ABP-CVoter survey: ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ- ಕಾಂಗ್ರೆಸ್ ಪೈಪೋಟಿ, ಕಲ್ಯಾಣ ಕರ್ನಾಟಕದಲ್ಲಿ 'ಕೈ'ಗೆ ಜೈ!
ಬೆಂಗಳೂರು, ಮೇ. 07: ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ. ಮತದಾನಕ್ಕೆ ಮೂರು ದಿನಗಳಿರುವಾಗ ಎಬಿಪಿ ನ್ಯೂಸ್ - ಸಿವೋಟರ್ ಸಮೀಕ್ಷೆ ಹೊರ ಬಂದಿದ್ದು, ಕಾಂಗ್ರೆಸ್‌ಗೆ ಬಹುಮತದ ಭವಿಷ್ಯ ನುಡಿದಿದೆ. ಇದರಿಂದ ಒಮ್ಮೆ ಆಡಳಿತ ನಡೆಸಿದ ಪಕ್ಷ ಮತ್ತೆ ಆಡಳಿತಕ್ಕೆ ಬರದು ಎಂಬ ಕರ್ನಾಟಕದ ಇತಿಹಾಸ ನಿಜವಾಗಲಿದೆ ಎಂದಿದೆ.
ಎಬಿಪಿ ನ್ಯೂಸ್ - ಸಿವೋಟರ್ ಸಹಯೋಗದೊಂದಿಗೆ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಭಾನುವಾರ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ ವಿಧಾನಸಭೆಯ ಒಟ್ಟು 224 ಸ್ಥಾನಗಳಲ್ಲಿ ಎಬಿಪಿ-ಸಿವೋಟರ್ ಸಮೀಕ್ಷೆಯ ಫಲಿತಾಂಶದ ಪ್ರಕಾರ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 73 ರಿಂದ 85 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆಯಿದೆ ಎಂದು ಹೇಳಿದೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದ ಪ್ರತಿಪಕ್ಷ ಕಾಂಗ್ರೆಸ್ 110 ರಿಂದ 122 ಸ್ಥಾನಗಳನ್ನು ಮತ್ತು ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ 21 ರಿಂದ 29 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದಿದೆ. ಇತರ ಪಕ್ಷಗಳು ಎರಡರಿಂದ ಆರು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಸಮೀಕ್ಷೆಯ ವರದಿ ಹೇಳಿದೆ.
224 ಸದಸ್ಯರ ಕರ್ನಾಟಕ ವಿಧಾನಸಭೆಯಲ್ಲಿ ಪ್ರಸ್ತುತ ಬಿಜೆಪಿ 119 ಸ್ಥಾನಗಳನ್ನು ಹೊಂದಿದೆ, ಕಾಂಗ್ರೆಸ್ 75 ಸ್ಥಾನಗಳನ್ನು ಹೊಂದಿದ್ದು, ಜೆಡಿಎಸ್ 28 ಶಾಸಕರನ್ನು ಹೊಂದಿದೆ. ಎರಡು ಸ್ಥಾನಗಳು ಖಾಲಿ ಉಳಿದಿವೆ. ರಾಜ್ಯದಲ್ಲಿ ಇದೇ ತಿಂಗಳ 10 ರಂದು ಚುನಾವಣೆ ನಡೆಯಲಿದ್ದು, ಮತದಾನ ಮುಗಿದು ಮೂರು ದಿನಗಳಲ್ಲಿ ಅಂದರೆ ಮೇ 13 ರಂದು ಫಲಿತಾಂಶ ಹೊರಬೀಳಲಿದೆ.
ಪ್ರದೇಶವಾರು ಸಮೀಕ್ಷೆಯ ಫಲಿತಾಂಶ ಪ್ರಕಟಿಸಿರುವ ಎಬಿಪಿ ನ್ಯೂಸ್ - ಸಿವೋಟರ್ ಸಮೀಕ್ಷೆಯು ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಆದರೆ, ಬಿಜೆಪಿ ಭಾರಿ ಪೈಪೋಟಿ ನೀಡಲಿದೆ ಎಂದು ಭವಿಷ್ಯ ನುಡಿದಿದೆ. ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ಕಾಲು ಸ್ಥಾನಗಳನ್ನು ತನ್ನತ್ತ ಸೆಳೆದುಕೊಳ್ಳಲಿದೆ ಎಂದು ಹೇಳಿದೆ.
ಕಿತ್ತೂರು ಕರ್ನಾಟಕ
50 ಸ್ಥಾನಗಳನ್ನು ಹೊಂದಿರುವ ಕಿತ್ತೂರು ಕರ್ನಾಟಕ (ಮುಂಬೈ ಕರ್ನಾಟಕ) ಪ್ರದೇಶದಲ್ಲಿ, ಎಬಿಪಿ-ಸಿವೋಟರ್ ಸಮೀಕ್ಷೆಯ ಫಲಿತಾಂಶಗಳ ಪ್ರಕಾರ ಬಿಜೆಪಿ 22 ರಿಂದ 26 ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್ 24 ರಿಂದ 28 ಸ್ಥಾನಗಳನ್ನು ಅಂದರೆ ಅರ್ಧಕ್ಕಿಂತ ಹೆಚ್ಚು ಸ್ಥಾನಗಳನ್ನು ಬಾಚಿಕೊಳ್ಳಲಿದೆ. ಜೆಡಿಎಸ್ ಒಂದು, ಇತರರು ಒಂದು ಕ್ಷೇತ್ರವನ್ನು ಗೆಲ್ಲಬಹುದು.
ಮತಹಂಚಿಕೆ ನೋಡುವುದಾದರೇ, ಬಿಜೆಪಿ 42%, ಕಾಂಗ್ರೆಸ್ 43% ಮತ್ತು ಜೆಡಿ ಎಸ್ ಮತ್ತು ಇತರ ಪಕ್ಷಗಳು ಕ್ರಮವಾಗಿ 7% ಮತ್ತು 8% ರಷ್ಟು ಮತಗಳನ್ನು ಪಡೆಯಲಿವೆ ಎಂದಿದೆ.
ಕಲ್ಯಾಣ ಕರ್ನಾಟಕ
31 ಸ್ಥಾನಗಳಿರುವ ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದಲ್ಲಿ ಪ್ರತಿಪಕ್ಷ ಕಾಂಗ್ರೆಸ್ 24 ರಿಂದ 28 ಕ್ಷೇತ್ರಗಳಲ್ಲಿ ಪತಾಕೆ ಹಾಲಿಸಲಿದೆ. ಅಂದರೆ ಮೂಕ್ಕಾಲು ಭಾಗ ಕಾಂಗ್ರೆಸ್ ಮಯವಾಗಲಿದೆ. ಆಡಳಿತರೂಢ ಬಿಜೆಪಿ 6 ರಿಂದ 10 ಸ್ಥಾನಗಳಲ್ಲಿ ಜಯಗಳಿಸಬಹುದು. ಪ್ರಾದೇಶಿಕ ಪಕ್ಷ ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಬಹುದು. ಆದರೆ, ಇತರೆ ಪಕ್ಷಗಳು ಮೂರು ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.
ಮತಗಳನ್ನು ನೋಡುವುದಾದರೇ ಬಿಜೆಪಿ 38%, ಕಾಂಗ್ರೆಸ್ 43%, ಜೆಡಿಎಸ್ 10% ಮತ್ತು ಇತರೆ ಪಕ್ಷಗಳು 7% ಮತ ಹಂಚಿಕೆಯನ್ನು ಪಡೆಯಬಹುದು ಎಂದು ಎಬಿಪಿ-ಸಿವೋಟರ್ ಸಮೀಕ್ಷೆಯ ಫಲಿತಾಂಶ ತಿಳಿಸಿದೆ.
-
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications