ಕರ್ನಾಟಕದಲ್ಲಿ 101537 ಕೊರೊನಾವೈರಸ್ ಸಕ್ರಿಯ ಪ್ರಕರಣ

ಬೆಂಗಳೂರು, ಸಪ್ಟೆಂಬರ್.10: ರಾಜ್ಯದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಪ್ರತಿನಿತ್ಯ 9 ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲೇ ಕರ್ನಾಟಕದಲ್ಲಿ 9217 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕರ್ನಾಟಕದದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 129 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 6937ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟು ಸಂಖ್ಯೆ 430947ಕ್ಕೆ ಏರಿಕೆಯಾಗಿದ್ದು, ಈ ಪೈಕಿ 322454 ಸೋಂಕಿತರು ಗುಣಮುಖರಾಗಿದ್ದಾರೆ. 101537 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 7021 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

9217 New Coronavirus Cases Reported in Karnataka Today, State Tally Rise to 430947


ರಾಜ್ಯದಲ್ಲಿ ಎಷ್ಟು ಮಂದಿಗೆ ಕೊರೊನಾವೈರಸ್ ತಪಾಸಣೆ?

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ರಾಜ್ಯದಲ್ಲಿ ಒಂದೇ ದಿನ 25468 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 29241 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 54709 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 35,86,150 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:

ರಾಜ್ಯದಲ್ಲಿ ಒಟ್ಟು 9217 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 77, ಬಳ್ಳಾರಿ 375, ಬೆಳಗಾವಿ 263, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು 3161, ಬೀದರ್ 98, ಚಾಮರಾಜನಗರ 62, ಚಿಕ್ಕಬಳ್ಳಾಪುರ 167, ಚಿಕ್ಕಮಗಳೂರು 111, ಚಿತ್ರದುರ್ಗ 142, ದಕ್ಷಿಣ ಕನ್ನಡ 350, ದಾವಣಗೆರೆ 297, ಧಾರವಾಡ 264, ಗದಗ 180, ಹಾಸನ 218, ಹಾವೇರಿ 190, ಕಲಬುರಗಿ 243, ಕೊಡಗು 61, ಕೋಲಾರ 104, ಕೊಪ್ಪಳ 139, ಮಂಡ್ಯ 249, ಮೈಸೂರು 635, ರಾಯಚೂರು 107, ರಾಮನಗರ 126, ಶಿವಮೊಗ್ಗ 549, ತುಮಕೂರು 365, ಉಡುಪಿ 227, ಉತ್ತರ ಕನ್ನಡ 214, ವಿಜಯಪುರ 63, ಯಾದಗಿರಿ 103 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+