರದ ಮೇಲೆ ಹಾನಿ ಉಂಟಾಗುತ್ತಿದೆ. ದೇಶ ಜನಸಂಖ್ಯೆಯಲ್ಲಿ ನಂಬರ್ ಒನ್ ಆಗಿದೆ. ಜನಸಂಖ್ಯೆಯ ನಿಯಂತ್ರಣದ ಜೊತೆಗೆ ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ "ವಿಶ್ವ ಪರಿಸರ ದಿನಾಚರಣೆ - 2025" ನ್ನು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ಪರಿಸರ ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ. ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ "ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ" ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನರು ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಅಂತ ಅವರು ಹೇಳಿದ್ದಾರೆ.
ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇಂದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು.
ಭೂಮಿಯಲ್ಲಿ ರಾಸಾಯನಿಕ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಇದನ್ನು ಹೀಗೇ ಬಿಟ್ಟರೆ ಕರ್ನಾಟಕ ಮುಂದೆ ಮರುಭೂಮಿಯಾಗಲಿದೆ. ಅದಕ್ಕಾಗಿ ನಾವು ಈಗಲೇ ಎಚ್ಚರಿಕೆ ವಹಿಸಲೇಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ನಾವಿಂದು ಪ್ಲಾಸ್ಟಿಕ್ ಗೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕು. ಪುನರ್ಬಳಕೆ ಮತ್ತು ಮರುಬಳಕೆ ಪ್ರೋತ್ಸಾಹಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಲ್ಲಿಸೋಣ, ಸಾರ್ವಜನಿಕ ಸಾರಿಗೆ ಉಪಯೋಗಿಸೋಣ, ಹತ್ತಿರದ ಸ್ಥಳಗಳಿಗೆ ನಡೆದು ಹೋಗುವ ಅಥವಾ ಸೈಕಲ್ ಬಳಕೆ ಮಾಡೋಣ, ಹನಿ ಹನಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳೋಣ, ನೀರನ್ನು ಪೋಲು ಮಾಡದೇ ಜವಾಬ್ದಾರಿಯುತವಾಗಿ ಬಳಸೋಣ. ಸಾಧ್ಯವಾದ ಮಟ್ಟಿಗೆ ಇದು ಪ್ರತಿಯೊಬ್ಬರ ಕರ್ತವ್ಯ ಎಂದು ಅರಿತು 'ನನ್ನ ಜೀವ ನನ್ನ ಮರ' ಎಂದು ಗಿಡ ಮರಗಳನ್ನು ನೆಟ್ಟು ಬೆಳೆಸೋಣ ಎಂದಿದ್ದಾರೆ.
ಬಿಬಿಎಂಪಿ ಅಭಿಯಾನ: ಇನ್ನು ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವಿಶೇಷ ಅಭಿಯಾನವನ್ನು ಪ್ರಾರಂಭಿಸಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications