Exit Poll Result 2024 Karnataka: ಕರುನಾಡ ಕಿರೀಟ ಹೊತ್ತಿದ್ದು ಕಾಂಗ್ರೆಸ್ ಅಥವಾ ಬಿಜೆಪಿ ಮೈತ್ರಿ? ಸಮೀಕ್ಷೆ ಫಲಿತಾಂಶ ಇಲ್ಲಿದೆ
ನವದೆಹಲಿ, ಜೂನ್. 01: ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆದಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ದೇಶದಲ್ಲಿ ನಡೆದ ಎರಡನೇ ಹಂತದ ಮತದಾನದ ವೇಳೆ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿತ್ತು. ಬಳಿಕ ಮೇ 7 ರಂದು 3ನೇ ಹಂತದ ಮತದಾನ ನಡೆದಿತ್ತು.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿದೆ. ಬಿಜೆಪಿ ಮತ್ತು ಜಾತ್ಯಾತೀತ ಜನತಾದಳ ಮೈತ್ರಿ ಮಾಡಿಕೊಂಡಿವೆ. ಸೀಟು ಹಂಚಿಕೆ ಪ್ರಕಾರ ಬಿಜೆಪಿ 25 ಕ್ಷೇತ್ರಗಳಲ್ಲಿ ಮತ್ತು ಜೆಡಿಎಸ್ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಇದರಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ ಡಾ. ಎನ್‌ಸಿ ಮಂಜುನಾಥ್ ಅವರು ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ ಚುನಾವಣಾ ಫಲಿತಾಂಶದ ಬಗ್ಗೆ ಹೆಚ್ಚು ಕುತೂಹಲ ಉಂಟಾಗಿದೆ.

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆದಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದ ಮತದಾನದ ನಂತರ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚು ಸದ್ದು ಮಾಡಿತ್ತು. ಹೀಗಾಗಿ ಇದು ಎರಡನೇ ಹಂತದ ಮತದಾನದ ಮೇಲೆ ಪ್ರಭಾವ ಬೀರಿರುವ ಸಾಧ್ಯತೆಯಿದೆ. ಇದೇ ವೇಳೆ ಎಬಿಪಿ ನ್ಯೂಸ್ ಮತ್ತು ಸಿವೋಟರ್ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದೆ.
ರಾಜ್ಯದ ಒಟ್ಟು ಕ್ಷೇತ್ರಗಳು 28
ಕಾಂಗ್ರೆಸ್ - 3-5
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ- 23 - 25
ಕರ್ನಾಟಕದಲ್ಲಿ ಕಾಂಗ್ರೆಸ್ 3 ರಿಂದ 5 ಸ್ಥಾನಗಳನ್ನು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಎನ್‌ಡಿಎ 23 ರಿಂದ 25 ಸ್ಥಾನಗಳನ್ನು ಪಡೆದುಕೊಳ್ಳಬಹುದು. I.N.D.I.A. 41.8% ಮತ ಹಂಚಿಕೆಯನ್ನು ಬಿಜೆಪಿ 54.2% ಮತಗಳನ್ನು ಪಡೆಯಬಹುದು ಎಂದು ಅಂದಾಜಿಸಲಾಗಿದೆ.
ಇನ್ನು, ಈ ಹಿಂದೆ ಎಬಿಪಿ ನ್ಯೂಸ್ ಮತ್ತು ಸಿವೋಟರ್ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಬಿಜೆಪಿ ಮಹತ್ವದ ಸ್ಥಾನವನ್ನು ಗಳಿಸಲಿದೆ ಎಂದು ಹೇಳಿತ್ತು. ಬಿಜೆಪಿ - ಜೆಡಿಎಸ್ ಸ್ಪರ್ಧಿಸಿರುವ 28 ಕ್ಷೇತ್ರಗಳಲ್ಲಿ 23 ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್ ಕೇವಲ ಐದು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿತ್ತು.

ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಿತು. ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಏಪ್ರಿಲ್ 26ರಂದು 2ನೇ ಹಂತದಲ್ಲಿ 88 ಕ್ಷೇತ್ರಗಳಿಗೆ, ಮೇ 7ರಂದು 3ನೇ ಹಂತದಲ್ಲಿ 94 ಸ್ಥಾನಗಳಿಗೆ ಮತ್ತು ಮೇ 13ರಂದು 4ನೇ ಹಂತದಲ್ಲಿ 96 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.
ಮೇ 20ರಂದು 5ನೇ ಹಂತದಲ್ಲಿ 49 ಕ್ಷೇತ್ರಗಳಿಗೆ, ಮೇ 25ರಂದು 6ನೇ ಹಂತದಲ್ಲಿ 58 ಕ್ಷೇತ್ರಗಳಿಗೆ ಮತ್ತು ಜೂನ್ 1ರಂದು 7ನೇ ಹಂತದ 57 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಇದರ ಜೊತೆಗೆ 26 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯೂ ಸಹ ನಡೆದಿದ್ದು, ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದೆ.











Click it and Unblock the Notifications