• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿತ್ರದುರ್ಗ, ರಾಮನಗರ ಜಿಲ್ಲೆಯಲ್ಲಿ ತಲಾ 94 ಜನರಿಗೆ ಕೊರೊನಾ ಸೋಂಕು

By Lekhaka
|

ಚಿತ್ರದುರ್ಗ, ಸೆಪ್ಟೆಂಬರ್ 9: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 94 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,159ಕ್ಕೆ ಏರಿಕೆಯಾದಂತಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 35, ಚಳ್ಳಕೆರೆ 11, ಹಿರಿಯೂರು 16, ಹೊಸದುರ್ಗ 18 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 14 ಸೇರಿದಂತೆ ಒಟ್ಟು 94 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್ ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 271 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಚಿತ್ರದುರ್ಗ; ಆನ್ ಲೈನ್ ನಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಉದ್ಘಾಟಿಸಿದ ಸಿಎಂಚಿತ್ರದುರ್ಗ; ಆನ್ ಲೈನ್ ನಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಉದ್ಘಾಟಿಸಿದ ಸಿಎಂ

ಒಟ್ಟು 769 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಇದುವರೆಗೆ 35 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 2,784 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,340 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲೆಯಲ್ಲಿ ಒಟ್ಟು 832 ಕಂಟೈನ್ಮೆಂಟ್ ವಲಯಗಳಿದ್ದು, ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 31,978 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 45,571 ಜನರ ಮಾದರಿ ಸಂಗ್ರಹಿಸಲಾಗಿದ್ದು, 39,270 ಜನರ ವರದಿ ನೆಗೆಟೀವ್ ಬಂದಿದೆ.

ಉಳಿದ 1,700 ಜನರ ವರದಿ ಬರುವುದು ಬಾಕಿ ಇದ್ದು, 442 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಇಂದು 94 ಕೊರೊನಾ ಕೇಸ್ ದೃಢ

ರಾಮನಗರ ಜಿಲ್ಲೆಯಲ್ಲಿ ಇಂದು 94 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 4128ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತದ ಹೆಲ್ತ್ ಬುಲೆಟಿನ್ ವರದಿಯಲ್ಲಿ ತಿಳಿದುಬಂದಿದೆ. ಚನ್ನಪಟ್ಟಣ ತಾಲ್ಲೂಕಿನಲ್ಲಿ-19, ಮಾಗಡಿ ತಾಲ್ಲೂಕಿನಲ್ಲಿ-12, ಕನಕಪುರ ತಾಲ್ಲೂಕಿನಲ್ಲಿ-18, ರಾಮನಗರ ತಾಲ್ಲೂಕಿನಲ್ಲಿ-45 ಪಾಸಿಟಿವ್ ಕೇಸ್ ದೃಢಪಟ್ಟಿವೆ.

ಇಂದು ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಒಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 52ಕ್ಕೆ ಏರಿಕೆ ಕಂಡಿದೆ. ಸೋಂಕಿತರನ್ನು ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು 81 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

   ShivSena ಕಾಟದಿಂದ ಹೊರ ಬರ್ತಾಳಾ Kangana? | Oneindia Kannada

   ಜಿಲ್ಲೆಯಲ್ಲಿ ಈವರೆಗೆ ಒಟ್ಟು 3121 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 955 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

   English summary
   Today's report on the Covid-19 virus in Chitradurga district has confirmed that 94 people have been infected, which has increased to 4,159 Cases.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X