ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆ: 921 ಮಂದಿಗೆ ಸೋಂಕು
ಬೆಂಗಳೂರು, ಮಾರ್ಚ್ 13: ರಾಜ್ಯಾದ್ಯಂತ ಒಂದೆಡೆ ಕೊರೊನಾ ಸೋಂಕಿಗೆ ಲಸಿಕೆ ನೀಡಲಾಗುತ್ತಿದ್ದರೆ, ಇನ್ನೊಂದೆಡೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.
ರಾಜ್ಯದಲ್ಲಿ ಇಂದು 921 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಓರ್ವ ಮೃತಪಟ್ಟಿದ್ದಾರೆ. 992 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
8042 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 12,387 ಮಂದಿ ಮೃತಪಟ್ಟಿದ್ದಾರೆ. 938890 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಒಟ್ಟು 959338 ಪ್ರಕರಣಗಳಿವೆ, 123 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆ 02, ಬಳ್ಳಾರಿ 4, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 630, ಬೀದರ್ 15, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 43, ದಾವಣಗೆರೆ 5, ಧಾರವಾಡ 10, ಗದಗ 4, ಹಾಸನ 11, ಕಲಬುರಗಿ 35, ಕೊಡಗು 5, ಕೋಲಾರ 3, ಮಂಡ್ಯ 3, ಮೈಸೂರು 47, ರಾಯಚೂರು 1, ಶಿವಮೊಗ್ಗ 7, ತುಮಕೂರು 38, ಉಡುಪಿ 13, ಉತ್ತರ ಕನ್ನಡ 5, ವಿಜಯಪುರ 8, ಯಾದಗಿರಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications