ಸಚಿವ ಡಿ.ಕೆ.ಶಿವಕುಮಾರ್‌ಗೆ ಬಿಗ್ ರಿಲೀಫ್‌ ನೀಡಿದ ಹೈಕೋರ್ಟ್

Recommended Video

      ಡಿ ಕೆ ಶಿವಕುಮಾರ್ ಗೆ ಹೈ ಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್ | Oneindia Kannada

      ಬೆಂಗಳೂರು, ಜುಲೈ 31 : ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆದಾಯ ತೆರಿಗೆ ಇಲಾಖೆ ಸಚಿವರ ವಿರುದ್ಧ ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ.

      ಸಚಿನ್ ನಾರಾಯಣನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠ ತಾಂತ್ರಿಕ ಕಾರಣಗಳಿಂದಾಗಿ ಆದಾಯ ತೆರಿಗೆ ಇಲಾಖೆ ದಾಖಲು ಮಾಡಿದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು.

      ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲರು, ಆದಾಯ ತೆರಿಗೆ ಇಲಾಖೆ ದೂರು ದಾಖಲು ಮಾಡಿಕೊಳ್ಳುವ ಮುನ್ನ ಪೂರ್ವಾನುಮತಿ ಪಡೆದಿಲ್ಲ. ನಿಯಮದಂತೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು, ಇಲ್ಲವಾದಲ್ಲಿ ಅದು ಕಾನೂನು ಬಾಹಿರವಾಗುತ್ತದೆ ಎಂದು ವಾದ ಮಂಡಿಸಿದರು.

      dk shiva kumar

      ಈ ಪ್ರಕರಣದಲ್ಲಿ ಉನ್ನತ ಶಿಕ್ಷಣ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಸಚಿನ್ ನಾರಾಯಣ್ 2ನೇ ಆರೋಪಿ.

      ಶರ್ಮಾ ಟ್ರಾವೆಲ್ಸ್‌ನ ಸುನೀಲ್ ಕುಮಾರ್ ಶರ್ಮಾ, ದೆಹಲಿ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ, ರಾಜೇಂದ್ರ ಇತರ ಆರೋಪಿಗಳಾಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+