Suraj Revanna: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ- ಸೂರಜ್ ಜಾಮೀನು ಅರ್ಜಿ ವಜಾ
ಬೆಂಗಳೂರು ಜುಲೈ 9: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲಾಗಿರುವ ಮಾಜಿ ಸಚಿವ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿ ವಜಾ ಆಗಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣ ಸಂಬಂಧ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. 27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು.
ಕೋರ್ಟ್ ಸೂರ್ಜ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ.

ಏನಿದು ಸೂರಜ್ ರೇವಣ್ಣ ಪ್ರಕರಣ?
ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಎಚ್‌ಡಿ ರೇವಣ್ಣ ಅವರ 37 ವರ್ಷದ ಪುತ್ರ ಸೂರಜ್ ರೇವಣ್ಣ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿತ್ತು. 'ಅಸ್ವಾಭಾವಿಕ ಅಪರಾಧಗಳು' ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
27 ವರ್ಷದ ಚೇತನ್ ಕೆಎಸ್ ಎಂಬುವವರು ದೂರು ನೀಡಿದ್ದಾರೆ. ಸೂರಜ್ ರೇವಣ್ಣ ಅವರು ಜೂನ್ 16 ರಂದು ಹೊಳೆನರಸೀಪುರ ತಾಲೂಕಿನ ಘನ್ನಿಕಡದಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ತನ್ನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ತನಗೆ ಬೆದರಿಕೆ ಹಾಕಿದ್ದಾರೆ. ಅವರು ಕರೆದಾಗಲೆಲ್ಲ ತಮ್ಮ ಫಾರ್ಮ್‌ಹೌಸ್‌ಗೆ ಬರುವಂತೆ ಹೇಳಿದ್ದಾರೆ ಎಂದು ಚೇತನ್ ಆರೋಪಿಸಿದ್ದಾರೆ.

ಸೂರಜ್ ರೇವಣ್ಣನ ಆಪ್ತರೊಬ್ಬರು ಈ ವಿಷಯವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದರು, ಕೆಲಸ ಮತ್ತು ಬಾಯಿ ಮುಚ್ಚಿಕೊಂಡಿರಲು 2 ಕೋಟಿ ರುಪಾಯಿ ನೀಡುವುದಾಗಿಯೂ ಹೇಳಿದ್ದಾರೆ ದೂರು ನೀಡಿದ್ದಾರೆ. ಆದರೆ, ದೂರುದಾರ ಚೇತನ್ ಕೆಎಸ್ ವಿರುದ್ಧ ಸುಲಿಗೆ ಯತ್ನದ ಆರೋಪದಲ್ಲಿ ಪ್ರತಿದೂರು ದಾಖಲಾಗಿದೆ.
ಸೂರಜ್ ರೇವಣ್ಣ ಅವರಿಂದ 5 ಕೋಟಿ ರುಪಾಯಿ ಸುಲಿಗೆ ಮಾಡುವ ಉದ್ದೇಶದಿಂದ 'ಸುಳ್ಳು ದೂರು' ದಾಖಲಿಸಿದ್ದಾರೆ ಎಂದು ಜೆಡಿಎಸ್ ಮುಖಂಡ ಆರೋಪಿಸಿದ್ದಾರೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಜೆಡಿಎಸ್ ಕಾರ್ಯಕರ್ತನ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿದೆ. ಸುಳ್ಳು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಜೆಡಿಎಸ್ ಎಂಎಲ್‌ಸಿಯಿಂದ ಹಣ ವಸೂಲಿ ಮಾಡಲು ಪಕ್ಷದ ಕಾರ್ಯಕರ್ತರು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.












Click it and Unblock the Notifications