ಕರ್ನಾಟಕದಲ್ಲಿ 24 ಗಂಟೆಗಳಲ್ಲೇ 9894 ಜನರಿಗೆ ಕೊವಿಡ್-19 ಪಾಸಿಟಿವ್!
ಬೆಂಗಳೂರು, ಸಪ್ಟೆಂಬರ್.13: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಪ್ರತಿನಿತ್ಯ 9 ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲೇ ಕರ್ನಾಟಕದಲ್ಲಿ 9894 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 104 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 7265ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಭಾರತದಲ್ಲಿ ಕೊವಿಡ್-19 ಸೋಂಕಿತರಿಗೆ ಆಕ್ಸಿಜನ್ ಕೊರತೆ ಆತಂಕ
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟು ಸಂಖ್ಯೆ 459445ಕ್ಕೆ ಏರಿಕೆಯಾಗಿದ್ದು, ಈ ಪೈಕಿ 352958 ಸೋಂಕಿತರು ಗುಣಮುಖರಾಗಿದ್ದಾರೆ. 99203 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 8402 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊರೊನಾವೈರಸ್ ತಪಾಸಣೆ?
ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ರಾಜ್ಯದಲ್ಲಿ ಒಂದೇ ದಿನ 31657 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 36298 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 67955 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 38,00,976 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.
Recommended Video
ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:
ರಾಜ್ಯದಲ್ಲಿ ಒಟ್ಟು 9894 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 165, ಬಳ್ಳಾರಿ 661, ಬೆಳಗಾವಿ 318, ಬೆಂಗಳೂರು ಗ್ರಾಮಾಂತರ 216, ಬೆಂಗಳೂರು 3479, ಬೀದರ್ 82, ಚಾಮರಾಜನಗರ 80, ಚಿಕ್ಕಬಳ್ಳಾಪುರ 85, ಚಿಕ್ಕಮಗಳೂರು 171, ಚಿತ್ರದುರ್ಗ 232, ದಕ್ಷಿಣ ಕನ್ನಡ 404, ದಾವಣಗೆರೆ 144, ಧಾರವಾಡ 199, ಗದಗ 198, ಹಾಸನ 426, ಹಾವೇರಿ 191, ಕಲಬುರಗಿ 214, ಕೊಡಗು 33, ಕೋಲಾರ 73, ಕೊಪ್ಪಳ 259, ಮಂಡ್ಯ 246, ಮೈಸೂರು 665, ರಾಯಚೂರು 190, ರಾಮನಗರ 38, ಶಿವಮೊಗ್ಗ 299, ತುಮಕೂರು 294, ಉಡುಪಿ 126, ಉತ್ತರ ಕನ್ನಡ 141, ವಿಜಯಪುರ 30, ಯಾದಗಿರಿ 235 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications