ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ವೆ ಪ್ರಕ್ರಿಯೆ ಇನ್ನಷ್ಟು ಆಧುನೀಕರಣಕ್ಕೆ ಕ್ರಮ: ಸಚಿವ ಆರ್.ಅಶೋಕ್

|
Google Oneindia Kannada News

ಬೆಳಗಾವಿ,ಡಿಸೆಂಬರ್ 28: ದೂರುಗಳು ಬಾರದಂತೆ, ಸರಳೀಕರಣಗೊಳಿಸುವ ಭಾಗವಾಗಿ ಸರ್ವೆ ಪ್ರಕ್ರಿಯೆಯನ್ನು ಇನ್ನಷ್ಟು ಆಧುನೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಬುಧವಾರ ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾವು ಈಗಾಗಲೇ ಸ್ವಾವಲಂಬಿ ಆಪ್ ಮಾಡಿದ್ದೇವೆ. ಭೂ-ಪರಿವರ್ತನೆ ಬಯಸುವವರು ಸ್ಕೆಚ್ ಮಾಡಿಕೊಂಡು ಆಧಾರ್ ನಂಬರ್ ಸಹಿತ ಈ ಸ್ವಾವಲಂಬಿ ಆಪ್ ಗೆ ಹಾಕಿದಲ್ಲಿ ಅದನ್ನು ಸಬ್ ರಿಜಿಸ್ಟರ್ ಕಚೇರಿಗೆ ಕಳುಹಿಸುತ್ತೇವೆ. ಇಲ್ಲಿ ತಿದ್ದುಪಡಿಗೆ ಅವಕಾಶವಿಲ್ಲ. ಈ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಆರಂಭಿಸಲು ತಿಳಿಸಿದ್ದೇವೆ. ಬಳಿಕ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪಿ ಸರ್ವೆ ತೊಂದರೆ ಇತ್ಯರ್ಥಕ್ಕೆ ಕ್ರಮ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ಪಿ ಸರ್ವೆ ನಂಬರ್ ತೊಂದರೆಯನ್ನು ಸಹ ಬೇಗ ಸರಿಪಡಿಸಲಾಗುವುದು ಎಂದು ಸಚಿವ ಆರ್.ಅಶೋಕ ಅವರು ಸದಸ್ಯರಾದ ಎಂ.ಎಲ್.ಅನೀಲ್ ಕುಮಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Action Further Modernize Survey Process R Ashok Said

ಕಾನೂನು ತೊಡಕು ಸರಿಪಡಿಸ್ತೇವೆ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅನಾದಿಕಾಲದಿಂದ ಅನುಭವಿಸಿಕೊಂಡು ಬರುತ್ತಿರುವ ಕಾನೆ, ಬಾನೆ, ಕುಮ್ಕಿ ಜಮೀನುಗಳನ್ನು ಮಂಜೂರು ಮಾಡುವ ಬಗ್ಗೆ ನೀತಿಯೊಂದನ್ನು ರೂಪಿಸಲು ಸಕಾರಾತ್ಮಕ ಧೋರಣೆ ಹೊಂದಿದೆ. ಸದ್ಯದಲ್ಲೆ ಚುನಾಯಿತ ಪ್ರತಿನಿಧಿಗಳ ಸಭೆ ಕರೆದು ಸುಧೀರ್ಘ ಚರ್ಚಿಸಿ ಇರುವ ಕಾನೂನು ತೊಡಕುಗಳನ್ನು ಸರಿಪಡಿಸಲಾಗುವುದು ಎಂದು ಸಚಿವರಾದ ಆರ್ ಅಶೋಕ ಅವರು, ಸದಸ್ಯರಾದ ಪ್ರತಾಪ್ ಸಿಂಹ್ ನಾಯಕ ಕೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಟೆಂಡರ್ ಪ್ರಕ್ರಿಯೆ ಬೇಗ ಪೂರ್ಣಗೊಳಿಸಿ ನೇಮಕಾತಿ ಪ್ರಕ್ರಿಯೆ: ಪ್ರಭು ಚವ್ಹಾಣ್

ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ಬೇಗ ಪೂರ್ಣಗೊಳಿಸಿ ಸಂಚಾರಿ ಪಶು ಚಿಕಿತ್ಸಾ ವಾಹನಗಳ ಮೂಲಕ ರೈತರ ಮನೆ ಬಾಗಿಲಿಗೆ ಅಗತ್ಯ ತುರ್ತು ಪಶುವೈದ್ಯಕೀಯ ಸೇವೆಗಳನ್ನು ಪ್ರಾರಂಭಿಸಲು ಪಶು ವಾಹನಕ್ಕೆ ಒಬ್ಬ ಪಶುವೈದ್ಯರು, ಒಬ್ಬ ಅರೆ ತಾಂತ್ರಿಕ ಸಿಬ್ಬಂದಿ ಮತ್ತು ವಾಹನ ಚಾಲಕ ಕಮ್ ಗ್ರೂಪ್ ಡಿ ಸಿಬ್ಬಂದಿಯನ್ನು ಸೇವಾ ಪೂರೈಕೆದಾರರ ಮುಖಾಂತರ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವರಾದ ಪ್ರಭು ಚವ್ಹಾಣ್ ಹೇಳಿದರು.

Action Further Modernize Survey Process R Ashok Said

ಪರಿಷತ್ತಿನಲ್ಲಿ ಎಸ್.ರವಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪಶು ಸಂಜೀವಿನಿ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಯಡಿ 15 ಆಂಬ್ಯುಲೆನ್ಸಗಳನ್ನು ಖರೀದಿಸಲಾಗಿದೆ. ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಖರೀದಿಸಲಾಗಿದೆ.

ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಪಶುವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಿಸಿಕೊಂಡು ರೈತರ ಮನೆ ಬಾಗಿಲಿಗೆ ಅಗತ್ಯ ತುರ್ತು ಸಂಚಾರಿ ಪಶು ಚಿಕಿತ್ಸಾ ಸೇವೆಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.

Action Further Modernize Survey Process R Ashok Said

ಪುಸ್ತುತ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ನಿಯಮದ ಭರ್ತಿ ಮಾಡುವ ನೇಮಕಾತಿ ಪ್ರಕ್ರಿಯೆ ಸಹ ಚಾಲ್ತಿಯಲ್ಲಿರುತ್ತದೆ. ಅದರಂತೆ, 08-03-2022 ರಂದು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯೊಂದಿಗೆ ಸಲ್ಲಿಸಿದ ಮೂಲ ದಾಖಲಾತಿಗಳನ್ನು ಪರಿಶೀಲನೆ ಮಾಡಲಾಗಿದ್ದು, ಕನ್ನಡ ಭಾಷೆ ಅಭ್ಯಾಸ ಮಾಡದ ಅಭ್ಯರ್ಥಿಗಳಿಗೆ ಕೆ.ಇ.ಎ. ಮುಖಾಂತರ ಕನ್ನಡ ಭಾಷೆ ಪರೀಕ್ಷೆ ನಡೆಸಲಾಗಿದೆ. ಅದರನ್ವಯ ಅರ್ಹತಾ ಪಟ್ಟಿ ತಯಾರಿಸಲಾಗುತ್ತಿದೆ ಎಂದು ತಿಳಿಸಿದರು

English summary
action further modernize survey process minister r ashok said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X