ಕರ್ನಾಟಕದಲ್ಲಿ 9860 ಹೊಸ ಕೋವಿಡ್ ಪ್ರಕರಣ ದಾಖಲು
ಬೆಂಗಳೂರು, ಸೆಪ್ಟೆಂಬರ್ 02 : ಕರ್ನಾಟದಲ್ಲಿ 9860 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,61,341ಕ್ಕೆ ಏರಿಕೆಯಾಗಿದೆ.
Recommended Video
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇಂದು ರಾಜ್ಯದಲ್ಲಿ 113 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 94,459.

ಕರ್ನಾಟಕದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,61,341ಕ್ಕೆ ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ 6,287 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 751 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಇದುವರೆಗೂ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 5950ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಿಂದ ಇದುವರೆಗೂ 2,60,913 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು 3420 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,35,512. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 39,911.
ಬುಧವಾರ ಬಳ್ಳಾರಿ 433, ಬೆಳಗಾವಿ 470, ದಕ್ಷಿಣ ಕನ್ನಡ 414, ದಾವಣಗೆರೆ 321, ಧಾರವಾಡ 327, ಹಾಸನ 290, ಕೊಪ್ಫಳ 282 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.












Click it and Unblock the Notifications