ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

9,000 ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿಲ್ಲ: KEAಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 01: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ರಾಜ್ಯದಲ್ಲಿ 8 ಸಾವಿರ ವೈದ್ಯಕೀಯ ಸೀಟುಗಳು ಹಂಚಿಕೆಗೆ ಲಭ್ಯವಿದೆ. ಇದರಲ್ಲಿ ಈಗಾಗಲೇ 6 ಸಾವಿರ ಸೀಟುಗಳ ಹಂಚಿಕೆ ಆಗಿದ್ದು, ಯಾರಿಗೂ ಅನ್ಯಾಯವಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಸೀಟಿ ಹಂಚಿಕೆಯ ಅಭ್ಯರ್ಥಿಗಳೆಲ್ಲ ಪ್ರವೇಶ ಸಹ ಪಡೆದುಕೊಂಡಿದ್ದಾರೆ. ಈ ಮಧ್ಯೆ ಕೇಳಿ ಬಂದ 9 ಸಾವಿರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂಬುದೆಲ್ಲ ಆಧಾರ ರಹಿತವಾದದ್ದು ಎಂದು ತಿಳಿಸಿದ್ದಾರೆ.

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್

ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರ ಕೇವಲ 106 ಅಭ್ಯರ್ಥಿಗಳು ಮಾತ್ರ ವೈದ್ಯಕೀಯ ಸೀಟನ್ನು ರದ್ದುಗೊಳಿಸಲಾಯಿತು. ಇವರಲ್ಲಿ 18 ಮಂದಿಯು ತಾವು ಮೊದಲ ಸುತ್ತಿನಲ್ಲಿ ಪಡೆದುಕೊಂಡಿದ್ದ ಎಂಜಿನಿಯರಿಂಗ್‌ ಸೀಟುಗಳನ್ನು ಮರಳಿ ಬಯಸಿದ್ದಾರೆ.

9000 Students have not been treated unfairly in Medical seat Allotment KEA Clarify

ಪಾರದರ್ಶಕವಾಗಿ ಸೀಟು ಹಂಚಿಕೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಪ್ರಕಾರ, ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಅದರಲ್ಲಿರುವ 'ಆಯ್ಕೆ-2'ನ್ನು ಆರಿಸಿಕೊಂಡು, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ವಿಭಾಗಗಳು ಎರಡರಲ್ಲೂ ಪಾಲ್ಗೊಳ್ಳಬಹುದು. ಆದರೆ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಯಾವುದೇ ಒಂದು ವಿಭಾಗದ ಸೀಟನ್ನು ಆಖೈರುಗೊಳಿಸಬೇಕಾಗುತ್ತದೆ. ಇಂತಹ ಅಭ್ಯರ್ಥಿಗಳಿಗೆ ಅಖಿಲ ಭಾರತ ಮಟ್ಟದ ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟಿನ ಆದೇಶದ ಪ್ರಕಾರ ಅವಕಾಶ ಇರುವುದಿಲ್ಲ ಎಂದು ಅವರು ವಿವರಿಸಿದರು.

ಇದುವರೆಗೆ ವಿದ್ಯಾರ್ಥಿಗಳು ನೀಡಿರುವ ಆಯ್ಕೆ ಪಟ್ಟಿಯ ಅನುಸಾರವೇ ವೈದ್ಯಕೀಯ ಸೀಟುಗಳ ಹಂಚಿಕೆ ಪಾರದರ್ಶಕವಾಗಿ ನಡೆದಿದೆ. ಆದರೆ ಕೆಲವರು ಶುಲ್ಕ ದುಬಾರಿ ಎಂಬ ಕಾರಣಕ್ಕೆ ಈ ಸೀಟುಗಳನ್ನು ಹಿಂದಿರುಗಿಸಿದ್ದಾರೆ. ಇಷ್ಟರ ನಡುವೆಯೂ ಮೆರಿಟ್‌ ಮತ್ತು ಮೀಸಲಾತಿ ಅನ್ವಯ ಆಗಿರುವ ಸೀಟು ಹಂಚಿಕೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪಾತ್ರವೇನೂ ಇಲ್ಲ.

ಇನ್ನೂ ಎರಡನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಸಿಕ್ಕಿದರೆ ಅಂತಹ ಅಭ್ಯರ್ಥಿಗಳಿಗೆ ಮೊದಲ ಸುತ್ತಿನಲ್ಲಿ ಹಂಚಿಕೆಯಾಗಿದ್ದ ಎಂಜಿನಿಯರಿಂಗ್ ಸೀಟು ತಾನಾಗಿಯೇ ರದ್ದಾಗುತ್ತದೆ ಎಂದರು.

9000 Students have not been treated unfairly in Medical seat Allotment KEA Clarify

ಎಂಸಿಸಿ ವೇಳಾಪಟ್ಟಿಗೆ ತಕ್ಕಂತೆ ವೈದ್ಯಕೀಯ ಸೀಟುಗಳ ಹಂಚಿಕೆ ಮತ್ತು ಎಐಸಿಟಿಇ ವೇಳಾಪಟ್ಟಿಗೆ ತಕ್ಕಂತೆ ಎಂಜಿನಿಯರಿಂಗ್ ಸೀಟುಗಳ ಹಂಚಿಕೆ ಪ್ರಕ್ರಿಯೆ ನಡೆಯುತ್ತದೆ. ಇದನ್ನು ಬದಲಿಸುವ ಅಧಿಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಇಲ್ಲ. ಆದರೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ, ಈ ಬಾರಿ ನವೆಂಬರ್ 30ರವರೆಗೂ ಕಾಲಾವಕಾಶ ಪಡೆದುಕೊಳ್ಳಲಾಗಿತ್ತು ಎಂದು ರಮ್ಯ ಸ್ಪಷ್ಟಪಡಿಸಿದ್ದಾರೆ.

English summary
9000 Students have not been treated unfairly in Medical seat Allotment Karnataka Examination Authority (KEA) Clarified,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X