• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ಭಾನುವಾರ 9319 ಮಂದಿಗೆ ಕೊವಿಡ್-19 ಪಾಸಿಟಿವ್

|

ಬೆಂಗಳೂರು, ಸಪ್ಟೆಂಬರ್.06: ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 398551ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 9319 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

      Coronaಗೆ ಜನರು ಹಿಂದೆ ಕೊಡುತ್ತಿದ್ದ ಮರ್ಯಾದೆ ಈಗ ಕೊಡುತ್ತಿಲ್ಲ | Oneindia Kannada

      ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

      ಕರ್ನಾಟಕದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 95 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 6393ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

      ಕೋವಿಡ್ ಸೋಂಕಿತರ ಸಂಖ್ಯೆ; ದಾಖಲೆ ಬರೆದ ಭಾರತ

      ಕೊರೊನಾವೈರಸ್ ಒಟ್ಟು 335928 ಸೋಂಕಿತ ಪ್ರಕರಣಗಳ ಪೈಕಿ 292873 ಸೋಂಕಿತರು ಗುಣಮುಖರಾಗಿದ್ದಾರೆ. 99266 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 9575 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

      ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

      ಕರ್ನಾಟಕದಲ್ಲಿ ಎಷ್ಟು ಮಂದಿಗೆ ಕೊವಿಡ್ ಟೆಸ್ಟ್?:

      ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 35073 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 39311 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 74384 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 33,48,255 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

      ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

      ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:

      ರಾಜ್ಯದಲ್ಲಿ ಒಟ್ಟು 9319 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 180, ಬಳ್ಳಾರಿ 396, ಬೆಳಗಾವಿ 427, ಬೆಂಗಳೂರು ಗ್ರಾಮಾಂತರ 93, ಬೆಂಗಳೂರು 2824, ಬೀದರ್ 83, ಚಾಮರಾಜನಗರ 41, ಚಿಕ್ಕಬಳ್ಳಾಪುರ 81, ಚಿಕ್ಕಮಗಳೂರು 239, ಚಿತ್ರದುರ್ಗ 261, ದಕ್ಷಿಣ ಕನ್ನಡ 326, ದಾವಣಗೆರೆ 221, ಧಾರವಾಡ 311, ಗದಗ 194, ಹಾಸನ 324, ಹಾವೇರಿ 295, ಕಲಬುರಗಿ 165, ಕೊಡಗು 38, ಕೋಲಾರ 119, ಕೊಪ್ಪಳ 198, ಮಂಡ್ಯ 230, ಮೈಸೂರು 686, ರಾಯಚೂರು 187, ರಾಮನಗರ 68, ಶಿವಮೊಗ್ಗ 329, ತುಮಕೂರು 304, ಉಡುಪಿ 217, ಉತ್ತರ ಕನ್ನಡ 247, ವಿಜಯಪುರ 96, ಯಾದಗಿರಿ 139 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

      English summary
      9319 New Coronavirus Cases Reported in Karnataka Today, State Tally Rise to 398551.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X