ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಕನ್ನಡ ಜಿಲ್ಲೆಯಲ್ಲಿ ಆಧಾರ್ ಅದಾಲತ್ ಆರಂಭ

By ಉತ್ತರ ಕನ್ನಡ ಪ್ರತಿನಿಧಿ
|
Google Oneindia Kannada News

ಕಾರವಾರ, ಸೆಪ್ಟೆಂಬರ್ 22: ಆಧಾರ್ ನೋಂದಣಿ ಅದಾಲತ್ ಕಾರವಾರ ನಗರಸಭೆಯ ಸಭಾಂಗಣದಲ್ಲಿ ಇಂದಿನಿಂದ (ಸೆ.22) ಅಕ್ಟೋಬರ್ 1ರವರೆಗೆ ನಡೆಯಲಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಇ-ಆಡಳಿತ ಬೆಂಗಳೂರು ಹಾಗೂ ಜಿಲ್ಲಾಡಳಿತ ಕಾರವಾರ ಸಹಯೋಗದೊಂದಿಗೆ ಆಧಾರ್ ನೋಂದಣಿ ಅದಾಲತ್ ನಡೆಯುತ್ತಿದ್ದು, ಈ ಹಿಂದೆ ಆಧಾರ್ ನಲ್ಲಿ ಆಗಿರುವ ದೋಷಗಳನ್ನು ಸರಿಪಡಿಸುವುದು ಹಾಗೂ ವಿವಿಧ ಕಾರಣಗಳಿಂದ ಈವರೆಗೆ ಆಧಾರ್ ನೋಂದಣಿ ಮಾಡಿಸದಿದ್ದವರು ಈ ಆದಾಲತ್‌ ನಲ್ಲಿ ನೋಂದಣಿ ಮಾಡಿಸಲು ಸುವರ್ಣಾವಕಾಶ ಎಂದರು.

ಚಾರಣ ಪ್ರಿಯರನ್ನು ಸ್ವಾಗತಿಸುತ್ತಿದೆ ಉತ್ತರಕನ್ನಡಚಾರಣ ಪ್ರಿಯರನ್ನು ಸ್ವಾಗತಿಸುತ್ತಿದೆ ಉತ್ತರಕನ್ನಡ

ಈ ಹಿಂದೆ ಆಧಾರ್ ನೋಂದಣಿ ಮಾಡಿಸಿ, ತಾಂತ್ರಿಕ ಕಾರಣಗಳಿಂದ ಆಧಾರ್ ಸಿಗದಿದ್ದವರೂ ಮತ್ತೊಮ್ಮೆ ಆಧಾರ್ ನೋಂದಣಿ ಮಾಡಿಸಬೇಕು. ಅಲ್ಲದೆ, ಮೊಬೈಲ್ ಲಿಂಕ್, ವಿಳಾಸ ಬದಲಾವಣೆ, ಹೆಸರಿನಲ್ಲಿನ ದೋಷಗಳ ತಿದ್ದುಪಡಿ, ವಯಸ್ಸು ಮತ್ತು ಹುಟ್ಟಿದ ದಿನಾಂಕದ ತಿದ್ದುಪಡಿಗಳ ಅವಶ್ಯವಿದ್ದಲ್ಲೂ ಅದಾಲತ್ ಕೇಂದ್ರದಲ್ಲಿ ನೋಂದಣಿ ಮಾಡಿಸಬೇಕಿದೆ ಎಂದರು.

Aadhaar
ಜಿಲ್ಲಾದ್ಯಂತ ಪ್ರತಿ ತಾಲೂಕಿನಲ್ಲೂ ಆಧಾರ್ ನೋಂದಣಿ ಅದಾಲತ್ ನಡೆಯಲಿದ್ದು, ಪ್ರತಿ ತಾಲೂಕಿನಲ್ಲಿ 10 ದಿನಗಳ ಕಾಲ ನಾಲ್ಕು ಕಿಟ್‌ಗಳ ಮೂಲಕ ನಿರಂತರ ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ಎಲ್ಲರಿಗೂ ಆಧಾರ್ ಸೌಲಭ್ಯ ಒದಗಿಸುವುದು ಇದರ ಮುಖ್ಯ ಉದ್ದೇಶ ಎಂದರು.

ಅನಂತ್ ಕುಮಾರ್ ಹೆಗಡೆ ವಿರುದ್ಧದ ಎಫ್‌ಐಆರ್‌ಗೆ ಕೋರ್ಟ್‌ ತಡೆಅನಂತ್ ಕುಮಾರ್ ಹೆಗಡೆ ವಿರುದ್ಧದ ಎಫ್‌ಐಆರ್‌ಗೆ ಕೋರ್ಟ್‌ ತಡೆ

ವಿಶೇಷವಾಗಿ ಕಾರವಾರ ನಗರ ವ್ಯಾಪ್ತಿಯಲ್ಲಿ ವೃದ್ಧರು, ವಿಕಲಾಂಗತೆಯಿಂದ ಆಧಾರ್ ನೋಂದಣಿಗೆ ಆಗಮಿಸದೆ ಬಿಟ್ಟು ಹೋಗಿರುವವರು ಹಾಗೂ ಹಾಸಿಗೆ ಹಿಡಿದಿರುವವರಿಗಾಗಿ ಸಹಾಯವಾಣಿ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಕರೆ ಬಂದಲ್ಲಿ ಅವರ ಮನೆಗೇ ತೆರಳಿ ಆಧಾರ್ ನೋಂದಣಿ ಮಾಡಿಸಲಾಗುವುದು.

ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ 08382- 229857 ಹಾಗೂ 1077 ನಂಬರಿಗೆ ಕರೆ ಮಾಡಿ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.

English summary
The Aadhaar registration adalat will be held at Karwar Municipal Corporation from today (Sep 22) till October 1, Deputy Commissioner SS Nakul said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X