ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲಾ ನಿರ್ವಹಣೆಗೆ ಪೋಷಕರಿಂದ ಶುಲ್ಕ ವಸೂಲಿ: ಎಎಪಿ ಕಿಡಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21: ಮುಖ್ಯಮಂತ್ರಿ ಹಾಗೂ ಸಚಿವರ 40 ಪರ್ಸೆಂಟ್ ಕಮಿಷನ್‌ ದಂಧೆಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿದೆ. ಹೀಗಾಗಿ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪೋಷಕರಿಂದ ತಿಂಗಳಿಗೆ 100 ರೂಪಾಯಿ ಪಡೆಯುವ ಹಂತಕ್ಕೆ ತಲುಪಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಆರೋಪಿಸಿದರು.

ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ದಾಸರಿ, ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಶೂಗಳನ್ನು ಖರೀದಿಸುವಂತೆ ರಾಜ್ಯ ಸರ್ಕಾರವು ಶಾಲೆಗಳಿಗೆ ಈ ಹಿಂದೆ ಆದೇಶ ಹೊರಡಿಸಿತ್ತು. ಈಗ ಡೆಸ್ಕ್‌, ವಿದ್ಯುತ್‌ ಬಿಲ್‌ ಇನ್ನಿತರ ಖರ್ಚುಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳು 100 ರೂಪಾಯಿ ಶುಲ್ಕ ಪಡೆಯಲು ಮುಂದಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸಿ ಆದೇಶಿಸಿದೆ. ಬಿಜೆಪಿ ಆಡಳಿತದಲ್ಲಿ ಮಿತಿಮೀರಿದ ಭ್ರಷ್ಟಾಚಾರದಿಂದ ಸರ್ಕಾರ ದಿವಾಳಿಯಾಗಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ದೂರಿದರು.

 ಶಾಲಾ ಮಕ್ಕಳ ಪೋಷಕರಿಂದ ದೇಣಿಗೆ ಸಂಗ್ರಹ: ಕಾಂಗ್ರೆಸ್‌ ನಾಯಕರಿಂದ ಆಕ್ರೋಶ ಶಾಲಾ ಮಕ್ಕಳ ಪೋಷಕರಿಂದ ದೇಣಿಗೆ ಸಂಗ್ರಹ: ಕಾಂಗ್ರೆಸ್‌ ನಾಯಕರಿಂದ ಆಕ್ರೋಶ

ಖಾಸಗಿ ಶಾಲೆಗಳಿಗೆ ಹೋಗಲು ಸಾಧ್ಯವಾಗದ ಹಾಗೂ ಸರ್ಕಾರಿ ಶಾಲೆಯಲ್ಲಿ ಓದಬೇಕೆಂದು ಬಯಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ರಾಜ್ಯ ಸರ್ಕಾರಗಳ ಹೊಣೆ. ಹೀಗೆಂದು ಸಂವಿಧಾನದ 21ಎ ವಿಧಿಯು ಸ್ಪಷ್ಟವಾಗಿ ತಿಳಿಸಿದೆ. ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್‌ 3ರ ಪ್ರಕಾರ ಎಂಟನೇ ತರಗತಿ ತನಕ ಯಾವುದೇ ಅಡ್ಡಿಯಿಲ್ಲದೇ ಸರ್ಕಾರವು ಶಿಕ್ಷಣ ನೀಡಬೇಕು ಎಂದರು.

AAP against the collect from parents for school management by Karnataka government

ಆದರೆ ಇಂದು ರಾಜ್ಯ ಸರ್ಕಾರವು ಈ ಎರಡೂ ಕಾನೂನುಗಳ ಉದ್ದೇಶವನ್ನು ಗಾಳಿಗೆ ತೂರಿದೆ. ವಿದ್ಯಾರ್ಥಿಗಳ ಪೋಷಕರಿಂದ ಹಣ ವಸೂಲಿ ಮಾಡಲು ಮುಂದಾಗಿದೆ. ಹಣ ಪಾವತಿಸಲು ಸಾಧ್ಯಗುವ ಪೋಷಕರ ಮಕ್ಕಳಿಗೆ ಮಾತ್ರ ಶಿಕ್ಷಣ ನೀಡಲು ಸರ್ಕಾರ ನಿರ್ಧರಿಸಿದಂತಿದೆ ಎಂದು ಮೋಹನ್ ದಾಸರಿ ಆಕ್ರೋಶ ಹೊರಹಾಕಿದರು.

ಕರ್ನಾಟಕದ ಸರ್ಕಾರಿ ಶಾಲೆಗಳಿಗೆ 'ರಾಜಕಳೆ' ನೀಡಲು 100 ರೂ. ಕೊಡಿ ಪ್ಲೀಸ್!ಕರ್ನಾಟಕದ ಸರ್ಕಾರಿ ಶಾಲೆಗಳಿಗೆ 'ರಾಜಕಳೆ' ನೀಡಲು 100 ರೂ. ಕೊಡಿ ಪ್ಲೀಸ್!

ದೆಹಲಿ: ಶಿಕ್ಷಣಕ್ಕಾಗಿ ಶೇ.25ರಷ್ಟು ಅನುದಾನ ಮೀಸಲು

ಎಎಪಿ ನೀತಿ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರಕಾಶ್ ನೆಡುಂಗಡಿ ಮಾತನಾಡಿ, ದೆಹಲಿಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷದ ಸರ್ಕಾರವು ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಸುಮಾರು ಶೇ. 25ರಷ್ಟು ಅನುದಾನ ಮೀಸಲಿಡುತ್ತದೆ. ಅಲ್ಲಿನ ಶಾಲೆಗಳಿಗೆ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಎಎಪಿ ಸರ್ಕಾರ ಒದಗಿಸುತ್ತಿದೆ ಎಂದು ವಿವರಿಸಿದರು.

AAP against the collect from parents for school management by Karnataka government

ಆದರೆ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡುವ ಬದಲು ಪೋಷಕರಿಂದ ಹಣ ವಸೂಲಿ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಈವರೆಗೆ ವಿವಿಧ ತೆರಿಗೆಗಳನ್ನು ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಲಾಗಿದೆ. ಬಿಜೆಪಿ ಸರ್ಕಾರವು ಈಗ ಪೋಷಕರಿಂದ ಹಣ ಪಡೆಯುವ ಮೂಲಕ ಹಗಲು ದರೋಡೆಗೆ ಇಳಿದಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಹಾಗೂ ಇನ್ನಿತರು ಮುಖಂಡರು ಪಾಲ್ಗೊಂಡಿದ್ದರು.

English summary
Aam Aadmi Party sparks against Karnataka government's decision to collect money from parents for school maintenance,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X