ಕರ್ನಾಟಕದಲ್ಲಿ 9,280 ಹೊಸ ಕೋವಿಡ್ ಪ್ರಕರಣ ದಾಖಲು
ಬೆಂಗಳೂರು, ಸೆಪ್ಟೆಂಬರ್ 04: ಕರ್ನಾಟಕದಲ್ಲಿ ಶುಕ್ರವಾರ 9,280 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,79,486ಕ್ಕೆ ಏರಿಕೆಯಾಗಿದೆ.
Recommended Video
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಇಂದು 116 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 99,101.
ರಾಜ್ಯದಲ್ಲಿ ಇಂದು 6161 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ 2,74,196. 785 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ 116 ಜನರು ಕರ್ನಾಟಕದಲ್ಲಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 6170ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ : ಬೆಂಗಳೂರು ನಗರದಲ್ಲಿ ಶುಕ್ರವಾರ 2963 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 1,41,664ಕ್ಕೆ ಏರಿಕೆಯಾಗಿದೆ. ನಗರದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 41,646ಕ್ಕೆ ಏರಿಕೆಯಾಗಿದೆ. ಇದುವರೆಗೂ ನಗರದಲ್ಲಿ 2091 ಜನರು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ 206, ಚಿಕ್ಕಮಗಳೂರು 223, ಬಳ್ಳಾರಿ 447, ಬೆಳಗಾವಿ 278, ಬೆಂಗಳೂರು ಗ್ರಾಮಾಂತರ 204, ದಕ್ಷಿಣ ಕನ್ನಡ 428, ದಾವಣಗೆರೆ 263, ಧಾರವಾಡ 297 ಹೊಸ ಕೋವಿಡ್ ಪ್ರಕರಣಗಳು ಶುಕ್ರವಾರ ದಾಖಲಾಗಿವೆ.












Click it and Unblock the Notifications