ಎಸ್. ಮೂರ್ತಿ ನಿವಾಸ, ಫಾರ್ಮ್ ಹೌಸ್‌ ಮೇಲೆ ಎಸಿಬಿ ದಾಳಿ

ಬೆಂಗಳೂರು, ಅಕ್ಟೋಬರ್ 03 : ಅಮಾನತುಗೊಂಡಿರುವ ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್.ಮೂರ್ತಿ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದೆ. ರಾಜ್ಯದ 16
ಕಡೆಗಳಲ್ಲಿ ಇಂದು ಎಸಿಬಿ ದಾಳಿ ನಡೆದಿದೆ.

ಎಸಿಬಿ ಅಧಿಕಾರಿಗಳು ಗುರುವಾರ ಎಸ್. ಮೂರ್ತಿಯ ಸದಾಶಿವನಗರ, ಆರ್. ಟಿ. ನಗರ ನಿವಾಸ ಮತ್ತು ಕೊಡಗಿನ ಕಾಫಿ ಎಸ್ಟೇಟ್‌ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ಕಾರ್ಯ ನಡೆಸುತ್ತಿದೆ.

ACB Raid On S Murthy House Bengaluru

ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್.ಮೂರ್ತಿ ಸೇವೆಯಿಂದ ಅಮಾನತುಗೊಂಡಿದ್ದಾರೆ. ಅವರ ವಿರುದ್ಧ ಹಲವಾರು ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿತ್ತು. ಈ ಬಗ್ಗೆ ವರದಿ ಪಡೆದಿದ್ದ ಸರ್ಕಾರ ಅಮಾನತು ಮಾಡಿತ್ತು.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ದುಂದು ವೆಚ್ಚ, ಸರ್ಕಾರದ ಮಹತ್ವದ ಸೀಲ್‌ಗಳ ದುರುಪಯೋಗ ಸೇರಿದಂತೆ ವಿವಿಧ ಆರೋಪಗಳ ಹಿನ್ನಲೆಯಲ್ಲಿ ಎಸ್. ಮೂರ್ತಿ ನಿವಾಸಗಳ ಮೇಲೆ ಎಸಿಬಿ ದಾಳಿ ನಡೆದಿದೆ.

2016-17ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ದುಂದು ವೆಚ್ಚ ಮಾಡಿದ ಆರೋಪ ಎಸ್. ಮೂರ್ತಿ ಮೇಲಿದೆ. ಈ ಬಗ್ಗೆ ತನಿಖೆ ನಡೆಸಲು ಐವರು ಸದಸ್ಯರ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿ ವರದಿ ಆಧರಿಸಿ ಅವರನ್ನು ಅಮಾನತು ಮಾಡಲಾಗಿತ್ತು.

ಎಸ್. ಮೂರ್ತಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಮೂಲದ ಶೇಷಾದ್ರಿ 2017ರ ಅಕ್ಟೋಬರ್‌ನಲ್ಲಿ ಎಸಿಬಿಗೆ ದೂರು ನೀಡಿದ್ದರು. ಹಲವು ದೂರುಗಳು ಬಂದ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+