ಚುನಾವಣಾ ಕಣದಲ್ಲಿ ಆಮ್ ಆದ್ಮಿ ಪಕ್ಷ, ಎಸ್‌ಡಿಪಿಐ: ಯಾರಿಗೆ ಲಾಭ? ಯಾರಿಗೆ ನಷ್ಟ?
ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಎಸ್‌ಡಿಪಿಐ ಪಕ್ಷಗಳು ರಾಜ್ಯದ ಹೆಚ್ಚಿನ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಆಪ್, ಎಸ್‌ಡಿಪಿಐ ಸ್ಫರ್ಧೆಯಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಎನ್ನುವುದರ ಮಾಹಿತಿ ಇಲ್ಲಿದೆ.
ಬೆಂಗಳೂರು, ಫೆಬ್ರವರಿ 22: 2023ರ ವಿಧಾನಸಭಾ ಚುನಾವಣೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಗೆಲುವು ಅಷ್ಟೊಂದು ಸುಲಭವಾಗಿ ಕಾಣುತ್ತಿಲ್ಲ. ಪರಿಣಾಮ ಈ ಬಾರಿ, ಎಸ್‌ಡಿಪಿಐ, ಆಪ್, ಬಿಎಸ್‌ಪಿ ಸೇರಿದಂತೆ ಇನ್ನೂ ಕೆಲವು ಪಕ್ಷಗಳು ಕೆಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಸಾಮಾನ್ಯವಾಗಿ ರಾಜ್ಯದಾದ್ಯಂತ ಒಂದೊಂದು ಪಕ್ಷಗಳು ಒಂದೊಂದು ಕ್ಷೇತ್ರದಲ್ಲಿ ಗಟ್ಟಿಯಾಗಿರುವುದರಿಂದ ಅಂತಹ ಕ್ಷೇತ್ರಗಳಲ್ಲಿ ಪ್ರಾಬಲ್ಯ ಹೊಂದಿರುವ ಪಕ್ಷಗಳು ನಿರ್ಲಕ್ಷ್ಯ ತೋರಿದರೆ ಎದುರಾಳಿಗಳಿಗೆ ಲಾಭವಾಗುವ ಸಾಧ್ಯತೆಯಿದೆ. ಜೊತೆಗೆ ಮೂರು ಪಕ್ಷಗಳ ಆಡಳಿತ ನೋಡಿಯಾಗಿದೆ. ಯಾರೂ ಪ್ರಯೋಜನವಿಲ್ಲ ಹೊಸ ಪಕ್ಷವನ್ನು ಆಯ್ಕೆ ಮಾಡೋಣ ಎಂಬ ತೀರ್ಮಾನವನ್ನು ಮತದಾರರು ಮಾಡಿದರೂ ಅಚ್ಚರಿ ಪಡಬೇಕಾಗಿಲ್ಲ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಎಸ್‌ಡಿಪಿಐ ಪಕ್ಷಗಳು ರಾಜ್ಯದ ಹೆಚ್ಚಿನ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಇರುವುದರಿಂದ ಮೂರು ಪಕ್ಷಗಳ ನಾಯಕರಿಗೂ ಸ್ವಲ್ಪ ಮಟ್ಟಿಗೆ ನಡುಕ ಶುರುವಾಗಿರುವುದು ಗುಟ್ಟಾಗಿ ಉಳಿದಿಲ್ಲ. ಅದರಲ್ಲೂ ಇತ್ತೀಚೆಗಿನ ವರ್ಷಗಳಲ್ಲಿ ಆಪ್ ಹೆಚ್ಚಿನ ಗಮನ ಸೆಳೆಯುತ್ತಿದೆ.
ದೆಹಲಿ ಮತ್ತು ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿದ್ದು, ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಪರ್ಯಾಯ ಪಕ್ಷ ಎಂಬ ಮಾತುಗಳು ಕೇಳಿ ಬರುತ್ತಿವೆ. ಸದ್ಯ ಬಿಜೆಪಿಗೆ ಕಾಂಗ್ರೆಸ್‌ಗಿಂತ ಆಪ್ ಪ್ರಮುಖ ವಿರೋಧ ಪಕ್ಷವಾಗಿ ಹೊರ ಹೊಮ್ಮುತ್ತಿರುವುದು, ಮತ್ತು ಮತದಾರರು ಅದರತ್ತ ಬಹಳಷ್ಟು ನಿರೀಕ್ಷೆಯನ್ನಿಟ್ಟುಕೊಂಡಿರುವುದು ಬಿಜೆಪಿ ಮಾತ್ರವಲ್ಲದೇ ಇತರೆ ರಾಷ್ಟ್ರೀಯ ಪಕ್ಷಗಳಿಗೆ ನಡುಕ ಹುಟ್ಟಿಸಿರುವುದಂತೂ ಸತ್ಯ.
ಪಂಜಾಬ್‌ನಲ್ಲಿ ಆಗಿರುವಂತೆ ಯಾವುದೇ ಜಾದೂ ರಾಜ್ಯದಲ್ಲಿ ಆಗುವುದು ಕಷ್ಟ. ಆದರೆ ಕ್ರಮೇಣ ಕೆಲವೇ ವರ್ಷಗಳಲ್ಲಿ ಆಪ್ ಪಕ್ಷ ಸಂಘಟನೆ ಒಂದಷ್ಟು ಕ್ಷೇತ್ರಗಳಲ್ಲಿ ಬಲವಾದರೂ ಅಚ್ಚರಿಪಡಬೇಕಾಗಿಲ್ಲ. ಆದರೂ ಆಪ್ ಅನ್ನು ರಾಜ್ಯದ ಮೂರು ಪಕ್ಷಗಳು ಲಘುವಾಗಿ ಪರಿಗಣಿಸುವಂತಿಲ್ಲ. ಸದ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಆಪ್ ಬಗ್ಗೆ ತಲೆಕೆಡಿಸಿಕೊಳ್ಳದಿದ್ದರೂ ಬಿಜೆಪಿಗೆ ಎಲ್ಲೋ ಒಂದು ಕಡೆ ಭಯವಿದೆ. ಹೀಗಾಗಿ ರಾಷ್ಟ್ರೀಯ ನಾಯಕರು ಜಾಗೃತರಾಗುತ್ತಿದ್ದು, ಮೇಲಿನಿಂದ ಮೇಲೆ ರಾಜ್ಯಕ್ಕೆ ಆಗಮಿಸಿ ಪಕ್ಷವನ್ನು ಗಟ್ಟಿಗೊಳಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಯವಿರುವುದು ಜೆಡಿಎಸ್ ಮೇಲೆ ಕಾರಣ ಕಾಂಗ್ರೆಸ್‌ನ ಓಟ್ ಬ್ಯಾಂಕ್‌ಗೆ ಕನ್ನ ಹಾಕುವ ಶಕ್ತಿಯಿರುವುದು ಜೆಡಿಎಸ್ ಗೆ ಮಾತ್ರ. ಮೊದಲಿನಿಂದಲೂ ಕಾಂಗ್ರೆಸ್‌ಗೆ ಅಲ್ಪ ಸಂಖ್ಯಾತರ ಮತಗಳು ಗಟ್ಟಿಯಾಗಿದ್ದು, ಅದನ್ನು ಕಳೆದುಕೊಳ್ಳದಂತೆ ಎಚ್ಚರಿಕೆ ವಹಿಸುತ್ತಿದೆ. ಹೀಗಿರುವಾಗ ಜೆಡಿಎಸ್ ಸರ್ವಜನಾಂಗದ ಶಾಂತಿಯ ತೋಟದ ಮಂತ್ರ ಜಪಿಸುತ್ತಾ ಆರ್‌ಎಸ್‌ಎಸ್, ಹಿಂದೂ ನಾಯಕರ ಮೇಲೆ ವಾಗ್ದಾಳಿ ನಡೆಸುವುದರೊಂದಿಗೆ ಅಲ್ಪ ಸಂಖ್ಯಾತರ ಮತ ಸೆಳೆಯುವ ತಂತ್ರವನ್ನು ಈ ಬಾರಿ ಮಾಡುತ್ತಿದೆ.
ಜೆಡಿಎಸ್ ವಿರುದ್ಧ ಬಿ ಟೀಂ ಅಸ್ತ್ರ ಪ್ರಯೋಗ
ಕಳೆದ ವರ್ಷ ಧರ್ಮ ದಂಗಲ್ ಆದ ವೇಳೆ ಕಾಂಗ್ರೆಸ್ ಮೌನಕ್ಕೆ ಶರಣಾಗಿತ್ತು. ಈ ವೇಳೆ ಜೆಡಿಎಸ್‌ನ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತ ಪರ ಧ್ವನಿ ಎತ್ತಿದ್ದರು. ಜೊತೆಗೆ ಹಿಂದೂ ಸಂಘಟನೆಗಳ ವಿರುದ್ಧವೇ ವಾಗ್ದಾಳಿ ನಡೆಸಿದ್ದರು. ಇತ್ತೀಚೆಗಿನ ದಿನಗಳಲ್ಲಿ ಸದಾ ಆರ್‌ಎಸ್‌ಎಸ್ ವಿರುದ್ಧವೇ ಧ್ವನಿ ಎತ್ತುತ್ತಿರುವ ಜೆಡಿಎಸ್‌ನ ನಡೆ ಕಾಂಗ್ರೆಸ್ ನಾಯಕರ ಎದೆಯಲ್ಲಿ ನಡುಕ ಹುಟ್ಟಿಸಿದೆ.
ಎಲ್ಲಿ ಅಲ್ಪ ಸಂಖ್ಯಾತರು ಜೆಡಿಎಸ್ ಕಡೆಗೆ ಮುಖ ಮಾಡಿಬಿಡುತ್ತಾರೋ ಎಂಬ ಭಯ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ. ಹೀಗಾಗಿಯೇ ಜೆಡಿಎಸ್ ವಿರುದ್ಧ ಅಸ್ತ್ರಗಳನ್ನು ಪ್ರಯೋಗಿಸಲು ಕಾಂಗ್ರೆಸ್ ನಾಯಕರು ಆರಂಭಿಸಿದ್ದು, ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ಆರೋಪವನ್ನು ಮಾಡುತ್ತಿದ್ದಾರೆ. ಕಳೆದ ಬಾರಿಯೂ ಕಾಂಗ್ರೆಸ್ ಜೆಡಿಎಸ್ ವಿರುದ್ಧ ಇದೇ ಅಸ್ತ್ರ ಪ್ರಯೋಗಿಸಿತ್ತು. ಇದೀಗ ಮತ್ತೆ ಅದನ್ನೇ ಮಾಡುತ್ತಿದೆ. ಈ ರೀತಿ ಮಾಡಿದರೆ ಅಲ್ಪಸಂಖ್ಯಾತ ಮತಗಳನ್ನು ಗಟ್ಟಿಮಾಡಿಕೊಳ್ಳಬಹುದು ಎನ್ನುವ ಲೆಕ್ಕಾಚಾರ ಕಾಂಗ್ರೆಸ್‌ನದ್ದಾಗಿದೆ.
ನೂರು ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಸ್ಪರ್ಧೆ
ಇದೆಲ್ಲದರ ನಡುವೆ ಈ ಬಾರಿ ಎಸ್‌ಡಿಪಿಐ ಸುಮಾರು ನೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತದೆ ಎಂದು ಹೇಳಲಾಗುತ್ತಿದ್ದು, ಹಾಗೇನಾದರೂ ಮಾಡಿದರೆ ಅದರ ಪರಿಣಾಮಗಳು ಕಾಂಗ್ರೆಸ್ ಮತ್ತು ಜೆಡಿಎಸ್ ಮೇಲೆ ಬೀರಲಿದೆ. ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಕೈಬಿಟ್ಟು ಹೋದರೆ ಹೆಚ್ಚಿನ ಲಾಭ ಬಿಜೆಪಿಗೆ ಆಗಲಿದೆ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ.
ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬಹಳಷ್ಟು ಬೆಳವಣಿಗೆಗಳು ನಡೆಯಲಿದ್ದು, ಕೇವಲ ಗೆಲುವು ಒಂದೇ ಮೂರು ಪಕ್ಷಗಳಿಗೆ ಪ್ರಮುಖವಾಗಿರುವುದರಿಂದ ಗೆಲುವಿಗಾಗಿ ಯಾವುದೆಲ್ಲ ತಂತ್ರಗಳನ್ನು ಮಾಡಲಿದ್ದಾರೋ ಗೊತ್ತಿಲ್ಲ. ಆದರೆ ಯಾರಿಗೂ ಈ ಬಾರಿ ಗೆಲುವು ಅಷ್ಟು ಸುಲಭವಾಗಿಲ್ಲ ಎನ್ನುವುದಂತೂ ಅಸಲಿ ಸತ್ಯವಾಗಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications