ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಬಳ್ಳಾಪುರದಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ

|
Google Oneindia Kannada News

ಚಿಕ್ಕಬಳ್ಳಾಪುರ, ನ. 24 : ಕೆಲಸಕ್ಕೆಂದು ತೆರಳುತ್ತಿದ್ದ ಮಹಿಳೆಯ ಮೇಲೆ ಇಬ್ಬರು ಬುರ್ಖಾಧಾರಿಗಳು ಆಸಿಡ್ ಹಾಕಿರುವ ಘಟನೆ ಮಂಚೇನಹಳ್ಳಿಯಲ್ಲಿ ನಡೆದಿದೆ. ಕಣ್ಣು ಮತ್ತು ಬಲಗೈಗೆ ಗಾಯವಾಗಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೌರಿಬಿದನೂರಿನ ಮಂಚೇನಹಳ್ಳಿ ಹೋಬಳಿಯ ಹಳೇ ಬುದ್ಧಿವಂತನಹಳ್ಳಿ ಗ್ರಾಮದ ವಾಸಿ ಲಕ್ಷ್ಮಮ್ಮ (41) ಎಂಬುವವರ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಚಿಕ್ಕಬಳ್ಳಾಪುರದ ಕೊಯಿಲ್ ಕಾರ್ನರ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. [ಶಿಕ್ಷಕಿ ಮೇಲೆ ಆಸಿಡ್ ದಾಳಿ: ಭಗ್ನಪ್ರೇಮಿ ಬಂಧನ]

Acid attack

ಪ್ರತಿದಿನ ಬೆಳಗ್ಗೆ 6ಗಂಟೆಗೆ ಮಂಚೇನಹಳ್ಳಿಗೆ ಬಂದು ಅಲ್ಲಿಂದ ಬಸ್ ಮೂಲಕ ಲಕ್ಷ್ಮಮ್ಮ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದರು. ಇಂದು ಬೆಳಗ್ಗೆ ಮಂಚೇನಹಳ್ಳಿಗೆ ಬಂದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ. [ಹುಬ್ಬಳ್ಳಿ : ಮದುವೆ ತಪ್ಪಿಸಲು ಆಸಿಡ್ ಹಾಕಿದ ಭಗ್ನ ಪ್ರೇಮಿ]

ಆಸಿಡ್ ದಾಳಿಯಿಂದಾಗಿ ಲಕ್ಷ್ಮಮ್ಮ ಅವರ ಬಲಗೈ ಮತ್ತು ಕಣ್ಣಿನ ಭಾಗದಲ್ಲಿ ಸುಟ್ಟಗಾಯಗಳಾಗಿದ್ದು, ಗೌರಿಬಿದನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಎಸ್‌ಪಿ ಕೆ.ರಾಧಿಕಾ, ಮಂಚೇನಹಳ್ಳಿ ಠಾಣೆ ಎಸ್‌ಐ ಸುಂದರ್ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯಿಂದ ಮಾಹಿತಿ ಸಂಗ್ರಹಿಸಿದ್ದಾರೆ. [ಆಸಿಡ್ ದಾಳಿ ಜಾಮೀನು ರಹಿತ ಅಪರಾಧ : ಸುಪ್ರೀಂ]

ಲಕ್ಷ್ಮಮ್ಮ ಅವರ ಪತಿ ಗಂಗರಾಜು ಕೃಷಿಕರಾಗಿದ್ದು, ಮಗಳು ಪಿಯುಸಿ ಹಾಗೂ ಮಗ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆಸಿಡ್ ದಾಳಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

English summary
41 year old woman Lakshamma was attacked with acid while going to work in Manchenahalli, Chikkaballapur district. Lakshamma admitted to Gowribidanur hospital. Manchenahalli police visited the hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X