ಕರ್ನಾಟಕದಲ್ಲಿ ಪೂರ್ಣಪ್ರಮಾಣದ 9 ಮತ್ತು 11ನೇ ತರಗತಿ ಆರಂಭ

ಬೆಂಗಳೂರು, ಫೆಬ್ರವರಿ.01: ಕರ್ನಾಟಕದಲ್ಲಿ 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ತರಗತಿಗಳು ಫಬ್ರವರಿ.01 ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಳ್ಳಲಿವೆ. ಇದರ ಜೊತೆಗೆ 10 ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೂ ಕೂಡಾ ಪೂರ್ಣದಿನದ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗುತ್ತಿದ್ದಂತೆ ಕೊರೊನಾವೈರಸ್ ಮಾರ್ಗಸೂಚಿಗಳ ಮೇಲೆ ಹೆಚ್ಚು ನಿಗಾ ವಹಿಸಲಾಗಿದೆ. ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. 6 ರಿದಂ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದ ಅಡಿಯಲ್ಲಿ ಎರಡು ದಿನಗಳಿಗೊಮ್ಮ ತರಗತಿಗಳನ್ನು ನಡೆಸಲಾಗುತ್ತಿದೆ.

ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು, ಸಿಇಓ, ಡಿಡಿಪಿಐ, ಡಿಡಿಪಿಯು, ಬಿಇಓ ನೇತೃತ್ವದಲ್ಲಿ ಅಧಿಕಾರಿಗಳು ಕೊರೊನಾ ಮಾರ್ಗಸೂಚಿಗಳ ಪಾಲನೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು. ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

 9th Standard And 1st Puc Full Day Classes To Start From Feb 1

ಶಿಕ್ಷಣ ಇಲಾಖೆ ಸುತ್ತೋಲೆಯ ಪ್ರಮುಖ ಅಂಶಗಳು:

* ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ, ಪ್ರತಿವರ್ಷದಂತೆ ಶೇ.75ರಷ್ಟು ಹಾಜರಾತಿ ಕಡ್ಡಾಯ ಎಂಬ ನಿಯಮ ಈ ಬಾರಿ ಅನ್ವಯ ಆಗುವುದಿಲ್ಲ

* ಪ್ರತಿಯೊಬ್ಬ ವಿದ್ಯಾರ್ಥಿಯೂ ಪೋಷಕರಿಂದ ಒಪ್ಪಿಗೆ ಪ್ರಮಾಣಪತ್ರವನ್ನು ತೆಗೆದುಕೊಂಡು ಬರುವುದು ಕಡ್ಡಾಯ

* ತಮ್ಮ ಮಕ್ಕಳಲ್ಲಿ ಯಾವುದೇ ರೋಗದ ಲಕ್ಷಣಗಳು ಇಲ್ಲದ ಬಗ್ಗೆ ಪೋಷಕರು ಪ್ರಮಾಣಪತ್ರ ನೀಡಬೇಕು

* ಶಾಲೆಗೆ ಬರಲು ಒಪ್ಪದ ವಿದ್ಯಾರ್ಥಿಗಳಿಗೆ ಆನ್ ಲೈನ್ ಅಥವಾ ಪರ್ಯಾಯ ಮಾರ್ಗದಲ್ಲಿ ಶಿಕ್ಷಣ ನೀಡುವುದು

* ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಥರ್ಮಲ್ ಸ್ಕ್ಯಾನಿಂಗ್

* ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯ

* ಬಿಸಿಯೂಟ, ಕ್ಷೀರಭಾಗ್ಯ ಯೋಜನೆಗಳು ಚಾಲನೆಗೆ ಬಂದಿಲ್ಲ

* ವಿದ್ಯಾರ್ಥಿಗಳು ಪ್ರತಿನಿತ್ಯ ಮಧ್ಯಾಹ್ನ ಊಟವನ್ನು ಮನೆಗಳಿಂದಲೇ ತರವುದು ಕಡ್ಡಾಯ

* ಪ್ರತಿದಿನ ತರಗತಿ ಮುಕ್ತಾಯಗೊಂಡ ಬಳಿಕ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವುದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+