Get Updates
Get notified of breaking news, exclusive insights, and must-see stories!

ನಾನು ಇರುವವರೆಗೂ ಅಭಿಷೇಕ್ ಅಂಬರೀಶ್ ರಾಜಕೀಯಕ್ಕೆ ಬರಲ್ಲ, ಇದು ಸತ್ಯ: ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು?

ಮಂಡ್ಯ, ಮಾರ್ಚ್‌ 10: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಭಾನುವಾರ ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನ, ಅಂದರೆ ಶುಕ್ರವಾರ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಭಾರತೀಯ ಜನತಾ ಪಕ್ಷಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಮುಂಬರವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಅವರು ಸ್ಪಷ್ಟಪಡಿಸಿದರು.

ಪ್ರಧಾನಿ ಮೋದಿ ಅವರು ಭಾರತಕ್ಕೆ ತಂದುಕೊಟ್ಟಿರುವ ಗಣತೆ ಹಾಗೂ ಜಗತ್ತಿನಾದ್ಯಂತ ದೇಶವು ಗಳಿಸಿದ ಖ್ಯಾತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸುಮಲತಾ ಹೇಳಿದರು.

Abhishek Ambareesh will not join politics until I am in politics Says Sumalatha

ಲೋಕಸಭೆಯಲ್ಲಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸುವ ಸುಮಲತಾ ಅವರು ತಾವು ಇರುವವರೆಗೂ ತಮ್ಮ ಮಗ ಅಭಿಷೇಕ್ ರಾಜಕೀಯಕ್ಕೆ ಬರುವುದಿಲ್ಲ ಎಂದು ಭರವಸೆ ನೀಡಿದರು. ಅವರು ಕುಟುಂಬ ರಾಜಕಾರಣದ ವಿರುದ್ಧವಾಗಿದ್ದಾರೆಂದು ತಿಳಿಸಿದರು.

'ನನ್ನ ಹಿತೈಷಿಗಳು ಮತ್ತು ಬೆಂಬಲಿಗರನ್ನು ಸಂಪರ್ಕಿಸಿದ ನಂತರ, ನಾನು ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಈ ದಿನದಿಂದ ನಾನು ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ನನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ' ಎಂದು ಹೇಳಿದರು.

ಪಕ್ಷೇತರ ಸಂಸದೆಯಾಗಿ ನಾಲ್ಕು ವರ್ಷಗಳಲ್ಲಿ ಹಲವಾರು ಸವಾಲುಗಳನ್ನು ಎದುರಿಸಿದೆ. ವಿಶೇಷವಾಗಿ ಸಾರ್ವಜನಿಕ ಸಭೆಗಳನ್ನು ನಡೆಸುವಲ್ಲಿ ಅಡೆತಡೆಗಳನ್ನು ಎದುರಿಸಿದ್ದೇನೆ. ನನಗೆ ಪಕ್ಷವೊಂದರ ಬೆಂಬಲದ ಅಗತ್ಯವಿದೆ ಎಂದು ಅವರು ತಿಳಿಸಿದರು.

Abhishek Ambareesh will not join politics until I am in politics Says Sumalatha

'ಜನರು ತಮ್ಮ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು. ಆದರೆ ಪ್ರಪಂಚದಾದ್ಯಂತ ಮೆಚ್ಚುಗೆ ಪಡೆದಿರುವ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನನಗೆ ನಂಬಿಕೆ ಇದೆ' ಎಂದು ಸುಮಲತಾ ಹೇಳಿದರು.

ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ದೇಶದ ಪ್ರಧಾನಿ ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತಿರುವುದು ಮಂಡ್ಯಕ್ಕೆ ಸಂದ ಗೌರವ ಎಂದರು.

ಪ್ರಧಾನಿ ಮೋದಿಯವರು ಮೈಸೂರು ಅಥವಾ ಬೆಂಗಳೂರಿನಲ್ಲಿ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಬಹುದಿತ್ತು. ಆದರೆ ಅವರು ಮಂಡ್ಯವನ್ನು ಆರಿಸಿಕೊಂಡರು. ಇದು ಜಿಲ್ಲೆಯ ಮಹತ್ವವನ್ನು ತೋರಿಸುತ್ತದೆ ಎಂದು ಸಂಸದರು ಹೇಳಿದರು.

Abhishek Ambareesh will not join politics until I am in politics Says Sumalatha

ಮಂಡ್ಯದ ಸರ್ವಾಂಗೀಣ ಅಭಿವೃದ್ಧಿಯ ಉದ್ದೇಶದಿಂದ ಈ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಸಂಸದರು ಸ್ಪಷ್ಟಪಡಿಸಿದರು.

ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಸುಮಲತಾ ಅವರು ಮಂಡ್ಯವನ್ನು ತಮ್ಮಯ ರಾಜಕೀಕೋಟೆಯನ್ನಾಗಿ ಮಾಡಿಕೊಂಡವರು ಜಿಲ್ಲೆಗೆ ಏನನ್ನೂ ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

'ಮಂಡ್ಯದಲ್ಲಿ ಬದಲಾವಣೆಯ ಅಗತ್ಯವಿದೆ. ಇಲ್ಲಿ ಹೀನಾಯ ವಾತಾವರಣ ನಿರ್ಮಾಣವಾಗಿದೆ. ಮೊದಲು ಇಲ್ಲಿ, ಅಂದರೆ ಮಂಡ್ಯದಲ್ಲಿ 'ಸ್ವಚ್ಛ ಭಾರತ್ ಮಿಷನ್' ನಡೆಸೋಣ ಎಂದು ಸುಮಲತಾ ಹೇಳಿದರು.

ಮೋದಿ ಜಿಲ್ಲೆಗೆ ಭೇಟಿ ನೀಡುವ ಎರಡು ದಿನಗಳ ಮೊದಲು ಸುಮಲತಾ ಈ ನಿರ್ಧಾರಕ್ಕೆ ಬಂದಿದ್ದಾರೆ. 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ಸುಮಲತಾ ಅವರನ್ನು ಬೆಂಬಲಿಸಿತ್ತು. ಇದರ ಪರಿಣಾಮವಾಗಿ ಅವರು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರನ್ನು ಸೋಲಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+