ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸಿಬಿ ದಾಳಿ : ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಬಂಧನ

By Mahesh
|
Google Oneindia Kannada News

ಬೆಂಗಳೂರು, ಜೂನ್ 27: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಹೋಬಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಹೈನುಗಾರಿಕೆ (ಡೈರಿ ಸ್ಕೀಂ) ಸಲುವಾಗಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ನೀಡುವ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುತ್ತಾರೆ.

ಎಚ್.ವಿ ದಾಮೋದರ, ತಾಲ್ಲೂಕು ಅಭಿವೃದ್ದಿ ಅಧಿಕಾರಿ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಚಿಕ್ಕಮಗಳೂರು ರವರು ಸದರಿ ಅರ್ಜಿಯನ್ನು ಮುಂದಿನ ಕ್ರಮಕ್ಕಾಗಿ ಮಂಡಿಸಲು ಅರ್ಜಿಯೊಂದಕ್ಕೆ ₹ 1,500/- ರಂತೆ 18 ಫಲಾನುಭವಿಗಳ ಅರ್ಜಿಗೆ ಸಹಿ ಮಾಡಲು ಒಟ್ಟು ₹ 27,000/- ರೂಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.

ACB Raid in Chikkamagaluru Ajjampura Taluq Development Officer held

ದಿನಾಂಕ:26.06.2018 ರಂದು ಎಚ್.ವಿ ದಾಮೋದರ, ತಾಲ್ಲೂಕು ಅಭಿವೃದ್ದಿ ಅಧಿಕಾರಿ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಚಿಕ್ಕಮಗಳೂರು ರವರು ₹ 20,000/- ಲಂಚದ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿರುತ್ತಾರೆ. ಇವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

English summary
H.V Damodhar, Taluq Development Officer, Ambedkar Development Corporation, Chikkamagaluru held by Anti Corruption Bureau(ACB) officersDamodar had demanded a bribe of ₹ 27,000/- (₹ 1,500/- cash for an application from 18 applicants) to forward proposals to the senior Officials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X