• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಂಡ ಬಾಕಿ ಉಳಿಸಿಕೊಂಡವರಿಗಿಲ್ಲ ದಾಖಲೆ: ಸರ್ಕಾರದ ನಿರ್ಧಾರಕ್ಕೆ ಎಎಪಿ ತೀವ್ರ ವಿರೋಧ

|
Google Oneindia Kannada News

ಬೆಂಗಳೂರು, ನವೆಂಬರ್ 28 : ಸಣ್ಣಪುಟ್ಟ ಸಂಚಾರ ನಿಯಮ ಉಲ್ಲಂಘನೆಗೂ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತಿದ್ದು, ಇದನ್ನು ಕಟ್ಟಲು ಸಾಧ್ಯವಾಗದ ಬಡ-ಮಧ್ಯಮ ವರ್ಗದ ವಾಹನ ಸವಾರರಿಗೆ ಅಗತ್ಯ ದಾಖಲೆಗಳನ್ನು ನೀಡದಿರಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿರುವುದು ಅತ್ಯಂತ ಅಮಾನವೀಯ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದಂಡ ಕಟ್ಟಲು ಸಾಧ್ಯವಾಗದೇ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ವಿಮಾ ಪಾಲಿಸಿ ನವೀಕರಣ, ರಸ್ತೆ ತೆರಿಗೆ ಪಾವತಿ ರಸೀದಿ ಹಾಗೂ ವಾಹನ ಕ್ಷಮತೆ ಪ್ರಮಾಣಪತ್ರ ನೀಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಾಹನ ಸವಾರರಿಗೆ ಗುಂಡಿಗಳಿಲ್ಲದ ಗುಣಮಟ್ಟದ ರಸ್ತೆ ನಿರ್ಮಿಸಿಕೊಡಲೂ ಸಾಧ್ಯವಾಗದ ರಾಜ್ಯ ಸರ್ಕಾರವು ದಂಡ ವಸೂಲಿಗೆ ಮಾತ್ರ ಕಠಿಣ ನಿಲುವು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ಬಹುತೇಕ ವಾಹನ ಸವಾರರ ಮೇಲೆ ಕನಿಷ್ಠ 2,000 ರೂಪಾಯಿಯಿಂದ 40,000 ರೂಪಾಯಿ ತನಕ ದಂಡವಿದೆ. ಇದರಲ್ಲಿ ಹೆಚ್ಚಿನವರು ಬಡ ಹಾಗೂ ಮಧ್ಯಮ ವರ್ಗದವರಾಗಿದ್ದು, ಸರ್ಕಾರದ ನೂತನ ನಿರ್ಧಾರದಿಂದ ಇವರಿಗೆ ತೀವ್ರ ತೊಂದರೆಯಾಗಲಿದೆ" ಎಂದು ಹೇಳಿದರು.

"ಬೆಂಗಳೂರಿನಲ್ಲಿ ಸಂಚಾರದಟ್ಟಣೆಯು ದೊಡ್ಡ ಸಮಸ್ಯೆಯಾಗಿದ್ದು, ಇದರಿಂದ ವಾಹನಸವಾರರು ಪ್ರತಿದಿನ ಹೈರಾಣಾಗುತ್ತಿದ್ದಾರೆ. ಅವರ ಅಮೂಲ್ಯ ಸಮಯವು ರಸ್ತೆಯಲ್ಲಿ ವ್ಯರ್ಥವಾಗುತ್ತಿದೆ. ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಸಂಚಾರದಟ್ಟಣೆ ನಿರ್ವಹಣೆ ಮಾಡಲು ಬಳಸಿಕೊಳ್ಳುವ ಬದಲು ಕೇವಲ ದಂಡ ವಸೂಲಿ ಮಾಡಲು ಬಳಸಿಕೊಳ್ಳಲಾಗುತ್ತಿದೆ. ವಾಹನ ಸವಾರರನ್ನು ಲೂಟಿ ಮಾಡುವುದೇ ಪೊಲೀಸ್‌ ಇಲಾಖೆಯ ಆದ್ಯತೆಯ ವಿಷಯವಾಗಿದೆ" ಎಂದು ಜಗದೀಶ್‌ ವಿ ಸದಂ ಆಕ್ರೋಶ ವ್ಯಕ್ತಪಡಿಸಿದರು.

"ಬೆಂಗಳೂರಿನ ರಸ್ತೆಗಳಿಗೆಂದು ಬಿಡುಗಡೆಯಾದ 26,000 ಕೋಟಿ ರೂಪಾಯಿ ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿಯಿಂದ ಬಿಡುಗಡೆಯಾದ 10,000 ಕೋಟಿ ರೂಪಾಯಿ ಬಹುಪಾಲು ಹಣವು ಜನಪ್ರತಿನಿಧಿಗಳ ಜೇಬು ಸೇರಿದೆ. ಪರಿಣಾಮವಾಗಿ, ವಾಹನ ಸವಾರರು ನಾನಾ ರೀತಿಯ ತೊಂದರೆ ಅನುಭವಿಸುವಂತಾಗಿದೆ. ಗಾಯದ ಮೇಲೆ ಬರೆ ಎಂಬಂತೆ ಸರ್ಕಾರ ಇನ್ನಷ್ಟು ನಿಯಮಗಳನ್ನು ತಂದು ಅವರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ.

AAP Oppose State Government new rules about those who do not pay the Traffic fine

ದಂಡ ಪಾವತಿಸದವರಿಗೆ ಅಗತ್ಯ ದಾಖಲೆಗಳನ್ನು ನೀಡುವುದಿಲ್ಲವೆಂಬ ನಿರ್ಧಾರವನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಶೀಘ್ರವೇ ಹಿಂಪಡೆಯಬೇಕು. ಇಲ್ಲದಿದ್ದರೆ ಆಮ್‌ ಆದ್ಮಿ ಪಾರ್ಟಿಯು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಲಿದೆ. ವಾಹನ ಸವಾರರ ಜೊತೆಗೂಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ" ಎಂದು ಜಗದೀಶ್‌ ವಿ ಸದಂ ಹೇಳಿದರು.

English summary
Aam Aadmi Party's state media coordinator Jagdish V Sadam says, BJP government's decision to not provide the necessary documents for those unable to pay a huge traffic fine is inhuman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X