ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 24 ಗಂಟೆಗಳಲ್ಲೇ 9464 ಜನರಿಗೆ ಕೊವಿಡ್-19 ಪಾಸಿಟಿವ್

|
Google Oneindia Kannada News

ಬೆಂಗಳೂರು, ಸಪ್ಟೆಂಬರ್.11: ಕರ್ನಾಟಕದಲ್ಲಿ ಕೊರೊನಾವೈರಸ್ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 440411ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 9464 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಒಂದೇ ದಿನ ಮಹಾಮಾರಿಗೆ 130 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 7067ಕ್ಕೆ ಏರಿಕೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಭಾರತದಲ್ಲಿ 45 ಲಕ್ಷದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ ಭಾರತದಲ್ಲಿ 45 ಲಕ್ಷದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟು ಸಂಖ್ಯೆ 440411ಕ್ಕೆ ಏರಿಕೆಯಾಗಿದ್ದು, ಈ ಪೈಕಿ 334999 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 12454 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ 98326 ಸಕ್ರಿಯ ಪ್ರಕರಣಗಳಿವೆ.

9464 New Coronavirus Cases Reported in Karnataka Today, State Tally Rise to 440411


ರಾಜ್ಯದಲ್ಲಿ ಎಷ್ಟು ಮಂದಿಗೆ ಕೊರೊನಾವೈರಸ್ ತಪಾಸಣೆ?

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ರಾಜ್ಯದಲ್ಲಿ ಒಂದೇ ದಿನ 28350 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 36319 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 64669 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 36,50,819 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:

ರಾಜ್ಯದಲ್ಲಿ ಒಟ್ಟು 9464 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 188, ಬಳ್ಳಾರಿ 382, ಬೆಳಗಾವಿ 244, ಬೆಂಗಳೂರು ಗ್ರಾಮಾಂತರ 146, ಬೆಂಗಳೂರು 3426, ಬೀದರ್ 61, ಚಾಮರಾಜನಗರ 45, ಚಿಕ್ಕಬಳ್ಳಾಪುರ 131, ಚಿಕ್ಕಮಗಳೂರು 89, ಚಿತ್ರದುರ್ಗ 247, ದಕ್ಷಿಣ ಕನ್ನಡ 446, ದಾವಣಗೆರೆ 297, ಧಾರವಾಡ 203, ಗದಗ 195, ಹಾಸನ 305, ಹಾವೇರಿ 240, ಕಲಬುರಗಿ 261, ಕೊಡಗು 18, ಕೋಲಾರ 70, ಕೊಪ್ಪಳ 171, ಮಂಡ್ಯ 131, ಮೈಸೂರು 676, ರಾಯಚೂರು 200, ರಾಮನಗರ 76, ಶಿವಮೊಗ್ಗ 349, ತುಮಕೂರು 395, ಉಡುಪಿ 168, ಉತ್ತರ ಕನ್ನಡ 114, ವಿಜಯಪುರ 92, ಯಾದಗಿರಿ 98 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

ಪೋಷಕರಿಗೆ ಸಿಹಿ ಸುದ್ದಿ ಕೊಟ್ಟ BJP government | Oneindia Kannada

English summary
9464 New Coronavirus Cases Reported in Karnataka Today, State Tally Rise to 440411.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X