ಹಂಗಾಮಿ ಸ್ಪೀಕರ್ ಕೆ.ಜಿ. ಬೋಪಯ್ಯ ನೇಮಕ ಪ್ರಶ್ನಿಸಿ ಸುಪ್ರೀಂಗೆ ಕಾಂಗ್ರೆಸ್
ಬೆಂಗಳೂರು, ಮೇ 18: ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಕೆಜಿ ಬೋಪಯ್ಯರನ್ನು ರಾಜ್ಯಪಾಲ ವಜೂಭಾಯಿ ವಾಲಾ ನೇಮಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.
ಅತ್ಯಂತ ಹಿರಿಯ, 8 ಬಾರಿಯ ಶಾಸಕ ಆರ್. ವಿ. ದೇಶಪಾಂಡೆಯವರನ್ನು ಬದಿಗೊತ್ತಿ 5 ಬಾರಿಯ ಶಾಸಕ ಕೆಜಿ ಬೋಪಯ್ಯರನ್ನು ನೇಮಿಸಿದ್ದಕ್ಕೆ ಕಾಂಗ್ರೆಸ್ ಆಕ್ರೋಶಗೊಂಡಿದ್ದು ಸುಪ್ರೀಂ ಕೋರ್ಟ್ ಈ ಸಂಬಂಧ ದೂರು ನೀಡಲು ನಿರ್ಧರಿಸಿದೆ.
ಈ ಸಂಬಂಧ ದೆಹಲಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ಮತ್ತು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, "ಬಿಜೆಪಿ ನಡೆ ನಿಯಮಾವಳಿಗೆ ವಿರುದ್ಧವಾಗಿದೆ. ಸಾಮಾನ್ಯವಾಗಿ ಅತ್ಯಂತ ಹಿರಿಯ ನಾಯಕರು ಈ ಹುದ್ದೆಯನ್ನು ಅಲಂಕರಿಸಬೇಕು," ಎಂದು ಬೋಪಯ್ಯ ನೇಮಕಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಹಿರಿಯರು
ಬಿಜೆಪಿಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಮೇಶ್ ಕತ್ತಿ ಮತ್ತು ಕಾಂಗ್ರೆಸಿನ ಆರ್.ವಿ. ದೇಶಪಾಂಡೆ 8ನೇ ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಆದರೆ ಇವರನ್ನೆಲ್ಲಾ ಬದಿಗೊತ್ತಿ ರಾಜ್ಯಪಾಲರು 5 ಬಾರಿ ಶಾಸಕ ಕೆಜಿ ಬೋಪಯ್ಯರನ್ನು ಹಂಗಾಮಿ ಸಭಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.












Click it and Unblock the Notifications