Greater Bangaluru: ಜಿಬಿಎ ಐದು ಪಾಲಿಕೆಗಳ ಆಯುಕ್ತರನ್ನಾಗಿ ಅಧಿಕಾರಿಗಳ ನೇಮಕ: ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆಪ್ಟೆಂಬರ್‌ 01: ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಮಾತನಾಡಿ, ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.

A decision has been taken to appoint commissioners to five corporations DK Shivakumar

ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಸ್ವರೂಪ ಕುರಿತ ಸಭೆಯ ಕುರಿತು ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಈ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಬೋವಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಇದರ ಬಗ್ಗೆ ನನಗೆ ತಿಳಿದಿಲ್ಲ. ಇದಕ್ಕೆ ಸಂಬಂಧಪಟ್ಟ ಸಚಿವರ ಬಳಿ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೇಳಿದರು.

ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ ಐಟಿ ರಚನೆ ಮಾಡಬೇಕು ಎಂದು ಹೇಳಿದವರು ಅವರೇ, ಇದನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿ ಎಂದೂ ಬಾಯಿಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+