ಕರ್ನಾಟಕದಲ್ಲಿ 24 ಗಂಟೆಗಳಲ್ಲೇ 9540 ಜನರಿಗೆ ಕೊವಿಡ್-19 ಸೋಂಕು

ಬೆಂಗಳೂರು, ಸಪ್ಟೆಂಬರ್.09: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 9540 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 128 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 6808ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟು ಸಂಖ್ಯೆ 412190ಕ್ಕೆ ಏರಿಕೆಯಾಗಿದ್ದು, ಈ ಪೈಕಿ 315433 ಸೋಂಕಿತರು ಗುಣಮುಖರಾಗಿದ್ದಾರೆ. 99470 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 6860 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

9540 New Coronavirus Cases Reported in Karnataka Today, State Tally Rise to 421730


ರಾಜ್ಯದಲ್ಲಿ ಎಷ್ಟು ಮಂದಿಗೆ ಕೊರೊನಾವೈರಸ್ ತಪಾಸಣೆ?

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ರಾಜ್ಯದಲ್ಲಿ ಒಂದೇ ದಿನ 34264 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 36058 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 70322 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 35,31,441 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:

ರಾಜ್ಯದಲ್ಲಿ ಒಟ್ಟು 9540 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 219, ಬಳ್ಳಾರಿ 559, ಬೆಳಗಾವಿ 390, ಬೆಂಗಳೂರು ಗ್ರಾಮಾಂತರ 79, ಬೆಂಗಳೂರು 3419, ಬೀದರ್ 59, ಚಾಮರಾಜನಗರ 60, ಚಿಕ್ಕಬಳ್ಳಾಪುರ 141, ಚಿಕ್ಕಮಗಳೂರು 73, ಚಿತ್ರದುರ್ಗ 94, ದಕ್ಷಿಣ ಕನ್ನಡ 310, ದಾವಣಗೆರೆ 255, ಧಾರವಾಡ 226, ಗದಗ 155, ಹಾಸನ 270, ಹಾವೇರಿ 169, ಕಲಬುರಗಿ 241, ಕೊಡಗು 60, ಕೋಲಾರ 97, ಕೊಪ್ಪಳ 150, ಮಂಡ್ಯ 224, ಮೈಸೂರು 500, ರಾಯಚೂರು 214, ರಾಮನಗರ 109, ಶಿವಮೊಗ್ಗ 555, ತುಮಕೂರು 242, ಉಡುಪಿ 258, ಉತ್ತರ ಕನ್ನಡ 260, ವಿಜಯಪುರ 57, ಯಾದಗಿರಿ 95 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+