ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ಸಾಧಕರ ಹೆಸರು

|
Google Oneindia Kannada News

ಬೆಂಗಳೂರು, ಜನವರಿ 9: ರಾಜ್ಯದಲ್ಲಿರುವ ಐದು ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ಸಾಧಕರ ಹೆಸರು ಶೀಘ್ರ ಮರುನಾಮಕರಣ ಮಾಡಲಾಗುತ್ತದೆ.

ರಾಜ್ಯದ ವಿಮಾನ ನಿಲ್ದಾಣಗಳಿಗೆ ಆಯಾ ಪ್ರದೇಶದ ಐತಿಹಾಸಿಕ ಸಾಧಕರ ಹೆಸರು ಮರು ನಾಮಕರಣ ಮಾಡುವ ಕಾರ್ಯಕ್ಕೆ ಸರ್ಕಾರ ಮತ್ತೆ ಮುಂದಾಗಿದೆ.

ಕಲಬುರಗಿಯಿಂದ ವಿಮಾನ ಹಾರಾಟ ಆರಂಭಿಸಿದ ಅಲಾಯನ್ಸ್ ಏರ್ಕಲಬುರಗಿಯಿಂದ ವಿಮಾನ ಹಾರಾಟ ಆರಂಭಿಸಿದ ಅಲಾಯನ್ಸ್ ಏರ್

ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ಸಾಧಕರ ಹೆಸರನ್ನು ಸೂಚಿಸುವಂತೆ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಈ ಮೊದಲೇ ನಿರ್ದೇಶಿಸಿತ್ತು.

Achievers Name For Five Airport In The State

ಆಯಾ ಪ್ರದೇಶ ವ್ಯಾಪ್ತಿಯ ಐತಿಹಾಸಿಕ ಪ್ರಸಿದ್ಧ ಹೆಸರುಗಳನ್ನು ಗುರುತಿಸಿ ಮಾಹಿತಿ ಒದಗಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ಪತ್ರ ಬರೆದಿದ್ದಾರೆ.

ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣ ಎಂದು ಈಗಾಗಲೇ ನಾಮಕರಣ ಮಾಡಲಾಗಿದೆ. ಇನ್ನುಳಿದ ಮಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ ಹಾಗೂ ಕಲಬುರಗಿ ವಿಮಾನ ನಿಲ್ದಾಣಗಳನ್ನು ಆಯಾ ಜಿಲ್ಲೆಯ ಹೆಸರಿನಲ್ಲೇ ಕರೆಯಲಾಗುತ್ತಿದೆ.

ಕುಮಾರಸ್ವಾಮಿ ತಮ್ಮ ಸರ್ಕಾರದ ಅವಧಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹೆಸರನ್ನು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹಾಗೂ ಸಂಗೊಳ್ಳಿ ರಾಯಣ್ಣ ಹೆಸರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಬಗ್ಗೆ ನಿರ್ಧರಿಸಿದ್ದರು.

English summary
Achievers Name For Five Airport In Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X