Aadhaar Card Big Updates: ಆಧಾರ್ ಕಾರ್ಡ್ ಅಪ್ಡೇಟ್‌ಗೆ ಇಷ್ಟು ದಿನ ಮಾತ್ರ ಬಾಕಿ!
ನೀವಿನ್ನೂ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಲ್ಲವೇ ಹಾಗಿದ್ದರೆ ಕೂಡಲೇ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿ, ಏಕೆಂದರೆ ಶುಲ್ಕವಿಲ್ಲದೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ.
ಕೇಂದ್ರ ಸರ್ಕಾರವು ಕಳೆದ ಒಂದು ವರ್ಷದ ಅವಧಿಯಿಂದಲೂ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದಕ್ಕೆ ಗಡುವು ನೀಡುತ್ತಲ್ಲೇ ಬಂದಿದೆ. ಈ ರೀತಿ ಸರಣಿ ಗಡುವುಗಳನ್ನು ನೀಡಿದ ಮೇಲೂ ಲಕ್ಷಾಂತರ ಜನ ಇನ್ನೂ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಂಡಿಲ್ಲ. ಈಗ ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದಕ್ಕೆ ಅಂತಿಮ ಗಡುವು ನೀಡಿದೆ.

ಈ ಬಾರಿಯೂ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳದೆ ಇದ್ದರೆ ನೀವು ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಹಾಗಿದ್ದರೆ ಆಧಾರ್ ಕಾರ್ಡ್‌ಗೆ ಇನ್ನೆಷ್ಟು ದಿನ ಬಾಕಿ ಇದೆ. ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳುವುದು ಹೇಗೆ ಎನ್ನುವ ಮಾಹಿತಿ ಇಲ್ಲಿದೆ.
ಆಧಾರ್ ಉಚಿತ ಅಪ್ಡೇಟ್‌ಗೆ ಅಂತಿಮ ಗಡುವು
ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಲು ಇಲ್ಲವೇ ತಿದ್ದುಪಡಿ ಮಾಡಿಕೊಳ್ಳಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ನೀವು ಉಚಿತವಾಗಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಸೆಪ್ಟೆಂಬರ್ 14 ಕೊನೆಯ ದಿನ. ಈಗಾಗಲೇ ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಅಪ್ಡೇಟ್ಗಾಗಿ ಸೆಪ್ಟೆಂಬರ್ 14ರವರೆಗೆ ಗಡುವು ವಿಸ್ತರಿಸಿದೆ.

ಈ ಅವಧಿ ಕಳೆದ ನಂತರದಲ್ಲಿ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಬೇಕಾದರೆ ಶುಲ್ಕ ಪಾವತಿಸಬೇಕಾಗುತ್ತದೆ. ಯುಐಡಿಎಐ ಆಧಾರ್ ಕಾರ್ಡ ನಿಯಮಿತವಾಗಿ ಅಪ್ಡೇಟ್ ಮಾಡಿಕೊಳ್ಳಬೇಕು ಎಂದು ಸಲಹೆ ನೀಡುತ್ತಿದೆ. ಈ ಸಂಬಂಧ ಯುಐಡಿಎಐ ತನ್ನ ವೆಬ್ಸೈಟ್ನಲ್ಲೂ ಎಚ್ಚರಿಸಿದೆ. ನಿಮ್ಮ ಆಧಾರ್ ಅಪ್ಡೇಟ್ ಮಾಡಲು ಗುರುತಿನ ಚೀಟಿ, ವಿಳಾಸದ ದಾಖಲೆ ಸಲ್ಲಿಸಬೇಕಾಗುತ್ತದೆ.
ಅತ್ಯಂತ ಸುಲಭ ಪ್ರಕ್ರಿಯೆ
ಆಧಾರ್ ಕಾರ್ಡ್ ಅಪ್ಡೇಟ್ ಎನ್ನುವುದು ಸುಲಭ ಪ್ರಕ್ರಿಯೆ ಆಗಿದೆ. ಆಧಾರ್ ನವೀಕರಣ ಮಾಡುವುದು ತುಂಬಾ ಸುಲಭವಾಗಿದೆ. ಅಲ್ಲದೇ ನೀವು Online ನಲ್ಲೂ ಇದನ್ನು ಮಾಡಬಹುದಾಗಿದೆ. ಆಧಾರ್ ನೋಂದಣಿ ಸಂಸ್ಥೆ (UIDAI)ಯ ವೆಬ್‌ಸೈಟ್‌ನಲ್ಲಿ ಸಹ ಆಧಾರ್ ಕಾರ್ಡ್ ನವೀಕರಣಕ್ಕೆ ಅವಕಾಶ ಇದೆ.
ಹೆಸರು ಬದಲಾವಣೆ ಮಾಡಿಕೊಳ್ಳಲು ಮದುವೆ ಸರ್ಟಿಫಿಕೇಟ್ (Marriage Certificate), ವಿಳಾಸ ಬದಲಾವಣೆಗೆ ಮತದಾರ ಗುರುತಿನ ಚೀಟಿ (Voter ID Card) ಸೇರಿದಂತೆ ಯಾವ ನಿರ್ದಿಷ್ಟ ಬದಲಾವಣೆ ಮಾಡಬೇಕು ಎನ್ನುವುದಕ್ಕೆ ಸಂಬಂಧಪಟ್ಟ ದಾಖಲೆ ಸಲ್ಲಿಸಿದರೆ ಸಾಕು. ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಬಹುದು.
ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ?
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಕೆಲವು ಸರಳ ಮಾರ್ಗಗಳಿವೆ. ಈ ಸರಳ ಮಾರ್ಗಗಳನ್ನು ಅನುಸರಿಸಿದರೆ ಸಾಕು, ನೀವೇ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ.
ಆ ಸರಳ ಮಾರ್ಗಗಳೇನು, ಆಧಾರ್ ಕಾರ್ಡ್ ಅಪ್ಡೇಟ್ ಸ್ಟೆಪ್ ಬೈ ಸ್ಟೆಪ್ ಮಾಡುವುದೇಗೆ ಎನ್ನುವ ಮಾಹಿತಿ ಇಲ್ಲಿದೆ.
* ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದಕ್ಕೆ ಮೊದಲು ನೀವು ಯುಐಡಿಎಐ ಎನ್ನುವ ಅಧಿಕೃತ ವೆಬ್ ಸೈಟ್‌ಗೆ ಲಾಗಿನ್ ಆಗಬೇಕು.
* ಇದಾದ ನಂತರದಲ್ಲಿ myaadhaar ಎನ್ನುವ ಆಯ್ಕೆಯ ಮೇಲೆ ಕ್ಲಿಕ್ಕಿಸಿ.
* ಮುಂದುವರಿದು Update Aadhaar ಎನ್ನುವ ಆಯ್ಕೆಯನ್ನು ಒತ್ತಿ.
* ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ಹಾಕಿ.
* ಮೊಬೈಲ್ ನಂಬರ್ ಹಾಕಿದ ನಂತರ Send OTP ಎನ್ನುವ ಬಟನ್ ಮೇಲೆ ಕ್ಲಿಕ್ಕಿಸಿ.
* ಆಗ ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದ್ದು, ಅದನ್ನು ನಮೂದಿಸಿ.
* ಇದೆಲ್ಲ ಮಾಡಿದ ನಂತರ Login ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಬೇಕು.
* ಯಾವ ನಿರ್ದಿಷ್ಟ ಮಾಹಿತಿ ಬದಲಾವಣೆ ಮಾಡಬೇಕು ಅಥವಾ ಸೇರಿಸಬೇಕು ಎನ್ನುವ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
* ನಿಮ್ಮ ವಿಳಾಸ ದೃಢೀಕರಣ ದಾಖಲೆಯ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಿಕೊಳ್ಳಿ ನಂತರ Submit ಎನ್ನುವ ಆಯ್ಕೆಯ ಮೇಲೆ ಕ್ಲಿಕ್ಕಿಸಿ.
* ಅಂತಿಮ ಹಂತದಲ್ಲಿ ಈಗಾಗಲೇ ನಿಮ್ಮ ನೋಂದಾಯಿತ ಮೊಬೈಲ್ ನಂಬರ್‌ಗೆ ಅಪ್ಡೇಟ್ ರಿಕ್ವೆಸ್ಟ್ ಸಂಖ್ಯೆ (URN) ಬಂದಿರುತ್ತದೆ.
* ಈ ಹಂತದಲ್ಲಿ ನೀವು SRN ಸಂಖ್ಯೆಯನ್ನು ಸಹ ಬರೆದಿಟ್ಟುಕೊಳ್ಳಬಹುದು. ಈ ರೀತಿ ಮಾಡುವುದರಿಂದಾಗಿ ಸುಲಭವಾಗಿ ನಿಮ್ಮ ಅರ್ಜಿಯ ಸ್ಟೇಟಸ್ ಟ್ರ್ಯಾಕ್ ಮಾಡಿಕೊಳ್ಳಬಹುದು.
ಏನಿದು ಆಧಾರ್ ಕಾರ್ಡ್ , ಇಷ್ಟೊಂದು ಮಹತ್ವವೇಕೆ ?
ಭಾರತದಲ್ಲಿ ಆಧಾರ್ ಕಾರ್ಡ್ ಪರಿಕ್ಪನೆಯನ್ನು 2009ರ ಜನವರಿ 28ರಂದು ಪರಿಚಯಿಸಲಾಯಿತು.
ಭಾರತ ಸರ್ಕಾರದ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಆಧಾರ್ ಲಾಂಚ್ ಮಾಡಲಾಯಿತು. ಕಳೆದ 15 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ಹಲವು ಮಹತ್ವದ ಸೇವೆಗೆ ಬಳಸಲಾಗುತ್ತಿದೆ.
ಭಾರತದಲ್ಲಿ ಆಧಾರ ಬಳಕೆ ಮಾಡಿದ ನಂತರದಲ್ಲಿ ಅವ್ಯವಹಾರಗಳಿಗೆ ಕಡಿವಾಣ ಬಿದ್ದಿದೆ. ಇನ್ನು ಆಧಾರ್ ಕಾರ್ಡ್‌ನಲ್ಲಿ ಜನರ ಬಯೋಮೆಟ್ರಿಕ್ ಮಾಹಿತಿ, ಫೋಟೋ, ವಿಳಾಸ, ಇಮೇಲ್ ಐಡಿ, ಫೋನ್ ನಂಬರ್ ಮಾಹಿತಿ ಇರುತ್ತದೆ.
ಇತ್ತೀಚಿನ ನವೀಕೃತ ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ , ಇಸವಿ ಸಹ ಇರುತ್ತದೆ.
UIDAI ಪ್ರತಿಯೊಬ್ಬರ ವೈಯಕ್ತಿಕ ಮಾಹಿತಿಗಳನ್ನು ನಿರ್ವಹಿಸುತ್ತದೆ. ಆಧಾರ್ ಕಾರ್ಡ್ ಅನ್ನು ಹಲವು ಸೇವೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಸೇವೆಗಳನ್ನು ನೀಡುವುದಕ್ಕೆ ಪ್ರಧಾನವಾಗಿ ಆಧಾರ್ ಕಾರ್ಡ್ ಅನ್ನು ಬಳಸುತ್ತಿವೆ.
ಇದರಿಂದ ಅಕ್ರಮವಾಗಿ ಸೇವೆ ಪಡೆದುಕೊಂಡು ಮುಕ್ತ ಮಾರುಕಟ್ಟೆಯಲ್ಲಿ ಬಳಸಿಕೊಳ್ಳುವುದು ತಪ್ಪಿದೆ. ಉದಾಹರಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ಪಡಿತರ ಚೀಟಿ ಸೌಲಭ್ಯವನ್ನು ಅರ್ಹರು (ಆಧಾರ್ ಬಳಕೆ ಮಾಡಲಾಗುತ್ತದೆ) ಮಾತ್ರ ಬಳಸಲು ಸಾಧ್ಯವಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications