ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ರಾಜ್ಯ ಬಜೆಟ್ 2021: ಆಮ್ ಆದ್ಮಿ ಪಕ್ಷ ಬೇಡಿಕೆಗಳೇನು?

|
Google Oneindia Kannada News

ಬೆಂಗಳೂರು, ಮಾರ್ಚ್ 5: ಶಿಕ್ಷಣ, ಆರೋಗ್ಯ, ಸಾರಿಗೆ, ಸಣ್ಣ ಕೈಗಾರಿಕೆ ಹಾಗೂ ಮಹಿಳೆಯರು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಪ್ರಮುಖ ಆದ್ಯತೆ ನೀಡಬೇಕು. ಈ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗಮನ ಹರಿಸಲೇ ಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ನುಡಿದರು.

ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಅತ್ಯಂತ ಕಳಪೆ ಬಜೆಟ್ ಮಂಡಿಸಿದ್ದ ಯಡಿಯೂರಪ್ಪ ಅವರು ಕೊಟ್ಟಂತಹ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ.

ಇಷ್ಟು ದೊಡ್ಡ ರಾಜ್ಯದಲ್ಲಿ ಇರಬೇಕಾಗಿದ್ದ ಸಮರ್ಪಕ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ. ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತಿರುವುದು ಕೇವಲ ಶೇ 3.8 ರಷ್ಟು ಮಾತ್ರ. ಜನಸಾಮಾನ್ಯ ಖಾಸಗಿ ಆಸ್ಪತ್ರೆಗಳ ನಡುವೆ ಸಿಲುಕಿಕೊಂಡು ನರಳಿ ಹೋಗುತ್ತಿದ್ದಾನೆ. ಆದ ಕಾರಣ ನಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಹೇಳಿದರು.

AAP releases list of expectations from Karnataka Budget 2021

ಕೊರೋನಾ ಕಾರಣ ಇಡೀ ಶೈಕ್ಷಣಿಕ ವ್ಯವಸ್ಥೆ ಕುಸಿದು ಹೋಗಿದೆ. ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳದಿಂದ ಅನೇಕ ಪೋಷಕರು ಈಗಲೂ ಒದ್ದಾಡುತ್ತಿದ್ದಾರೆ. ನಮ್ಮ ಸರ್ಕಾರಿ ಶಾಲೆಗಳು ಸಬಲವಾಗಿ ಇದ್ದಿದ್ದರೆ ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಆದ ಕಾರಣ ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕೂಡ ಜನಸಾಮಾನ್ಯರಿಂದ ದೂರವಾಗುತ್ತಲೇ ಇದೆ. ಈ ಕ್ಷೇತ್ರಕ್ಕೂ ಸರಿಯಾದ ಪ್ರಾಶಸ್ತ್ಯ ನೀಡಬೇಕು ಅಲ್ಲದೇ ಆರ್ಥಿಕತೆಯ ಜೀವ ಸೆಲೆಯಂತೆ ಇದ್ದ ಸಣ್ಣ ಕೈಗಾರಿಕೆಗಳು ಲಾಕ್‌ಡೌನ್ ಕಾರಣ ಚೇತರಿಕೆ ಆಗದಷ್ಟು ಹೊಡೆತ ತಿಂದಿವೆ ಆದ ಕಾರಣ ಇವುಗಳ ಪುನಶ್ಚೇತನಕ್ಕೆ ಹೆಚ್ಚಿನ ಅನುದಾನ ನೀಡಲೇಬೇಕು ಎಂದು ಆಗ್ರಹಿಸಿದರು.

ನೀತಿ ಮತ್ತು ಸಂಶೋಧನಾ ವಿಭಾಗದ ಪ್ರಕಾಶ್ ನೆಡುಂಗಡಿ ಮಾತನಾಡಿ, ಹೊಸ ಹಾಗೂ ಹಳೇ ತೆರಿಗೆಗಳನ್ನು ಹೆಚ್ಚಳ ಮಾಡಬಾರದು. ಸರ್ಕಾರದ ಅನವಶ್ಯಕ ಖರ್ಚುಗಳನ್ನು ಕಡಿಮೆ ಮಾಡಬೇಕು ಹಾಗೂ ಭ್ರಷ್ಟಾಚಾರ ನಿಯಂತ್ರಣ ಮಾಡಿದರೆ ಸಾಕು. ಉತ್ತಮ ಬಜೆಟ್ ಮಂಡಿಸಬಹುದು ಎಂದು ಸಲಹೆ ನೀಡಿದರು.

ದೆಹಲಿಯಲ್ಲಿ ಸರ್ಕಾರ ಕಳೆದ 6 ವರ್ಷಗಳಿಂದ ಕಿಂಚಿತ್ತೂ ತೆರಿಗೆ ಹೆಚ್ಚಳ ಮಾಡಿಲ್ಲ ಆದರೂ ಸರ್ಕಾರದ ಆದಾಯ ದ್ವಿಗುಣಗೊಂಡಿದೆ. ಏಪ್ರಿಲ್ 2020 ರಲ್ಲಿ ತಯಾರಿಸಿದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯ ತೆರಿಗೆಯನ್ನು ಉಳಿಸಿದರು ರಾಜ್ಯ ಸರ್ಕಾರದ ಆದಾಯ ದ್ವಿಗೊಂಡಿದೆ ಏಕೆಂದರೆ ಉತ್ತಮ ಆರ್ಥಿಕ ಶಿಸ್ತು ಇದಕ್ಕೆ ಕಾರಣ. ಈ ರೀತಿಯಲ್ಲಿ ಈ ಬಾರಿಯ ಕರ್ನಾಟಕ ಬಜೆಟ್ ರೂಪಿಸಬೇಕು ಎಂದು ಆಗ್ರಹಿಸಿದರು.

English summary
AAP Karnataka releases list of expectations from Karnataka Budget 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X