ವಸತಿ ಶಾಲೆ ಲೈಂಗಿಕ ಕಿರುಕುಳ, ವರದಿ ಕೇಳಿದ ಸಿಎಂ
ಬಿಜಾಪುರ, ಆ.22 : ಬಿಜಾಪುರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸಿಬ್ಬಂದಿಗಳನ್ನು ತಕ್ಷಣ ಬದಲಾವಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆ ಬಗ್ಗೆ ವರದಿ ಕೇಳಿದ್ದು, ಸಮಾಜ ಕಲ್ಯಾಣ ಸಚಿವರು ಸ್ಥಳಕ್ಕೆ ತೆರಳಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ವಸತಿ ಶಾಲೆಯ ಅಡುಗೆ ಸಹಾಯಕ ವಿಜಯಕುಮಾರ್ ಎಂಟಮಾನೆ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದ ನಂತರ ಜಲಸಂಪನ್ಮೂಲ ಮತ್ತು ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಗುರುವಾರ ವಸತಿ ಶಾಲೆಗೆ ಭೇಟಿ ನೀಡಿದ್ದರು. ಶಾಲೆಯ ಸಿಬ್ಬಂದಿಗಳನ್ನು ತಕ್ಷಣ ಬದಲಾವಣೆ ಮಾಡಲಾಗುತ್ತದೆ ಮತ್ತು ತಪ್ಪಿತಸ್ಥ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಕುಮಾರ್ ಮತ್ತು ಶಾಲೆಯ ವಾರ್ಡನ್ ಶೋಭಾ ಮತ್ತು ಜ್ಯೋತಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಚಿವರು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ವರದಿ ಕೇಳಲಾಗಿದೆ ಎಂದರು. [ಚೆನ್ನಮ್ಮ ಶಾಲೆಯಲ್ಲಿ ಅಡುಗೆ ಭಟ್ಟನ ಲೈಂಗಿಕ ದೌರ್ಜನ್ಯ]
ಜಿಲ್ಲೆಯ ಮಕ್ಕಳ ಸಹಾಯವಾಣಿ ಅಧಿಕಾರಿಗಳು ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ಸಾಂತ್ವನ ಹೇಳಿದ್ದಾರೆ. ಅಗತ್ಯವಾದಲ್ಲಿ ಕೌನ್ಸಿಲಿಂಗ್ ನಡೆಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಗುರುವಾರ ಹಲವು ಪೋಷಕರು ಶಾಲೆಯಿಂದ ಮಕ್ಕಳನ್ನು ವಾಪಸ್ ಕರೆದುಕೊಂಡು ಹೋಗಿರುವ ಪ್ರಕರಣಗಳು ವರದಿಯಾಗಿವೆ.
ವರದಿ ಕೇಳಿದ ಸಿಎಂ : ವಸತಿ ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು,ಈ ಬಗ್ಗೆ ವರದಿ ನೀಡುವಂತೆ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರಿಗೆ ಸೂಚನೆ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.
ಬಿಜಾಪುರದ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ ಅಡುಗೆ ಸಹಾಯಕ ವಿಜಯಕುಮಾರ್ ಶಾಲೆಯ ಸುಮಾರು 56 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬುಧವಾರ ಬೆಳಕಿಗೆ ಬಂದಿತ್ತು. ಇದನ್ನು ಖಂಡಿಸಿ ಗುರುವಾರ ಅಲಮೇಲ್ ಬಂದ್ ನಡೆಸಲಾಗಿತ್ತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications