ಕರ್ನಾಟಕ: ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ
ಬೆಂಗಳೂರು, ಆಗಸ್ಟ್ 30: ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದ್ದು, ಹಲವು ದಿನಗಳ ಬಳಿಕ ಹೊಸ ಪ್ರಕರಣಗಳು ಮೂರಂಕಿಗೆ ಕುಸಿದಿರುವುದು ರಾಜ್ಯದ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಕೋವಿಡ್-19 ಸೋಂಕು ಹರಡುವಿಕೆ ಶೇಕಡಾವಾರು ಪ್ರಮಾಣ ಶೇ.0.64 ಮತ್ತು ಮರಣ ಪ್ರಮಾಣ ಶೇ.1.54ಕ್ಕೆ ಇಳಿಕೆಯಾಗಿದೆ. ಇಂದು ಒಟ್ಟು 1,51,219 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂಖ್ಯೆ ಕಳೆದ ಎರಡು ದಿನಗಳಿಗಿಂತ ಕಡಿಮೆಯಾಗಿದೆ.
ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 973 ಜನರಿಗೆ ಕೊರೊನಾ ಸೋಂಕು ದೃಢಪಟ್ಟುದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 28,92,517 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 15 ಜನರು ಸಾವನ್ನಪ್ಪಿದ್ದು, ಅದರಂತೆ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,293 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇನ್ನೂ 18,392 ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 264 ಜನರಿಗೆ ಕೊವಿಡ್- 19 ಸೋಂಕು ದೃಢಪಟ್ಟಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 12,37,550ಕ್ಕೆ ಏರಿಕೆಯಾಗಿದೆ.
12,37,550 ಸೋಂಕಿತರ ಪೈಕಿ 12,14,220 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ ನಗರದಲ್ಲಿ ಕೊರೊನಾದಿಂದ ಈವರೆಗೆ ಒಟ್ಟು 15,986 ಜನ ಸೋಂಕಿತರ ಸಾವು ಸಂಭವಿಸಿದೆ. ಬೆಂಗಳೂರಿನಲ್ಲಿ 7,343 ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳಿವೆ.
ಜಿಲ್ಲಾವಾರು ಕೊರೊನಾ ಪ್ರಕರಣ
ಬಾಗಲಕೋಟೆ ಜಿಲ್ಲೆಯಲ್ಲಿ 0 ಪ್ರಕರಣ, ಬಳ್ಳಾರಿ ಜಿಲ್ಲೆಯಲ್ಲಿ 4 ಪ್ರಕರಣ, ಬೆಳಗಾವಿ ಜಿಲ್ಲೆಯಲ್ಲಿ 18 ಪ್ರಕರಣ, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 264, ಬೀದರ್ 0, ಚಾಮರಾಜನಗರ 9, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 10 ಪ್ರಕರಣಗಳು ದೃಢಪಟ್ಟಿವೆ.
ಇನ್ನು ದಕ್ಷಿಣ ಕನ್ನಡ 193, ದಾವಣಗೆರೆ 5, ಧಾರವಾಡ 6, ಗದಗ 1, ಹಾಸನ 74, ಹಾವೇರಿ 1, ಕಲಬುರಗಿ 1, ಕೊಡಗು 42, ಕೋಲಾರ 38, ಕೊಪ್ಪಳ 2, ಮಂಡ್ಯ 10, ಮೈಸೂರು 73, ರಾಯಚೂರು 0, ರಾಮನಗರ 4, ಶಿವಮೊಗ್ಗ 38, ತುಮಕೂರು 21, ಉಡುಪಿ 98, ಉತ್ತರ ಕನ್ನಡ 39, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್- 19 ಪ್ರಕರಣಗಳು ವರದಿಯಾಗಿವೆ.
Recommended Video
ಕೊರೊನಾದಿಂದ ಸಾವನ್ನಪ್ಪಿದವರು
ಗಡಿ ಜಿಲ್ಲೆ ಬೆಳಗಾವಿ, ರಾಜಧಾನಿ ಬೆಂಗಳೂರು ನಗರ ಹಾಗೂ ಕರಾವಳಿಯ ಉಡುಪಿ ಜಿಲ್ಲೆಗಳಲ್ಲಿ ಕೊರೊನಾದಿಂದ ತಲಾ 3 ಮಂದಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ತಲಾ 1 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ.












Click it and Unblock the Notifications