ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್‌ವೈ ವಿರುದ್ಧ ಎಸಿಬಿ ಎಫ್‌ಐಆರ್, ವಿಚಾರಣೆ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಅ.22 : ಬಿ.ಎಸ್.ಯಡಿಯೂರಪ್ಪ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ. ದೂರುದಾರ ಡಾ.ಡಿ.ಅಯ್ಯಪ್ಪಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

ಯಡಿಯೂರಪ್ಪ ವಿರುದ್ಧ ಎಫ್‌ಐಆರ್, ರಾಜ್ಯಪಾಲರಿಗೆ ಬಿಜೆಪಿ ದೂರುಯಡಿಯೂರಪ್ಪ ವಿರುದ್ಧ ಎಫ್‌ಐಆರ್, ರಾಜ್ಯಪಾಲರಿಗೆ ಬಿಜೆಪಿ ದೂರು

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದರು. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದ ಅಯ್ಯಪ್ಪಗೆ ನೋಟಿಸ್ ಜಾರಿ ಮಾಡಿದರು.

ಬಿಎಸ್‌ವೈ ವಿರುದ್ಧ ಎಫ್‌ಐಆರ್ : ಹೊಸ ತಿರುವು, ಪತ್ರ ಸ್ಫೋಟ!ಬಿಎಸ್‌ವೈ ವಿರುದ್ಧ ಎಫ್‌ಐಆರ್ : ಹೊಸ ತಿರುವು, ಪತ್ರ ಸ್ಫೋಟ!

ACB FIR against BS Yeddyurappa : High Court adjourns hearing

ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಮಾಡಲು ಮೀಸಲಿಟ್ಟ ಭೂಮಿಯನ್ನು ಕಾನೂನು ಬಾಹಿರವಾಗಿ ಯಡಿಯೂರಪ್ಪ ಮಾಡಿದ್ದಾರೆ ಎಂದು ಎಸಿಬಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಎಸಿಬಿ ಯಡಿಯೂರಪ್ಪ ವಿರುದ್ಧ ಎರಡು ಎಫ್‌ಐಆರ್ ದಾಖಲು ಮಾಡಿತ್ತು.

ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ 2 ಎಫ್‌ಐಆರ್, ಏನಿದು ಪ್ರಕರಣ?ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ 2 ಎಫ್‌ಐಆರ್, ಏನಿದು ಪ್ರಕರಣ?

ಮತ್ತೊಂದು ನೋಟಿಸ್ : ಬಿ.ಎಸ್.ಯಡಿಯೂರಪ್ಪ ಅವರಿಗೆ ಎಸಿಬಿ ಮತ್ತೊಂದು ನೋಟಿಸ್ ಜಾರಿ ಮಾಡಿದ್ದು ಬುಧವಾರ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

ಶನಿವಾರ ವಿಚಾರಣೆಗೆ ಬರುವಂತೆ ಮೊದಲ ನೋಟಿಸ್ ನೀಡಲಾಗಿತ್ತು. ಅಂದು ಯಡಿಯೂರಪ್ಪ ಪರವಾಗಿ ಇಬ್ಬರು ವಕೀಲರು ಹಾಜರಾಗಿ, ವಿಚಾರಣೆಗೆ ಹಾಜರಾಗಲು ಹತ್ತು ದಿನಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು.

English summary
Karnataka High Court on August 22, 2017 adjourned the hearing of petition field Karnataka BJP president B.S. Yeddyurappa seeking quash of 2 FIR registered against him by ACB. Anti Corruption Bureau (ACB) registered FIRs against Yeddyurappa in connection with land de-notification cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X