ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking:ಉ.ಕ ಜಿಲ್ಲೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ: ಸುಧಾಕರ್

|
Google Oneindia Kannada News

ಬೆಂಗಳೂರು ಜುಲೈ 25: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್‌ ಸ್ಥಾಪನೆಗೆ ಆದಷ್ಟು ಶೀಘ್ರವೇ ಚರ್ಚಿಸಿ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.

ಸೋಮವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, "ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಅದಕ್ಕೆ ಪೂರಕವಾಗಿ ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು,"

Action for build of Super Multispeciality Hospital in Uttar kannada Sudhakar said

ಎಂದು ಅವರು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳು, ಆರೋಗ್ಯ ಸೌಲಭ್ಯ ಒದಗಿಸುವ ಕುರಿತು ಆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸುತ್ತೇನೆ. ಎಲ್ಲರಿಂದಲೂ ಮಾಹಿತಿ ಪಡೆದು ಆದಷ್ಟು ಬೇಗ ಈ ಬಗ್ಗೆ ನೀರ್ಧರಿಸಲಾಗುವುದು. ನಿರ್ಧಾರ ಅಂತಿಮಗೊಳ್ಳುತ್ತಿದ್ದಂತೆ ಕ್ರಿಯಾಯೋಜನೆ ರೂಪಿಸಿ ಕಾರ್ಯಪ್ರವೃತ್ತರಾಗಲು ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಶಿರೂರು ಟೋಲ್ ಬಳಿ ಇತ್ತೀಚೆಗೆ ಆಂಬುಲೆನ್ಸ್ ಅಪಘಾತವಾದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಕೂಗು ಹೆಚ್ಚಾಗಿದೆ. ಇದಕ್ಕೆ ರಾಜಕೀಯ ನಾಯಕರು ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಆಗಸ್ಟ್‌ 1ರಿಂದ ಜಿಲ್ಲೆಯ ಜನ ಪ್ರಧಾನಿಗಳಿಗೆ ರಕ್ತದಲ್ಲಿ ಪತ್ರ ಬರೆಯುವ ಅಭಿಯಾನ ಆರಂಭಿಸಲಿದ್ದಾರೆ.

Recommended Video

ರಣ ಮಳೆ,ಪ್ರವಾಹಕ್ಕೆ ತತ್ತರಿಸಿದ ಪಾಕಿಸ್ತಾನ: ಜನ ಜೀವನ ಅಸ್ತವ್ಯಸ್ತ | *World | OneIndia Kannada

English summary
Action for build of Super Multispeciality Hospital in Uttar kannada District soon, Health minister Dr.K. Sudhakar said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X