ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: B ಖಾತಾ ನಿವೇಶನಗಳ A ಖಾತೆ ಪರಿವರ್ತನೆಗೆ ಸರ್ಕಾರದ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯಾದ್ಯಂತ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿರುವ B ಖಾತಾ ನಿವೇಶನಗಳಿಗೆ A ಖಾತೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಜಾರಿಗೊಳಿಸಲಾಗುತ್ತಿರುವ B ಖಾತಾದಿಂದ A ಖಾತೆಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ರಾಜ್ಯದ ಇತರೆ ನಗರ ಪ್ರದೇಶಗಳಿಗೂ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.

ನಗರ ಪ್ರದೇಶಗಳ ಸ್ಥಳೀಯ ಯೋಜನಾ ಪ್ರದೇಶಗಳ ಒಳಗೆ ಅಥವಾ ಹೊರಗೆ ಇರುವ ಅರ್ಹ B ಖಾತಾ ನಿವೇಶನಗಳಿಗೂ A ಖಾತೆ ನೀಡುವ ವ್ಯವಸ್ಥೆ ಜಾರಿಗೆ ಬರಲಿದೆ. ಇದರಿಂದ ಹಲವು ವರ್ಷಗಳಿಂದ B ಖಾತೆಯಲ್ಲಿರುವ ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿಯನ್ನು ಕ್ರಮಬದ್ಧಗೊಳಿಸಿಕೊಳ್ಳಲು ಅವಕಾಶ ದೊರೆಯಲಿದೆ. ಆದರೆ, ಅನಧಿಕೃತ ನಿವೇಶನಗಳಿಗೆ ನಿಯಂತ್ರಣವಿಲ್ಲದೆ ಖಾತೆ ನೀಡುವುದನ್ನು ತಡೆಯಲು ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿದೆ. ಯಾವುದೇ ಖಾತೆಯೇ ಇಲ್ಲದ ನಿವೇಶನಗಳಿಗೆ ಹೊಸದಾಗಿ A ಖಾತೆ ನೀಡದಿರಲು ಸಚಿವ ಸಂಪುಟ ನಿರ್ಧರಿಸಿದೆ.

A-Khata Big Relief for Karnataka Property Owners B-Khata Plots to Get A-Khata Status Across Urban Areas

A ಖಾತೆ ಪಡೆಯಲು ಏನು ಮಾಡಬೇಕು?

B ಖಾತೆಯಲ್ಲಿರುವ ಆಸ್ತಿಯನ್ನು A ಖಾತೆಗೆ ಪರಿವರ್ತಿಸಲು ಮೊದಲು ಇದುವರೆಗಿನ ಎಲ್ಲ ಬಾಕಿ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸಬೇಕು. ಯಾವುದೇ ತೆರಿಗೆ ಬಾಕಿ ಉಳಿಸಿಕೊಂಡಿರಬಾರದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಸ್ತಿ ಮಾಲೀಕರು ಅಗತ್ಯ ದಾಖಲೆಗಳನ್ನು ಒದಗಿಸಬೇಕು. ಆಸ್ತಿಯ ಹಕ್ಕು ಪತ್ರ, ಆಸ್ತಿ ತೆರಿಗೆ ಪಾವತಿ ರಸೀದಿಗಳು, ಅನುಮೋದಿತ ಕಟ್ಟಡ ನಿರ್ಮಾಣ ನಕ್ಷೆ, ಅಗತ್ಯವಿರುವ ಇತರೆ ಆಸ್ತಿ
ದಾಖಲೆಗಳನ್ನು ಸಲ್ಲಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ಆಸ್ತಿಯ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಆಸ್ತಿ ಹಾಗೂ ದಾಖಲೆಗಳು ನಿಯಮಾನುಸಾರ ಕ್ರಮಬದ್ಧವಾಗಿರುವುದು ದೃಢಪಟ್ಟ ಬಳಿಕವೇ A ಖಾತೆ ನೀಡಲಾಗುತ್ತದೆ.

ಈ ನಿರ್ಧಾರದಿಂದ ರಾಜ್ಯದ ನಗರ ಪ್ರದೇಶಗಳಲ್ಲಿ B ಖಾತಾ ಆಸ್ತಿ ಹೊಂದಿರುವವರಿಗೆ ತಮ್ಮ ಆಸ್ತಿಯನ್ನು A ಖಾತೆಗೆ ಪರಿವರ್ತಿಸಿಕೊಳ್ಳಲು ಅವಕಾಶ ಸಿಗಲಿದ್ದು, ಮತ್ತೊಂದೆಡೆ ಅನಧಿಕೃತ ನಿವೇಶನಗಳಿಗೆ ಹೊಸದಾಗಿ ಖಾತೆ ನೀಡುವುದನ್ನು ನಿಯಂತ್ರಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ರೂ.152 ಕೋಟಿ ಅಂದಾಜು ವೆಚ್ಚ; ಹಳೆಯ ಬಸ್‌ಗಳ ಬದಲಾವಣೆ

ಕಲ್ಯಾಣ ಕರ್ನಾಟಕ ಪ್ರದೇಶದ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ವಿಶ್ವಾಸಾರ್ಹ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) 400 ಹೊಸ ಬಸ್‌ಗಳನ್ನು ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಜಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 469(iii)ರ ಘೋಷಣೆಯಂತೆ ಕೆಕೆಆರ್‌ಟಿಸಿಗೆ ಹಂಚಿಕೆಯಾಗಿರುವ 400 ಬಸ್‌ಗಳನ್ನು ಖರೀದಿಸಲು ಪ್ರತಿ ಬಸ್‌ಗೆ ಅಂದಾಜು ರೂ.38 ಲಕ್ಷ ರೂ.ಗಳಂತೆ ಅಂದಾಜು ರೂ.152 ಕೋಟಿ ವೆಚ್ಚವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆ

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಾರ್ವಜನಿಕ ಸಾರಿಗೆಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ನಿಗಮದ ಮೇಲೆ ಸಾರಿಗೆ ಸೇವೆಯ ಒತ್ತಡವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಬಸ್‌ಗಳ ಸೇರ್ಪಡೆ ಅಗತ್ಯವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಕೆಕೆಆರ್‌ಡಿಬಿ ಹಾಗೂ ರಾಜ್ಯ ಸರ್ಕಾರದಿಂದ ಅನುದಾನ

400 ಬಸ್‌ಗಳ ಖರೀದಿಗೆ ಅಗತ್ಯವಿರುವ ರೂ.152 ಕೋಟಿ ವೆಚ್ಚದಲ್ಲಿ ಶೇ.50ರಷ್ಟು ಮೊತ್ತವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ಉಳಿದ ಶೇ.50ರಷ್ಟು ಮೊತ್ತವನ್ನು ರಾಜ್ಯ ಸರ್ಕಾರ ಭರಿಸುವ ಉದ್ದೇಶ ಹೊಂದಲಾಗಿದೆ, ಕೆಕೆಆರ್‌ಡಿಬಿಯಿಂದ ಲಭ್ಯವಾಗುವ ಅನುದಾನ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಂತ ಹಂತವಾಗಿ ಬಸ್‌ಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ

ಹೊಸ ಬಸ್‌ಗಳ ಸೇರ್ಪಡೆಯಿಂದ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳು ಹಾಗೂ ಗ್ರಾಮೀಣ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸಂಪರ್ಕವನ್ನು ಮತ್ತಷ್ಟು ಸುಧಾರಿಸಲು ಸಾಧ್ಯವಾಗಲಿದೆ. ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಹೊಸ ಅನುಸೂಚಿಗಳನ್ನು ಕಾರ್ಯಾಚರಣೆಗೊಳಿಸಲು, ಹಳೆಯ ಬಸ್‌ಗಳನ್ನು ಬದಲಾಯಿಸಲು ಹಾಗೂ ಸಾರಿಗೆ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಒದಗಿಸಲು ಈ ಕ್ರಮ ನೆರವಾಗಲಿದೆ ಎಂದು ಹೇಳಿರುವ ಸಚಿವ ಪ್ರಿಯಾಂಕ್‌ ಖರ್ಗೆ ಕಲ್ಯಾಣ ಕರ್ನಾಟಕ ಭಾಗದ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಸುರಕ್ಷಿತ, ವಿಶ್ವಾಸಾರ್ಹ ಹಾಗೂ ಉತ್ತಮ ಗುಣಮಟ್ಟದ ಸಾರಿಗೆ ಸೇವೆ ಒದಗಿಸುವ ಸರ್ಕಾರದ ಉದ್ದೇಶಕ್ಕೆ ಈ ಹೊಸ ಬಸ್‌ಗಳ ಸೇರ್ಪಡೆ ಪೂರಕವಾಗಲಿದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+