Prajwal Revanna Case: ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣದ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು..?

ಬೆಂಗಳೂರು, ಏಪ್ರಿಲ್‌ 29: ಹಾಸನದಲ್ಲಿ ಭಾರೀ ಸದ್ದು ಮಾಡಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಕುಮಾರಸ್ವಾಮಿ, ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ.. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿದ್ದಾರೆ.

Action Against Prajwal Revanna Taken By JDS Party HD Kumaraswamy Says

ತನಿಖೆಯ ಮೂಲಕ ಎಲ್ಲಾ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗಿದೆ. ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲಿ ಎಂಬ ಅಭಿಪ್ರಾಯವನ್ನು ಪುನರುಚ್ಚರಿಸಿದ್ದಾರೆ. ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆಗೆ ಸರ್ಕಾರ ಈಗಾಗಲೇ ಎಸ್​ಐಟಿ ರಚನೆ ಮಾಡಿದೆ. ತನಿಖೆಯಿಂದ ಸತ್ಯ ಹೊರಬರಲಿ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇನ್ನೂ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆ ಎಂದು ತನಗೆ ಹೇಗೆ ಗೊತ್ತು ಎಂದು ಪ್ರಶ್ನಿಸಿದ ಹೆಚ್‌ ಡಿ ಕುಮಾರಸ್ವಾಮಿ, ಹಾಸನದಲ್ಲಿ ಚುನಾವಣೆಗೆ ಮೂರು ದಿನ ಮೊದಲು ಪೆನ್ ಡ್ರೈವ್ ಮೂಲಕ ಅಪಪ್ರಚಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+