'ನಾಯಿಗಳು & ಕನ್ನಡಿಗರಿಗೆ ಪ್ರವೇಶವಿಲ್ಲ..' ಸೂಪರ್ ಮಾರ್ಕೆಟ್‌ನ ಬೋರ್ಡ್ ವೈರಲ್
ಕನ್ನಡ ಹಾಗೂ ಕನ್ನಡಿಗರಿಗೆ ಅವಮಾನ ಮಾಡುವ, ಕೀಳಾಗಿ ಮಾತನಾಡುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದೆ. ಇದಕ್ಕೆ ಸೋಶಿಯಲ್ ಮೀಡಿಯಾಗಳೇ ವೇದಿಕೆಯಾಗಿದೆ. ಇಂತಹ ಘಟನೆಗಳು ಕನ್ನಡಿಗರನ್ನು ಕೆರಳಿಸುತ್ತಲೇ ಇದ್ದು, ಈಗ ಮತ್ತೊಂದು ಇಂತದ್ದೇ ಘಟನೆ ಮರುಕಳಿಸಿದೆ.
ಸೂಪರ್ ಮಾರ್ಕೆಟ್‌ವೊಂದರಲ್ಲಿ ಹಾಕಲಾಗಿದೆ ಎನ್ನಲಾದ ಫಲಕದಲ್ಲಿ ಕನ್ನಡಿಗರನ್ನು ಅವಮಾನಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಫಲಕದಲ್ಲಿ ನಾಯಿಗಳು ಹಾಗೂ ಕನ್ನಡಿಗರಿಗೆ ಪ್ರವೇಶವಿಲ್ಲ (Dogs & Kannadigas Not Allowed) ಎಂದು ಬರೆಯಲಾಗಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಆದರೆ, ಇದರ ಅಸಲಿಯತ್ತು ಇನ್ನೂ ಪತ್ತೆಯಾಗಿಲ್ಲ.

ಇದನ್ನು 'ಟೀಮ್ ಜಾತ್ ಅಫೀಶಿಯಲ್' ಎನ್ನುವ ಟ್ವಿಟರ್ ಅಕೌಂಟ್‌ನಿಂದ ಪೋಸ್ಟ್ ಮಾಡಲಾಗಿದೆ. ಈ ಫೋಟೋಗೆ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಬರೆಯಲಾಗಿದೆ. ಈ ಪೋಸ್ಟ್ ವೈರಲ್ ಆಗಿ, ಬಹುತೇಕ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಕನ್ನಡಿಗರನ್ನು ಇಷ್ಟು ಅವಮಾನ ಮಾಡುತ್ತಿರುವುದು ಯಾರು? ಈ ಸೂಪರ್ ಮಾರ್ಕೆಟ್ ಎಲ್ಲದೆ? ಎಂದೆಲ್ಲ ಹುಡುಕಾಡಿದ್ದಾರೆ. ಆದರೆ, ಎಲ್ಲಿಯೂ ಇದಕ್ಕೆ ಸ್ಪಷ್ಟ ಉತ್ತರ ಸಿಕ್ಕಿಲ್ಲ.
ಮತ್ತೊಂದೆಡೆ ಇದನ್ನು ಯಾರೋ ಎಡಿಟ್ ಮಾಡಿ ಈ ರೀತಿ ಕೃತ್ಯ ಎಸಗಿದ್ದಾರೆ ಎಂದೂ ಹೇಳಲಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳು ಜೋರಾಗಿವೆ. ಕೆಲವರು ಈ ಪೋಸ್ಟ್ ಸ್ಕ್ರೀನ್‌ಶಾಟ್‌ಗಳನ್ನು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಕೂಡ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಈ ಪೋಸ್ಟ್ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಟೀಮ್ ಜಾತ್ ಅಫೀಶಿಯಲ್, 'ನಾನು ಎಲ್ಲರಿಗೂ ಮತ್ತೊಮ್ಮೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತಿದ್ದೇನೆ. ಬೇರೊಬ್ಬರು ಇದನ್ನು 'ಆಜ್ ಡಿಮಾರ್ಟ್ ಮೆ ಯೇ ದಿಖಾ' ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದಾರೆ. ನಂತರ ನಾನು ಅದನ್ನು ಪೋಸ್ಟ್ ಮಾಡಿದ್ದೇನೆ. ಅಲ್ಲದೆ ಈ ಬಗ್ಗೆ ಸ್ಪಷ್ಟಪಡಿಸುವಂತೆ ನಾನು dmart ಅನ್ನು ಟ್ಯಾಗ್ ಮಾಡಿದ್ದೇನೆ' ಎಂದು ಸ್ಪಷ್ಟನೆ ನೀಡಿದ್ದಾರೆ.
'ಈ ಪೋಸ್ಟ್ ಆದ 5 ನಿಮಿಷಗಳಲ್ಲಿ ಇದು ನಕಲಿ ಎಂದು ನನಗೆ ಕೆಲವರು ಹೇಳಿದರು. ನಂತರ ನಾನು ಅದನ್ನು ಡಿಲೀಟ್ ಮಾಡಿದೆ. ಈ ಪೋಸ್ಟ್ ಸಂಬಂಧ ಎದ್ದಿರುವ ಆಕ್ರೋಶಕ್ಕೆ ನಾನು ಮೊದಲು ಕ್ಷಮೆಯಾಚಿಸುತ್ತಿದ್ದೇನೆ. ನನಗೆ ಎಕ್ಸ್‌ನಲ್ಲಿ ಅನೇಕ ಕನ್ನಡದ ಫಾಲೋವರ್ಸ್‌ಗಳನ್ನು ಹೊಂದಿದ್ದೇನೆ. ನನಗೆ ಪ್ರತಿಯೊಂದು ಭಾಷೆಯೂ ಮುಖ್ಯ' ಎಂದು ಕ್ಷಮೆಯಾಚಿಸಿದ್ದಾರೆ.
'ಈ ಮೂಲ ಚಿತ್ರವನ್ನು ನಾನು ಪೋಸ್ಟ್ ಮಾಡಿಲ್ಲ, editomemer ಅವರಿಂದ ಪೋಸ್ಟ್ ಮಾಡಲಾಗಿದೆ. ಅದನ್ನು ನಾನು ರೀಪೋಸ್ಟ್ ಮಾಡಿದ್ದೆ. ಈ ಗೊಂದಲಗಳು ಹಾಗೂ ತಪ್ಪು ತಿಳುವಳಿಕೆಗಾಗಿ ನಾನು ಕ್ಷಮೆಯಾಚಿಸುತ್ತೇನೆ. ಪೋಸ್ಟ್ ಮಾಡಿದ 5 ನಿಮಿಷಗಳಲ್ಲೇ ನಾನು ಅದನ್ನು ಡಿಲೀಟ್ ಮಾಡಿದ್ದೇನೆ. ಇದರಿಂದ ಯಾರ ಭಾವನೆಗೂ ಧಕ್ಕೆಯಾಗುವುದಿಲ್ಲ. ಯಾವುದೇ ಭಾಷೆಯನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ' ಎಂದು ಹೇಳಿದ್ದಾರೆ.
ಸದ್ಯ ಈ ಪೋಸ್ಟ್ ಬಗ್ಗೆ ಕನ್ನಡಿಗರು ಫುಲ್ ಗರಂ ಆಗಿದ್ದು, ಕನ್ನಡಿಗರನ್ನು ಅವಮಾನ ಮಾಡಿದಾಗ ಬಾರದ ಜನ ಮತ್ತು ಮಂತ್ರಿ ಯಾವ ಪಕ್ಷದವರು ಅನ್ನೋದು ನೋಡಿಕೊಂಡು ಕನ್ನಡಿಗರು ಎಚ್ಚರವಾಗಿರಿ ಎಂದೆಲ್ಲ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications