2014 ರಿಂದ ದಾಖಲಾದ ಒಟ್ಟು ಇ.ಡಿ ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು: ಸಿದ್ದರಾಮಯ್ಯ
ಬೆಂಗಳೂರು, ಫೆಬ್ರವರಿ 02: ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, @BJP4India ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ.
— Siddaramaiah (@siddaramaiah) February 2, 2024
ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ… pic.twitter.com/jV4lNgLLCs
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, 2014 ರಿಂದ ದಾಖಲಾದ ಒಟ್ಟು ಇ.ಡಿ ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶದ ಸಾರ್ವಭೌಮತೆ ಇರಬೇಕು. ಆದರೆ ರಾಜ್ಯಗಳಿಗೆ ಅವರ ಪಾಲು ಕೊಡಬೇಕು. ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಗಳ ಪಾಲನ್ನು ಕೊಡುತ್ತಿಲ್ಲ. ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು, ಪ್ರಯೋಜನ ಆಗಿಲ್ಲ. ನಮ್ಮಿಂದ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು. ಇದಕ್ಕಾಗಿ ರಾಜ್ಯಗಳ ಪಾಲನ್ನು ಚಾಚೂ ತಪ್ಪದೆ ಕೊಡಬೇಕು.
ಬಿಜೆಪಿ ಆಳ್ವಿಕೆಯ ಈ ''ವಿನಾಶಕಾರಿ ಭಾರತ''ದಲ್ಲಿ ದೇಶದ ಎಲ್ಲ ಜಾತಿ-ಧರ್ಮಗಳ ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ವಿಶೇಷವಾಗಿ ದಲಿತ ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ದಮನಕ್ಕೀಡಾಗಿದ್ದಾರೆ, ಅವರ ಸಾಮಾಜಿಕ ಮತ್ತು ಆರ್ಥಿಕ ಬದುಕು ಅಧ:ಪತನಗೊಂಡಿದೆ. ಈ ದೃಷ್ಟಿಯಲ್ಲಿ ನಾವಿಂದು ಪ್ರಜಾಪ್ರಭುತ್ವದ ''ಅಮೃತ ಕಾಲ''ದಲ್ಲಿ ಇಲ್ಲ, ''ಮೃತ ಕಾಲ''ದಲ್ಲಿದ್ದೇವೆ.
ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ , ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ. ಬಜೆಟ್ ನ 47 ಲಕ್ಷ ಕೋಟಿ ರೂ.ಗಳಲ್ಲಿ 16,85494 ಕೋಟಿ ರೂ ಸಾಲ ಮಾಡಿದ್ದಾರೆ. ಬೆಳೆ ಪರಿಹಾರವನ್ನು ಬಜೆಟ್ ನಲ್ಲಿ ಹೇಳಿಲ್ಲ. ಎಂ.ಎಸ್.ಪಿ ಗೆ ಕೆಲವು ಬೆಳೆಗಳನ್ನು ಮಾತ್ರ ಸೇರಿಸಿದ್ದಾರೆ. ರೈತರ ಎಲ್ಲಾ ಬೆಳೆಗಳು ಎಂ.ಎಸ್.ಪಿ ಅಡಿ ಬರಬೇಕು. ಇದರ ಬಗ್ಗೆ ಏನನ್ನೂ ಬಜೆಟ್ ನಲ್ಲಿ ಹೇಳಿಲ್ಲ. ತೆರಿಗೆಯನ್ನು ಕಾರ್ಪೊರೇಟ್ ಗಳ ಮೇಲಿನ ಪ್ರಮಾಣ ಶೇ 30ಕ್ಕೆ ಇಳಿಸಿ ಉಳಿದ ಭಾರವನ್ನು ಬಡವರು, ಮಧ್ಯಮ ವರ್ಗದವರ ಮೇಲೆ ಹೇರಿದ್ದಾರೆ ಮತ್ತು ಹೆಚ್ಚಿಸಿದ್ದಾರೆ.

2004 -14 ರವರೆಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆಗ ಬೆಳವಣಿಗೆ ದರ 13.79 % ಇತ್ತು. ಈಗ ಬಜೆಟ್ ಬೆಳವಣಿಗೆ 9.6 % ಕ್ಕೆ ಕುಸಿತ ಕಂಡಿದೆ. ವಿಕಸಿತ ಎಂದು ಹೇಳಿಕೊಂಡು 9.6% ಗೆ ತಂದಿದ್ದಾರೆ. 4.19 % ಕಡಿಮೆಯಾಗಿದೆ. ಜಿ.ಡಿ.ಪಿ ಬೆಳವಣಿಗೆ ಯುಪಿಎ ಸರ್ಕಾರದಲ್ಲಿ ಶೇ 11.14 % ಇತ್ತು ಎನ್.ಡಿ.ಎ ಕಾಲದಲ್ಲಿ 6.4% ಕ್ಕೆ ಕುಸಿತವಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಅನುದಾನ ಬಂದಿಲ್ಲ. 15ನೇ ಹಣಕಾಸು, ಫೆರಿಫೆರಲ್ ರಿಂಗ್ ರೋಡಿಗೆ ಹಣ ಬಂದಿಲ್ಲ. ₹5,300 ಕೋಟಿ ಭದ್ರ ಮೇಲ್ದಂಡೆ ಯೋಜನೆಗೆ ಬಂದಿಲ್ಲ. ಬರಗಾಲದ ಪರಿಹಾರಕ್ಕೂ ಒಂದು ಪೈಸೆ ಬಂದಿಲ್ಲ ಎಂದು ಹೇಳಿದರು.












Click it and Unblock the Notifications