ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಯಚೂರು ಕನ್ನಡ ಸಾಹಿತ್ಯ ಸಮ್ಮೇಳನ : ಬರಗೂರು ಭಾಷಣದ ಮುಖ್ಯಾಂಶಗಳು

ಸಂಶೋಧಕ ಎಂ.ಎಂ ಕಲಬುರ್ಗಿ ಅವರ ಸಾವು ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ. ಕಲಬುರ್ಗಿ ಹಂತಕರನ್ನು ಶೀಘ್ರ ಬಂಧಿಸಬೇಕು ಎಂದು ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸರ್ಕಾರಕ್ಕೆ ಒತ್ತಾಯಿಸಿದರು.

By Prithviraj
|
Google Oneindia Kannada News

ರಾಯಚೂರು, ಡಿಸೆಂಬರ್, 2: ಸಂಶೋಧಕ ಎಂ.ಎಂ.ಕಲಬುರ್ಗಿಯವರನ್ನು ಕೊಂದ ಹಂತಕರನ್ನು ಶೀಘ್ರ ಪತ್ತೆ ಹಚ್ಚಿ, ನಿಧಾನ ದ್ರೋಹದ ಕಳಂಕದಿಂದ ಮುಕ್ತವಾಗಬೇಕೆಂದು 82ನೇ ಸಾಹಿತ್ಯ ಸಮ್ಮೇಳಾನಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರು ಸರ್ಕಾರಕ್ಕೆ ಒತ್ತಾಯಿಸಿದರು.

ರಾಯಚೂರಿನಲ್ಲಿ ನಡೆಯುತ್ತಿರುವ ಅಖಿಲ ಭಾರತ 82ನೇ ಸಾಹಿತ್ಯ ಸಮ್ಮೇಳನದ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ಮಾತನಾಡಿದರು. "ಕಲಬುರ್ಗಿ ಅವರ ಸಾವು ಸಾಂಸ್ಕೃತಿಕ ಲೋಕ ದಿಗ್ಭ್ರಮೆಗೊಂಡು ಮೂಕವಾದ ಮುಂಜಾವು" ಎಂದು ಅವರು ತಿಳಿಸಿದರು.[ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಚಾಲನೆ ನೀಡಿದ ತನ್ವೀರ್ ಸೇಠ್]

Aa soon as possible govt must arrest Kalaburgi killers: Baraguru

ಬರಗೂರು ರಾಮಚಂದ್ರಪ್ಪ ಅವರ ಭಾಷಣದ ಪ್ರಮುಖಾಂಶಗಳು

* ಬದುಕಿನ ಬೇಟೆಯಲ್ಲಿ ಬೆಳೆಯುತ್ತ ಬಂದ ಅನೇಕರಲ್ಲಿ ನಾನೂ ಒಬ್ಬ. ಈ 'ಬೇಟೆ ಬದುಕಿನಲ್ಲಿ' ಶ್ರೀಗಂಧದ ಮರಗಳಿರಲಿಲ್ಲ. ಜಾಲಿ ಮರಗಳಿದ್ದವು. ಜತೆಗೆ ಹೊಂಗೆ, ಹುಣಸೆ ಮರಗಳಿದ್ದವು.[82ನೇ 'ರಾಯಚೂರು' ಕನ್ನಡ ಸಾಹಿತ್ಯ ಸಮ್ಮೇಳನದ ಚಿತ್ರಸಂಪುಟ]

* ಇರುವಲ್ಲಿ ಮತ್ತು ಇರುವುದರಲ್ಲಿ ನಮ್ಮ ಸೃಜನಶೀಲತೆಯನ್ನು ಬೆಳೆಸಿಕೊಳ್ಳುವ ಸಂಕಲ್ಪ ನಮ್ಮದಾಗಬೇಕು. ಸೃಜನಶೀಲತೆಗೆ ಬಡವ ಬಲ್ಲಿದ ಎಂಬ ಭೇಧವಿಲ್ಲ

* ಶಾಂತಿಪ್ರಿಯ ಅಶೋಕನ ಶಾಸನವುಳ್ಳ ರಾಯಚೂರು ಸರ್ವಧರ್ಮ ಸಮನ್ವಯದ ನೆಲೆಯಾಗಿದೆ. ಕಲ್ಯಾಣ ಕ್ರಾಂತಿಯ ಸಂದೇಶವನ್ನು ಪ್ರಸಾರಗೊಳಿಸುವ ಕಾರ್ಯದಲ್ಲಿ ರಾಯಚೂರು ಜಿಲ್ಲೆಯ ಪಾತ್ರ ಪ್ರಮುಖ

* ಹೈದರಾಬಾದ್ ಕರ್ನಾಟಕ ವಿವಿಧ ಹೋರಾಟಗಳ ಭೂ ವಲಯ. ಸೌಹಾರ್ಧ ಸಂಸ್ಕೃತಿಯ ಬೀಡು. ಸೂಫಿ ಸಂತರು ಮತ್ತು ತತ್ವ ಪದಕಾರರ ಪರಂಪರೆಯುಳ್ಳ ಭೂಮಿ

* ಕನ್ನಡದ, ಕರ್ನಾಟಕದ ಹೆಸರಲ್ಲಿ ಸಾಹಿತ್ಯಾಸಕ್ತರಲ್ಲಿ ಇಲ್ಲಿ ನೆರೆದಿರುವ ಈ ಬಹು ದೊಡ್ಡ ಸಮೂಹವು ವೇದಿಕೆಯಲ್ಲಿರುವವರಿಗೊಂದು ವಿವೇಕದ ಎಚ್ಚರ ಎಂಬುದು ನನ್ನ ಭಾವನೆ

* ಸಾಂಸ್ಕೃತಿಕ ಪ್ರತಿನಿಧಿಗಳೆಂಬ ಹಣೆಪಟ್ಟಿಯ ನಾವು ಆತ್ಮವಂಚನೆ ಮಾಡಿಕೊಳ್ಳಬಾರದು. ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ವಂಚನೆ ಮಾಡಬಾರದು.

* ಕನ್ನಡ ಮಾತು ಪ್ರಧಾನವಾಗಿರುವ ಪ್ರದೇಶಗಳೆಲ್ಲ ಒಂದಾಗಬೇಕೆಂಬ ಏಕೀಕರಣದ ಪ್ರಧಾನ ಆಶಯ ಬಹುಮಟ್ಟಿಗೆ ಈಡೇರದಿದ್ದರೂ ಇನ್ನೂ ಕೆಲವು ಕನ್ನಡ ಮಾತಿನ ಪ್ರದೇಶಗಳು ಬೇರೆ ರಾಜ್ಯದಲ್ಲಿ ಉಳಿದಿವೆ.

* ಗೋವಾದಲ್ಲಿ ಕನ್ನಡಿಗರ ಬವಣೆ ಇನ್ನೂ ಬತ್ತಿಲ್ಲ. ಕೇರಳದ ಕಾಸರಗೋಡು ಕರ್ನಾಟಕವಾಗಿಲ್ಲ.

* ಕರ್ನಾಟಕದ ಒಳನಾಡಿನವರಿಗೆ ಸಿಗುವ ಶೈಕ್ಷಣಿಕ ಮತ್ತು ಔದ್ಯೋಗಿಕ ಸೌಲಭ್ಯಗಳು ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿದ ಹೊರನಾಡಿನ ಕನ್ನಡಿಗರಿಗೆ ಪುರ್ಣಪ್ರಮಾಣದಲ್ಲಿ ಸಿಗುತ್ತಿಲ್ಲ.

* ಕನ್ನಡನಾಡಿನಲ್ಲಿ ಬಳ್ಳಾರಿಯ ರಂಜಾನ್ ಸಾಬ್ ಅವರು ಏಕೀಕರಣ ಹೋರಾಟದಲ್ಲಿ ಜೀವ ತೆತ್ತರು. ಈ ಜೀವ ಕನ್ನಡನಾಡಿದ ಜಾತ್ಯಾತೀತ ಮೌಲ್ಯದ ಒಂದು ಮಾದರಿಯಾಗಿ ಇಂದಿಗೂ ಸ್ಮರಣೀಯ

* 1956ರಲ್ಲಿ 'ವಿಶಾಲ ಮೈಸೂರು' ಅಸ್ತಿತ್ವಕ್ಕೆ ಬಂದರೂ ಕರ್ನಾಟಕ ಎಂದು ಹೆಸರಿಡಲು 1973ರವರೆಗೆ ಕಾಯಬೇಕಾಯಿತು.

* ದೇವರಾಜು ಅರಸು 'ಸಾಮಾಜಿಕ ಏಕೀಕರಣ'ದ ರೂವಾರಿ ಎಂದರೂ ತಪ್ಪಾಗಲಾರದು. ಅವರು ಸಾಮಾಜಿಕ ಹಿನ್ನೆಲೆಯ ಸಂಕೇತಗಳು ಸಮಾವೇಶಗೊಳ್ಳುವಂತೆ ಮಾಡಿದರು.

* ಅಚ್ಚಕನ್ನಡ ರಾಜವಂಶವೆಂಬ ಕೀರ್ತಿಗೆ ಭಾಜನರಾದ ಮತ್ತು 215 ವರ್ಷಗಳವರೆಗೆ ಆಳಿದ ಕದಂಬರ ಸಾಮ್ರಾಜ್ಯವು ನರ್ಮದಾ ನದಿಯವರೆಗೆ ವಿಸ್ತರಿಸಿತ್ತು.

* ಕನ್ನಡ ರಾಜವಂಶಗಳ ಸಾಮ್ರಾಜ್ಯಗಳನ್ನು ಇಡಿಯಾಗಿ ಕನ್ನಡ ಪ್ರದೇಶಗಳೆಂದು ಕರೆಯುವುದು ಚಾರಿತ್ರಿಕವಾಗಿ ಸರಿಯಲ್ಲ.

* ಭಾಷಾಭಿಮಾನಕ್ಕೆ ಭೂತಕಾಲ ಮತ್ತು ವರ್ತಮಾನಗಳ ಉಚಿತಾನುಸಂಧಾನ ಮುಖ್ಯ. ಭೂತದಲ್ಲೇ ಹೂತು ಹೋಗುವುದು ಕೇವಲ ಕನವರಿಕೆಯಾಗುತ್ತದೆ. ವರ್ತಮಾನವೇ ಸರ್ವಸ್ವ ಎಂದುಕೊಂಡರೆ ಪರಂಪರೆಯ ಪ್ರಜ್ಞೆ ಪತನಗೊಳ್ಳುತ್ತದೆ.

* ಭಾಷೆ ಮತ್ತು ಭೂಗೋಳದ ಸಂಬಂಧವಷ್ಟೇ ಕನ್ನಡಾಭಿಮಾನವಲ್ಲ. ಸಾಮಾಜಿಕ-ಆರ್ಥಿಕ ಸಮಾನತೆಯ ಆಧಾರದಲ್ಲಿ ಅಭಿವೃದ್ಧಿಯ ಸಮತೋಲನ ಸಾಧಿಸದಿದ್ದರೆ ಕರ್ನಾಟಕದ ಒಳಗೆ ಒಡಕು ಹುಟ್ಟುತ್ತದೆ.

* ಏಕೀಕರಣದ ಫಲವಾತಿ ಜೊತೆಗೂಡಿದ ಪ್ರದೇಶಗಲ ಪ್ರತಿಭಾವಂತರಿಗೆ ಪ್ರತೀಕಾತ್ಮಕ ಪ್ರಾತಿನಿಧ್ಯ ನೀಡಬೇಕು.

* ಪ್ರತ್ಯೇಕ ರಾಜ್ಯದ ಬೇಡಿಕೆ ಇಡುತ್ತಿರುವವರು ಪ್ರತ್ಯೇಕತೆಯೊಂದೇ ಪರಿಹಾರವೇ ಎಂದು ತಮ್ಮೊಗಳನ್ನು ಕೇಳಿಕೊಳ್ಳಬೇಕು.

* ಜಾತಿ, ವರ್ಣ, ಲಿಂಗತ್ವ ಅಸಮಾನತೆಗಳನನ್ನು ಆಧಾರಿಸಿದ ಸಾಮಾಜಿಕ ಪ್ರತ್ಯೇಕತೆಗೆ ಸಾಮಾಜಿಕ ನ್ಯಾಯದ ರಾಜ್ಯಬೇಕು, ಪ್ರತ್ಯೇಕ ರಾಜ್ಯವಲ್ಲ.

* ಕರ್ನಾಟಕದ ಯಾವುದೇ ಪ್ರದೇಶಕ್ಕೆ ಅನ್ಯಾಯವಾದರೂ ಒಂದಾಗಿ ಪ್ರತಿಭಟಿಸೋಣ. ಒಡೆದು ಹೋಗುವುದಕ್ಕೆ ನಾವು ಒಂದಾಗಲಿಲ್ಲ ಎಂಬುದನ್ನು ತೋರಿಸಿಕೊಡೋಣ.

* ಆಳುವ ಸರ್ಕಾರಗಳ ಜವಾಬ್ದಾರಿಯೂ ದೊಡ್ಡಗಾಬೇಕು. ಎಲ್ಲ ಪ್ರದೇಶದ ಜನಪ್ರತಿನಿಧಿಗಳ ದನಿ ಗಟ್ಟಿಯಾಗಬೇಕು.

English summary
82nd Kannada sahitya sammelana president, writer Baraguru Ramachandrappa urged to Government to arrest M.M. Kalaburgi culprits as soon as possible. in Sahitya samelana, which is held at Raichur
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X