ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನಿಮಲ್ ಪ್ಲಾನೆಟ್ ನಂತಹ ಚಾನೆಲ್‌ಗಳನ್ನು ಕನ್ನಡದಲ್ಲಿ ಪ್ರಸಾರ ಮಾಡಲು ಮನವಿ

|
Google Oneindia Kannada News

ಬೆಂಗಳೂರು, ನವೆಂಬರ್ 30: ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳನ್ನು ಕನ್ನಡದಲ್ಲಿ ಪ್ರಸಾರ ಮಾಡುವಂತೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ.

ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ತಮಿಳಿನಲ್ಲಿ, ತೆಲುಗಿನಲ್ಲಿ, ಹಿಂದಿಯಲ್ಲಿ ಡಬ್ಬಿಂಗ್ ಆಗಿ ಅಂದಿನಿಂದ ಪ್ರಸಾರವಾಗುತ್ತಿದ್ದು, ಭೂ ಜೀವ ಜಗತ್ತಿನ ಅದ್ಭುತ ಸುಂದರ ವಿಷಯಗಳೆಲ್ಲಾ ಅಲ್ಲಿನ ಜನಗಳಿಗೆ ಅವರ ಅವರ ಪ್ರಾದೇಶಿಕ ಭಾಷೆಗಳಲ್ಲಿ ದೊರಕುತ್ತಿವೆ.

ಈ ಭೂಮಿಯ ಮೇಲಿನ ಜೀವಜಗತ್ತಿನ ಅದ್ಭುತ ವೈವಿಧ್ಯತೆಗಳನ್ನು ವೈಚಿತ್ರಗಳನ್ನು ಅವುಗಳ ನಿಗೂಢ ಜೀವನ ಕ್ರಮಗಳನ್ನು ಹಾಗೂ ಅವುಗಳೆಲ್ಲಾ ಅಳಿವಿನಂಚೆಗೆ ಹೋಗುತ್ತಿರುವ ಭೀಕರತೆಗಳನ್ನೆಲ್ಲ ಜಗತ್ತಿನ ಎಲ್ಲ ಜನಗಳು ಅವರವರ ಮಾತೃಭಾಷೆಗಳಲ್ಲಿ ಅರಿತುಕೊಳ್ಳುವ ಅನಿವಾರ್ಯತೆ ಇದೆ. ಆದರೆ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡ ಭಾಷೆಯಲ್ಲಿ ಪ್ರಸಾರವಾಗದೇ ಇರುವುದರಿಂದ ಅದರಲ್ಲಿ ಜೀವ ವೈವಿಧ್ಯದ ಜ್ಞಾನ ಕನ್ನಡಿಗರನ್ನು ತಲುಪುತ್ತಿಲ್ಲ. ಆದ್ದರಿಂದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡದಲ್ಲಿ ಪ್ರಸಾರವಾಗಬೇಕೆಂದು ಕನ್ನಡಿಗರು ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಸುನಿಲ್ ಕುಮಾರ್ ಅವರು ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

A Request To Broadcast Channels Like Animal Planet In Kannada

ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನದ ಹಲವು ಸ್ವರೂಪಗಳ ಆವಿಷ್ಕಾರದಿಂದಾಗಿ ಜಗತ್ತಿನಲ್ಲಿ ಅವರವರ ಭಾಷೆಯಲ್ಲಿಯೇ ಸೇವೆಗಳು ಮತ್ತು ಮಾಹಿತಿಗಳು ಲಭಿಸುತ್ತಿರುವ ಸಂದರ್ಭದಲ್ಲಿ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡದಲ್ಲಿ ಸೇವೆ ಒದಗಿಸಬಹುದಾಗಿದೆ.

A Request To Broadcast Channels Like Animal Planet In Kannada

೨ ಸಾವಿರ ವರ್ಷಗಳ ಇತಿಹಾಸ ಹೊಂದಿರುವ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಹಾಗೂ ೬ ಕೋಟಿಗೂ ಅಧಿಕ ಜನ ಮಾತಾನಾಡುವ, ಬಳಸುವ ಕನ್ನಡ ಭಾಷೆಯಲ್ಲಿ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಪ್ರಸಾರ ಮಾಡಿ ಕನ್ನಡಿಗರಿಗೆ ಭೂ ಜಗತ್ತಿನ ವಿಸ್ಮಯಗಳನ್ನು ತಮ್ಮ ಭಾಷೆಯಲ್ಲಿ ತಿಳಿದುಕೊಳ್ಳುವ ಅವಕಾಶ ಒದಗಿಸಲು ಸಂಬಂಧಪಟ್ಟವರಿಗೆ ತಿಳಿಸುವಂತೆ ಮಾನ್ಯ ಸಚಿವರು ಮನವಿ ಮಾಡಿದ್ದಾರೆ.

English summary
Kannada Development Authority has appealed to Union Information and Broadcasting Minister Anurag Singh Thakur to telecast channels like Animal Planet in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X