Breaking: ಕರ್ನಾಟಕದಲ್ಲಿ ಒಂದೇ ದಿನ 968 ಮಂದಿಗೆ ಕೊರೊನಾ ವೈರಸ್!

ಬೆಂಗಳೂರು, ಜೂನ್ 28: ಕರ್ನಾಟಕದಿಂದ ಕೊರೊನಾ ವೈರಸ್ ಸೋಂಕಿನ ಹಾವಳಿ ಮಿತಿ ಮೀರುತ್ತಿದೆ. ಕೋವಿಡ್-19 ಸೋಂಕಿತರ ಪಾಸಿಟಿವಿಟಿ ದರ 5.44ಕ್ಕೆ ಏರಿಕೆಯಾಗಿದ್ದು, ಕಳೆದೊಂದು ವಾರದಲ್ಲಿನ ಪಾಸಿಟಿವಿಟಿ ದರವು ಶೇ.3.69ರಷ್ಟಾಗಿದೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 968 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಒಬ್ಬರು ಸೋಂಕಿನಿಂದ ಪ್ರಾಣ ಬಿಟ್ಟಿದ್ದರೆ, 337 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 3966420 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 3921387 ಸೋಂಕಿತರು ಗುಣಮುಖರಾಗಿದ್ದು, 40,073 ಜನರು ಕೋವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 4918 ಸಕ್ರಿಯ ಪ್ರಕರಣಗಳಿವೆ.

968 COVID-19 Cases Reported in Single Day in Karnataka

ಬೆಂಗಳೂರಿನಲ್ಲೇ 887 ಮಂದಿಗೆ ಕೊರೊನಾ ವೈರಸ್: ಕರ್ನಾಟಕದಲ್ಲಿ 968 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದ್ದರೆ, ಅದರಲ್ಲಿ 887 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ವರದಿಯಾಗಿವೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1801302ಕ್ಕೆ ಏರಿಕೆಯಾಗಿದೆ. ಇದುವರೆಗೂ 1779652 ಸೋಂಕಿತರು ಗುಣಮುಖರಾಗಿದ್ದರೆ, 16967 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೋವಿಡ್-19 ಅಪಾಯ ಇನ್ನೂ ಕಡಿಮೆಯಾಗಿಲ್ಲ ಎನ್ನುವ ಸಂದೇಶ ರವಾನೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+