E Swathu: ಇ-ಸ್ವತ್ತು ಮತ್ತಷ್ಟು ಸೌಲಭ್ಯ; ಎ ಖಾತೆ, ಬಹುಮಹಡಿ ಕಟ್ಟಡ ಅರ್ಜಿ ಸಲ್ಲಿಕೆ: ಅಪ್‌ಡೇಟ್ ಕೊಟ್ಟ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲವಾಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ ಮತ್ತು ಬಹುಮಹಡಿ (ಅಪಾರ್ಟ್‌ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮುಂದಿನ ಒಂದು ತಿಂಗಳ ಅವಧಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇ-ಸ್ವತ್ತು ಪ್ರಕ್ರಿಯೆ ಹಾಗೂ ತಂತ್ರಾಂಶವನ್ನು ಹೆಚ್ಚು ನಾಗರಿಕಸ್ನೇಹಿಯಾಗಿ ಅನುಷ್ಟಾನಗೊಳಿಸಲು ಇಲಾಖೆ ಬದ್ದವಾಗಿದ್ದು, ಅದರನ್ವಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಿಲಾಗಿರುತ್ತದೆ. ಈವರೆಗೆ ಆನ್‍ಲೈನ್ ಮೂಲಕ 21,429 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅನುಮೋದನೆಗಾಗಿ ವಿವಿಧ ಹಂತದಲ್ಲಿ ಬಾಕಿ ಇರುತ್ತದೆ. ಕೆಲವೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅವುಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ, ಮತ್ತಷ್ಟು ಸರಳಿಕರಿಸಲು ಕ್ರಮವಹಿಸಲಾಗುತ್ತಿದೆ, ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಅನುಮೋದನೆ ಮಾಡುವ ಪ್ರಕ್ರಿಯೆಯು ದಿನಾಂಕ:01.01.2026 ರಿಂದ ಆರಂಭಗೊಂಡಿದ್ದು, ಸಾರ್ವಜನಿಕರು ಇ-ಸ್ವತ್ತು 2.0 ತಂತ್ರಾಂಶದ ಆನ್-ಲೈನ್ ಪೋರ್ಟಲ್ ನ ಮೂಲಕ ತೆರಿಗೆ ಮತ್ತು ಪ್ರಿಟಿಂಗ್ ಶುಲ್ಕವನ್ನು ಪಾವತಿಸಿ, ಇ-ಖಾತಾವನ್ನು ಡೌನ್-ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇ-ಸ್ವತ್ತು ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿರುವುದಿಲ್ಲ, ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಭೇಟಿ ನೀಡದೆಯೇ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ, ಸಮಸ್ಯೆ/ಸಂದೇಹಗಳನ್ನು ಬಗೆಹರಿಸಲು ಸರ್ಕಾರ ಬದ್ದವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸಹಕರಿಸಬೇಕೆಂದು ಸಚಿವರು ಕೋರಿದ್ದಾರೆ.
ಇ-ಸ್ವತ್ತು 2.0 ರಡಿ ಅರ್ಜಿ ಸಲ್ಲಿಸಲು, ಸಂಬಂಧಿತ ದಾಖಲಾತಿ / ಪ್ರಕ್ರಿಯೆಯಲ್ಲಿ / ತಂತ್ರಾಂಶದ ಬಳಕೆಯ ಕುರಿತು ಸಂದೇಹಗಳಿದ್ದಲ್ಲಿ ತಮ್ಮ ಜಿಲ್ಲಾ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು"ಸಂಪರ್ಕಿಸಿ" ಶೀರ್ಷಿಕೆಯಡಿ ಮುಂದಿನ ಕೊಂಡಿ ಮೂಲಕ https://eswathu.karnataka.gov.in/Login.aspx ಪಡೆಯಬಹುದಾಗಿದೆ. ಹಾಗೂ https://panchatantra.karnataka.gov.in ರಲ್ಲಿಯೂ ಪ್ರಕಟಿಸಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications