ಮದನಿಗೆ ಜಾಮೀನು ವಿಸ್ತರಣೆ, ಕೇರಳಕ್ಕೆ ಹೋಗುವಂತಿಲ್ಲ
ಬೆಂಗಳೂರು, ಸೆ. 26 : 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಆರೋಪಿ ಅಬ್ದುಲ್ ನಾಸಿರ್ ಮದನಿ ಜಾಮೀನು ಅವಧಿಯನ್ನು ಒಂದು ತಿಂಗಳು ವಿಸ್ತರಣೆ ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಆದರೆ, ಕೇರಳಕ್ಕೆ ಭೇಟಿ ನೀಡಲ ಅವಕಾಶ ಮಾಡಿಕೊಡಬೇಕು ಎಂಬ ಮದನಿ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಜು.11ರಂದು ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ ಸ್ಥಾಪಕ ಅಬ್ದುಲ್ ನಾಸಿರ್ ಮದನಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ನಂತರ ಆ.23ರಂದು ಅದನ್ನು ಪುನಃ ನಾಲ್ಕು ವಾರಗಳ ಕಾಲ ವಿಸ್ತರಣೆ ಮಾಡಿತ್ತು. ಸದ್ಯ, ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಪುನಃ ಒಂದು ತಿಂಗಳು ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ.[ಅಬ್ದುಲ್ ನಾಸಿರ್ ಮದನಿಗೆ ಜಾಮೀನು]

ಶುಕ್ರವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಮದನಿ ಪರ ವಕೀಲರು ಕೇರಳಕ್ಕೆ ತೆರಳಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಆದರೆ, ಈ ಮನವಿಯನ್ನು ಕೋರ್ಟ್ ತಳ್ಳಿಹಾಕಿದೆ. ಒಂದು ವೇಳೆ ಪ್ರಕರಣದ ಸಾಕ್ಷಿಗಳ ಜೊತೆ ಮದನಿ ಮಾತುಕತೆ ನಡೆಸುವುದು ತಿಳಿದುಬಂದರೆ, ತಕ್ಷಣದಿಂದಲೇ ಜಾಮೀನು ಅರ್ಜಿ ವಜಾಗೊಳ್ಳುತ್ತದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.[ಮದನಿ ಮೇಲಿನ ಆರೋಪಗಳೇನು?]
2008ರ ಜುಲೈ 25ರಂದು ಬೆಂಗಳೂರಿನಲ್ಲಿ ಸಂಭವಿಸಿದ ಸರಣಿ ಸ್ಫೋಟದ ರೂವಾರಿಯಾದ ಅಬ್ದುಲ್ ನಾಸಿರ್ ಮದನಿ 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಮದನಿ ಮೇಲೆ ಉಗ್ರ ಚಟುವಟಿಕೆ, ಕೊಲೆ ಯತ್ನ ಮುಂತಾದ ಆರೋಪಗಳಿವೆ. ಅಂಧತ್ವ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಮದನಿಗೆ ಖಾಸಗಿ ಆಸ್ಪತ್ರೆಯಲ್ಲಿ ಕರ್ನಾಟಕ ಸರ್ಕಾರ ಚಿಕಿತ್ಸೆ ಕೊಡಿಸಿದೆ. [ಮದನಿ ಯಾರು, ಆತನ ಪ್ರತಾಪಗಳೇನು?]
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications