Breaking: ಕರ್ನಾಟಕದಲ್ಲಿ ಒಂದೇ ದಿನ 975 ಮಂದಿಗೆ ಕೊರೊನಾ ವೈರಸ್!
ಬೆಂಗಳೂರು, ಜುಲೈ 02: ಕರ್ನಾಟಕದಿಂದ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಕಡಿಮೆಯಾಗುತ್ತಿವೆ ಎನ್ನುವ ಲೆಕ್ಕಾಚಾರವೆಲ್ಲ ಸುಳ್ಳು ಎನ್ನುವಂತಹ ಅಂಕಿ-ಅಂಶಗಳು ಪ್ರತಿನಿತ್ಯ ಹೊರ ಬೀಳುತ್ತಿವೆ.
ಶುಕ್ರವಾರ ರಾಜ್ಯದಲ್ಲಿ 1073 ಮಂದಿಗೆ ಕೊವಿಡ್019 ಸೋಂಕು ತಗುಲಿದ್ದರೆ, ಶನಿವಾರ ಬಿಡುಗಡೆ ಆಗಿರುವ ಅಂಕಿ-ಅಂಶಗಳಲ್ಲಿ ಒಂದೇ ದಿನ 975 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಪಾಸಿಟಿವಿಟಿ ಪ್ರಮಾಣವು ಶೇ.3.74ರಷ್ಟಾಗಿದೆ. ಅದೇ ರೀತಿ ಏಳು ದಿನಗಳಲ್ಲಿ ಪಾಸಿಟಿವಿಟಿ ಪ್ರಮಾಣವು ಶೇ.3.68ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೋವಿಡ್-19 ಅಂಕಿ-ಸಂಖ್ಯೆ:
ಕಳೆದ 24 ಗಂಟೆಗಳಲ್ಲೇ 975 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 668 ಸೋಂಕಿತರು ಗುಣಮುಖರಾಗಿದ್ದು, ಒಂದು ಸಾವಿನ ಪ್ರಕರಣ ವರದಿಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 3971459 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 3924900 ಸೋಂಕಿತರು ಗುಣಮುಖರಾಗಿದ್ದು, 40,077 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 6440 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿಗರೇ ಎಚ್ಚರ ಎಚ್ಚರ:
ಕರ್ನಾಟಕದಲ್ಲಿ 975 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದ್ದರೆ, ಅದರಲ್ಲಿ 871 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ವರದಿಯಾಗಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1805970ಕ್ಕೆ ಏರಿಕೆಯಾಗಿದೆ. ಇದುವರೆಗೂ 1782925 ಸೋಂಕಿತರು ಗುಣಮುಖರಾಗಿದ್ದರೆ, 16969 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೋವಿಡ್-19 ಅಪಾಯ ಇನ್ನೂ ಕಡಿಮೆಯಾಗಿಲ್ಲ ಎನ್ನುವುದು ಖಾತ್ರಿಯಾಗುತ್ತಿದೆ.












Click it and Unblock the Notifications