ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಾಲಕರು

ಕಲಬುರಗಿ, ಡಿ. 20: ಇಲ್ಲಿಯ ಚಿಂಚೋಳಿ ತಾಲೂಕಿನ ಚಿಂದಿ ತಾಂಡಾದಲ್ಲಿ ಬಾಲಕಿಯೋರ್ವಳ ಮೇಲೆ ನಾಲ್ವರು ಬಾಲಕರು ಶನಿವಾರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಬಾಲಕಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಅಡ್ಡಬಂದ ಬಾಲಕರು ಆಕೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅಸ್ವಸ್ಥ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. [ಮಹಿಳೆಯ ಅಪಹರಣ, ಸಾಮೂಹಿಕ ಅತ್ಯಾಚಾರ]

ಅತ್ಯಾಚಾರ ಎಸಗಿದವರು ಕೂಡ 6ರಿಂದ 8ನೇ ತರಗತಿಯಲ್ಲಿ ಓದುತ್ತಿರುವ ಬಾಲಕರು. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. [ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ]

rape

ನವದೆಹಲಿಯಲ್ಲಿ ಮತ್ತೆ ಸಾಮೂಹಿಕ ಅತ್ಯಾಚಾರ

ಅತ್ಯಾಚಾರದ ರಾಜಧಾನಿ ಎನ್ನಿಸಿಕೊಂಡಿರುವ ನವದೆಹಲಿಯಲ್ಲಿ ಯುವತಿಯೋರ್ವಳ ಮೇಲೆ ಆಕೆಯ 18ನೇ ವರ್ಷದ ಹುಟ್ಟುಹಬ್ಬದ ದಿನದಂದೇ (ಶುಕ್ರವಾರ ರಾತ್ರಿ) ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ.

ನವದೆಹಲಿಯ ಆರ್‌.ಕೆ. ಪುರಂ ನಿವಾಸಿ ಯುವತಿಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಈ ಕುರಿತು ಯುವತಿ ಆರ್.ಕೆ. ಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಅತ್ಯಾಚಾರ ಎಸಗಿದ ಆರೋಪಿಗಳಿಬ್ಬರೂ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಆರೋಪಿಗಳಿಬ್ಬರೂ ಸಂತ್ರಸ್ತ ಯುವತಿಗೆ ಪ್ಲೇಸ್‌ಮೆಂಟ್‌ ಏಜನ್ಸಿಯೊಂದರ ಮೂಲಕ ಪರಿಚಿತರಾದವರು. ಯುವತಿಗೆ ಉತ್ತಮ ಉದ್ಯೋಗ ಕೊಡಿಸುವುದಾಗಿ ಇಬ್ಬರೂ ಭರವಸೆ ನೀಡಿದ್ದರು.

"ಅವರಿಬ್ಬರ ಮೇಲೆ ವಿಶ್ವಾಸವಿರಿಸಿದ್ದೆ. ಶುಕ್ರವಾರ ರಾತ್ರಿ ನನ್ನ ಹುಟ್ಟುಹಬ್ಬ ಆಚರಿಸಲು ಆರೋಪಿಗಳು ಬರಲು ಹೇಳಿದ್ದ ಜಾಗಕ್ಕೆ ಹೋಗಿದ್ದೆ. ಆಗ ಅವರು ನನ್ನನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ" ಎಂದು ದೂರಿನಲ್ಲಿ ಯುವತಿ ವಿವರಿಸಿದ್ದಾಳೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+