ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು
ಬೆಂಗಳೂರು, ಜನವರಿ 05: ದೆಹಲಿ ಮತ್ತು ಪಂಜಾಬ್ ಮಾದರಿಯಲ್ಲಿ ರಾಜ್ಯದ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಕರ್ನಾಟಕದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಒಂದು ವಾರದಿಂದ ರಾಜ್ಯದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ, ತುಮಕೂರು ಸಿದ್ಧಗಂಗಾ ಮಠದಿಂದ ಬೃಹತ್ ಪಾದಯಾತ್ರೆ ಮೂಲಕ ಬೆಂಗಳೂರಿಗೆ ಆಗಮಿಸಲಾಗಿದೆ. ಎಎಪಿ ನಾಯಕರು, ಕಾರ್ಯಕರ್ತರು ಇದೀಗ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಮತ್ತು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದೆ.

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 11 ಸಾವಿರಕ್ಕಿಂತ ಹೆಚ್ಚಿನ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇವರಿಗೆ ಸರಿಯಾದ ವೇತನ ಸಿಗುತ್ತಿಲ್ಲ. ಸಾವಿರಾರು ಉಪನ್ಯಾಸಕರ ವಯೋಮಿತಿ ಮೀರುತ್ತಿದೆ. ಕೆಲಸ ಕಾಯಂ ಆಗದೇ ಇರುವುದು ಆತಂಕಕ್ಕೆ ಕಾರಣವಾಗಿದೆ.
ಅವೈಜ್ಞಾನಿಕ ಪದ್ಧತಿಯಿಂದ ಶಿಕ್ಷಣದ ಗುಣಮಟ್ಟ ಹಾಳು
ಅತಿಥಿ ಉಪನ್ಯಾಸಕರ ವೇತನ ಕಡಿಮೆ ಇದ್ದು, ಅದೂ ಕೂಡ ಸಮಯಕ್ಕೆ ಸರಿಯಾಗಿ ಪಾವತಿಯಾಗುತ್ತಿಲ್ಲ. ಅತಿಥಿ ಉಪನ್ಯಾಸಕ ಎನ್ನುವ ಅವೈಜ್ಞಾನಿಕ ಪದ್ಧತಿಯಿಂದ ಶಿಕ್ಷಣದ ಗುಣಮಟ್ಟ ಕೂಡ ಹಾಳಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು ಮನವಿ ಪತ್ರದಲ್ಲಿ ವಿವರಿಸಿದ್ದಾರೆ.
ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂ ಗೊಳಿಸುವುದಾಗಿ ಕಾಂಗ್ರೆಸ್ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಭರವಸೆ ನೀಡಿತ್ತು. ಈಗ ಕೊಟ್ಟ ಮಾತಿನಂತೆ ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರದ ಮಾದರಿಯಲ್ಲಿ ವಿಶೇಷ ನಿಯಮಾವಳಿ ರೂಪಿಸಿ ಸೇವೆ ಕಾಯಂ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ.

ನಿರಂತರ ಪ್ರತಿಭಟನೆ ನಡೆಸಿರುವ ಎಎಪಿಯು, 12 ತಿಂಗಳ ವೇತನ, ಸೇವಾಭದ್ರತೆ, ಉಪನ್ಯಾಸಕರಿಗೆ ವೇತನ ಸಹಿತ ಹೆರಿಗೆ ರಜೆ, ಖಾಸಗಿ ನೌಕರರ ರೀತಿ ಗ್ಯಾಚ್ಯುಟಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದೆ.
ಸೇವಾ ಭದ್ರತೆ ಒದಗಿಸುವಂತೆ ಎಎಪಿ ಆಗ್ರಹ
ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿದ ಉದಾಹರಣೆ ಇಲ್ಲ ಎಂದಿರುವ ಉನ್ನತ ಶಿಕ್ಷಣ ಸಚಿವ ಡಾ. ಎ.ಸಿ. ಸುಧಾಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಎಎಪಿ ನಾಯಕ ಪೃಥ್ವಿ ರೆಡ್ಡಿ ಅವರು ದೆಹಲಿ, ಪಂಜಾಬ್ ಸರ್ಕಾರಗಳು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿರುವ ದಾಖಲೆಗಳಿವೆ. ಇದನ್ನು ಮುಂದಿಟ್ಟುಕೊಂಡು ಅವರಿಗೆ ಸೇವಾ ಭದ್ರತೆ ಒದಗಿಸುವಂತೆ ಸವಾಲು ಒಡ್ಡಿದರು.
2023ರ ಜುಲೈನಲ್ಲಿ ಪಂಜಾಬ್‌ನಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಲಾಗಿದೆ. ಮಾತ್ರವಲ್ಲದೆ 9,500 ರೂ. ಇದ್ದ ಸಂಬಳವನ್ನು 20,500 ರೂ.ಗೆ ಹೆಚ್ಚಿಸಲಾಗಿದೆ. ಆದರೆ, ಕರ್ನಾಟಕದಲ್ಲಿ 10,500 ರೂ. ಇದ್ದ ಸಂಬಳವನ್ನು 12,000 ರೂ.ಗೆ ಹೆಚ್ಚಿಸಿ ಕೈತೊಳೆದುಕೊಂಡಿದ್ದಾರೆ ಎಂದು ತಿಳಿಸಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್











Click it and Unblock the Notifications