ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಕೇವಲ 958 ಕೊರೊನಾ ಸೋಂಕಿತರು ಪತ್ತೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 23: ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ, 958 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಟ್ಟು 912340 ಕೊರೊನಾ ಸೋಂಕಿತರಿದ್ದಾರೆ, 13,736 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನ 1206 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 886547 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.

ರೂಪಾಂತರಿ ಕೊರೊನಾ ವೈರಸ್: ಜನವರಿ 1ರಿಂದ ಶಾಲೆ ಆರಂಭವೋ? ಇಲ್ಲವೋ?ರೂಪಾಂತರಿ ಕೊರೊನಾ ವೈರಸ್: ಜನವರಿ 1ರಿಂದ ಶಾಲೆ ಆರಂಭವೋ? ಇಲ್ಲವೋ?

ಒಟ್ಟು 12038 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ. ಐಸಿಯುನಲ್ಲಿ 217 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಾಗಲಕೋಟೆ 1, ಬಳ್ಳಾರಿ 20, ಬೆಳಗಾವಿ 22, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 550, ಬೀದರ್ 08, ಚಾಮರಾಜನಗರ 06, ಚಿಕ್ಕಬಳ್ಳಾಪುರ 07, ಚಿಕ್ಕಮಗಳೂರು 07, ಚಿತ್ರದುರ್ಗ 18, ದಕ್ಷಿಣ ಕನ್ನಡ 14, ದಾವಣಗೆರೆ 07, ಧಾರವಾಡ 12, ಗದಗ 08, ಹಾಸನ26, ಹಾವೇರಿ 02, ಕಲಬುರಗಿ 18, ಕೊಡಗು 01, ಕೋಲಾರ 14, ಕೊಪ್ಪಳ 05, ಮಂಡ್ಯ 15, ಮೈಸೂರು 43, ರಾಯಚೂರು 07, ರಾಮನಗರ 08, ಶಿವಮೊಗ್ಗ 13, ತುಮಕೂರು50, ಉಡುಪಿ 08, ಉತ್ತರ ಕನ್ನಡ 13, ವಿಜಯಪುರ 17, ಯಾದಗಿರಿಯಲ್ಲಿ 02 ಪ್ರಕರಣಗಳು ದಾಖಲಾಗಿವೆ.

958 New COVID Cases Reported in Karnataka On December 23

ಕೊವಿಡ್‌-19 ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆ ಕುರಿತು ಬಿಬಿಎಂಪಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಚರ್ಚ್‌, ದೇವಸ್ಥಾನ, ಮಸೀದಿ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಹಬ್ಬದ ಆಚರಣೆ ಸಂದರ್ಭದಲ್ಲಿ ಜನರು ಹಸ್ತಲಾಘವ ಮತ್ತು ಆಲಿಂಗನದಿಂದ ದೂರವಿರಬೇಕು. ಡಿ.30ರಿಂದ 2021ರ ಜ.2ರವರೆಗೆ ಕ್ಲಬ್‌, ಪಬ್, ರೆಸ್ಟೋರೆಂಟ್‌ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಿಕೆ, ವಿಶೇಷ ಡಿಜೆ, ನೃತ್ಯ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿಗಳನ್ನು ನಿಷೇಧಿಸಲಾಗಿದೆ. ಆದರೆ, ಕ್ಲಬ್‌, ಪಬ್‌, ರೆಸ್ಟೋರೆಂಟ್‌ಗಳು ಎಂದಿನಂತೆ ತೆರೆದಿರಲಿದೆ ಎಂದು ಬಿಬಿಎಂಪಿ ಆದೇಶದಲ್ಲಿ ತಿಳಿಸಿದೆ.

ಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆಮನೆಮನೆ ಮಾತಾದ ಗೋಲ್ಡ್ ವಿನ್ನರ್‌ನಿಂದ ಎಲ್ಡಿಯಾ ಶುದ್ಧ ಕೊಬ್ಬರಿ ಎಣ್ಣೆ

ಈ ಸಂದರ್ಭದಲ್ಲಿ 65 ವರ್ಷದ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರಗಳನ್ನು ಕಾಯ್ದುಕೊಳ್ಳುವುದು ಕಡ್ಡಾಯ. ಹೋಟೆಲ್‌, ಮಾಲ್‌, ಪಬ್‌, ರೆಸ್ಟೋರೆಂಟ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ.

Recommended Video

ಅಭ್ಯಾಸ ಪಂದ್ಯದಲ್ಲಿ ಅಬ್ಬರದ ಶತಕ ಬಾರಿಸಿದ SuryaKumar Yadav | Oneindia Kannada

English summary
958 new COVID cases reported in Karnataka and 08 people died on December 23. State total tally raised to 912340 with 13,736 active cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X