ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಅಚ್ಚರಿ ಕಾದಿದೆ ಎಂದು ಬೊಮ್ಮಾಯಿ ಕೊಟ್ಟ ಸುಳಿವೇನು?
ಬೆಂಗಳೂರು, ಏಪ್ರಿಲ್ 4: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯುತ್ತಿದ್ದು ಏಪ್ರಿಲ್ 8 ರಂದು ಪಕ್ಷದ ಕೇಂದ್ರ ನಾಯಕತ್ವವು ಅಂತಿಮಗೊಳಿಸಿದ ನಂತರ ಪಟ್ಟಿಯನ್ನು ಪ್ರಕಟಿಸುವುದರೊಂದಿಗೆ ಅದು ಸುಗಮವಾಗಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.
ಬಿಜೆಪಿಯಿಂದ ಅಚ್ಚರಿಯಂತೆ ಯಾರೂ ಎಣಿಸದ ಅಭ್ಯರ್ಥಿಗಳು ಕಣದಲ್ಲಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಖಂಡಿತವಾಗಿಯೂ ಕೆಲವು ಕ್ಷೇತ್ರಗಳಲ್ಲಿ ಹೊಸ ಪ್ರಯೋಗಗಳಿಗೆ ಯೋಜನೆ ಹಾಕಿಕೊಂಡಿದ್ದು, ಅವು ನಡೆಯಲಿವೆ. ಕೆಲವು ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿಗಳು ಕಣದಲ್ಲಿ ಇಳಿಯಲಿದ್ದಾರೆ. ಮುಂದಿನ ದಿನಗಳಲ್ಲಿ ನೀವು ಅದನ್ನು ನೋಡಲಿದ್ದೀರಿ. ನಮ್ಮ ಕಾರ್ಯಕರ್ತರು ಮತ್ತು ನಾಯಕರು ಇಬ್ಬರೂ ವಿಶ್ವಾಸ ಹೊಂದಿದ್ದಾರೆ ಎಂದರು.

ಬಿಜೆಪಿ ಸಂಪೂರ್ಣ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರುವ ಸ್ಪಷ್ಟ ಲಕ್ಷಣಗಳಿವೆ. ಇಂದಿನ ರಾಜ್ಯ ಚುನಾವಣಾ ಸಮಿತಿ ಸಭೆಯು ಕಳೆದೆರಡು ದಿನಗಳಿಂದ ನಡೆದ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆಯ ಮುಂದುವರಿದ ಭಾಗವಾಗಿದೆ. ಕೇಂದ್ರಕ್ಕೆ (ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ) ಕಳುಹಿಸುವ ಮೊದಲು ಇಂದು ಮತ್ತು ನಾಳೆ ಹೆಚ್ಚಿನ ಸ್ಕ್ರೀನಿಂಗ್ ಮಾಡಲಾಗುತ್ತದೆ. ನಾಯಕತ್ವ) ಇದನ್ನು ನಾಳೆಯ ನಂತರ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 8 ರಂದು ಕೇಂದ್ರ ನಾಯಕತ್ವ ನಿರ್ಧರಿಸಿದ ನಂತರ ಅಂತಿಮಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಆಡಳಿತ ಪಕ್ಷ ಬಿಜೆಪಿಯ ಭವಿಷ್ಯ ಕುರಿತು ಪಕ್ಷದ ಕಾರ್ಯಕರ್ತರು ಉತ್ಸುಕರಾಗಿದ್ದಾರೆ. ಚುನಾವಣೆಯ ಪೂರ್ವದಲ್ಲಿ ಕಳೆದ ಮೂರ್ನಾಲ್ಕು ತಿಂಗಳ ಬೆಳವಣಿಗೆಗಳನ್ನು ಗಮನಿಸಿದರೆ ಬಿಜೆಪಿಗೆ ಬಹುಮತ ಸ್ಪಷ್ಟವಾಗುವ ಎಲ್ಲಾ ಲಕ್ಷಣಗಳಿವೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ 124 ಮತ್ತು 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿವೆ. ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಬಿಜೆಪಿ 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.

ಟಿಕೆಟ್ ಹಂಚಿಕೆ ಪ್ರಕ್ರಿಯೆಯು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ ಬೊಮ್ಮಾಯಿ, 'ಸ್ಥಳೀಯ ಮಟ್ಟದಿಂದ ನಂತರ ಜಿಲ್ಲೆ ಮತ್ತು ರಾಜ್ಯ ಮಟ್ಟದಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದ್ದು, ಸಂಪೂರ್ಣ ಮಾಹಿತಿ ಮತ್ತು ನೆಲದ ವಾಸ್ತವತೆಯ ಆಧಾರದ ಮೇಲೆ ಅದನ್ನು ಮಾಡಲಾಗುತ್ತಿದೆ. ಪ್ರಜಾಸತ್ತಾತ್ಮಕ ರೀತಿಯಲ್ಲಿ ಮತ್ತು ಅದು ಸುಗಮವಾಗಿ ಮುಂದುವರಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದರು.
ಚುನಾವಣೆಗೂ ಮುನ್ನ ಕೆಲವು ನಾಯಕರು ಪಕ್ಷ ತೊರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಿಜೆಪಿಯಲ್ಲಿ 125 ಹಾಲಿ ಶಾಸಕರಿದ್ದಾರೆ, ಅಲ್ಲಿ ಕೆಲ ಆಕಾಂಕ್ಷಿಗಳಿದ್ದಾರೆ, ಅವಕಾಶವಿಲ್ಲ ಎಂದು ಅರಿತು ಇಬ್ಬರು ಮೂರು ಜನ ಕೈಬಿಟ್ಟಿದ್ದಾರೆ ಎಂದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪ್ರಸ್ತಕ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಬರದಿರುವ/ಇಲ್ಲದ ಸೀಟಿಗೆ ಗುದ್ದಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ ಮತ್ತು ಮುಖ್ಯಮಂತ್ರಿ ಸ್ಥಾನದ ಗದ್ದುಗೆ ಏರಲು ಹೊರಾಡುತ್ತಿದೆ. ಜನರಿಗೆ ಕರ್ನಾಟಕಕ್ಕೆ ಒಳ್ಳೆಯದು ಮಾಡಬೇಕು ಎಂಬ ಯೋಚನೆ ಅವರಲ್ಲಿ ಕಾಣುತ್ತಿಲ್ಲ ಎಂದು ಅವರು ಟೀಕಿಸಿದರು.












Click it and Unblock the Notifications